ರಾಮಮಂದಿರ ಉದ್ಘಾಟನೆ ದಿನ ಇನ್ನಷ್ಟು ಬೇಕೆನ್ನ ಹಾಡು ಪ್ರಸಾರ

By Kannadaprabha News  |  First Published Jan 11, 2024, 1:31 PM IST

ನಾನು ರಚಿಸಿದ ಹಾಡನ್ನು ಕನ್ನಡದಲ್ಲಿಯೇ ಪ್ರಸಾರ ಮಾಡುವ ನಿರ್ಧಾರವನ್ನು ಶ್ರೀರಾಮ ಮಂದಿರ ಟ್ರಸ್ಟ್ ತೆಗೆದುಕೊಂಡಿರುವುದು ಖುಷಿಯ ವಿಚಾರವಾಗಿದೆ ಎಂದ ಶರ್ಮ


ಭಟ್ಕಳ(ಜ.11):  ಗೀತೆ ರಚನೆಗಾರ ಡಾ.ಗಜಾನನ ಶರ್ಮ ರಚಿಸಿರುವ 'ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮಾ' ಹಾಡು ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಉದ್ಘಾಟನೆ ವೇಳೆ ಪ್ರಸಾರವಾಗಲಿದೆ. 

ಭಟ್ಕಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶರ್ಮ, ರಾಮಮಂದಿರ ಟ್ರಸ್ಟ್, ಎಕ್ಸ್ (ಟೀಟ್) ಮೂಲಕ ಖಚಿತಪಡಿಸಿದೆ. ನಾನು ರಚಿಸಿದ ಹಾಡನ್ನು ಕನ್ನಡದಲ್ಲಿಯೇ ಪ್ರಸಾರ ಮಾಡುವ ನಿರ್ಧಾರವನ್ನು ಶ್ರೀರಾಮ ಮಂದಿರ ಟ್ರಸ್ಟ್ ತೆಗೆದುಕೊಂಡಿರುವುದು ಖುಷಿಯ ವಿಚಾರವಾಗಿದೆ ಎಂದರು. 

Tap to resize

Latest Videos

undefined

ರಾಮ ಮಂದಿರ, ಹೊಸ ಸಂಸತ್, ಜಿ20; ಕಾಂಗ್ರೆಸ್ ಬಾಯ್ಕಾಟ್ ಇತಿಹಾಸ ಬಿಚ್ಚಿಟ್ಟ ಬಿಜೆಪಿ!

ನಾನು ರಾಮಚಂದ್ರಾಪುರ ಮಠದ ಶಿಷ್ಯನಾಗಿದ್ದು, ಶ್ರೀಗಳು ಚಾತುರ್ಮಾಸದ ವೇಳೆ ಒಂದು ಉತ್ತಮವಾದ ಹಾಡು ರಚಿಸಿಕೊಡುವಂತೆ ಹೇಳಿದ್ದರು. ಬಹಳ ಸಮಯವಾದರೂ ನನ್ನ ಕಾರ್ಯ ಒತ್ತಡದಿಂದಾಗಿ ಅದನ್ನು ರಚಿಸಲು ಸಾಧ್ಯವಾಗಿರಲಿಲ್ಲ. ಒಮ್ಮೆ ಕಾರ್ಯದ ನಿಮಿತ್ತ ಕೇರಳಕ್ಕೆ ಹೋದಾಗ ಅಲ್ಲಿನ ಫಲಕದಲ್ಲಿ ದಿಲ್ ಮಾಂಗೇ ಮೋರ್ ಎನ್ನುವ ತಂಪು ಪಾನೀಯದ ಜಾಹೀರಾತು ನನ್ನ ಅಂತರಂಗದ ತುಡಿತ ಹೆಚ್ಚಿಸಿತ್ತು. ಅದು ಶ್ರೀರಾಮನ ಕುರಿತು ಯಾಕಾಗಬಾರದು ಎಂದು ಅಲ್ಲಿಯೇ ಎರಡು ವಾಕ್ಯ ರಚಿಸಿ ಶ್ರೀಗಳಲ್ಲಿ ಬಂದು ಅದನ್ನು ಹೇಳಿದಾಗ ಅವರು ಒಪ್ಪಿ ಅದನ್ನೇ ಮುಂದುವರಿಸುವಂತೆ ಸೂಚಿಸಿದರು. ನಂತರ ಒಂದೊಂದೇ ವಾಕ್ಯ ರಚಿಸಿ ಹಾಡನ್ನು ರಚಿಸಿದ್ದೆ ಎಂದು ಹಾಡಿನ ರಚನೆಯ ಹಿಂದಿನ ಸೂಕ್ಷ್ಮತೆ ತಿಳಿಸಿದರು.

click me!