3 ತಿಂಗಳೊಳಗೆ ಗ್ರಂಥಾಲಯ ಸಜ್ಜುಗೊಳಿಸಲು ಸೂಚನೆ: ಸಚಿವ ವಿ.ಸೋಮಣ್ಣ

Published : Aug 25, 2022, 04:41 PM IST
3 ತಿಂಗಳೊಳಗೆ ಗ್ರಂಥಾಲಯ ಸಜ್ಜುಗೊಳಿಸಲು ಸೂಚನೆ: ಸಚಿವ ವಿ.ಸೋಮಣ್ಣ

ಸಾರಾಂಶ

ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಗ್ರಂಥಾಲಯ ಹಾಗೂ ಐ.ಎ.ಎಸ್‌, ಕೆ.ಎ.ಎಸ್‌ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ನೆರವಾಗುವ ಅಧ್ಯಯನ ಕೇಂದ್ರ ಕಟ್ಟಡ ಕಾಮಗಾರಿ ಅಕ್ಟೋಬರ್‌ನಲ್ಲಿ ಉದ್ಘಾಟಿಸಲು ಸಜ್ಜುಗೊಳಿಸುವಂತೆ ವಸತಿ ಸಚಿವ ಹಾಗೂ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಚಾಮರಾಜನಗರ (ಆ.25): ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಗ್ರಂಥಾಲಯ ಹಾಗೂ ಐ.ಎ.ಎಸ್‌, ಕೆ.ಎ.ಎಸ್‌ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ನೆರವಾಗುವ ಅಧ್ಯಯನ ಕೇಂದ್ರ ಕಟ್ಟಡ ಕಾಮಗಾರಿ ಅಕ್ಟೋಬರ್‌ನಲ್ಲಿ ಉದ್ಘಾಟಿಸಲು ಸಜ್ಜುಗೊಳಿಸುವಂತೆ ವಸತಿ ಸಚಿವ ಹಾಗೂ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಜಿಲಾ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ ಕಟ್ಟಡದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ, ಸುಸಜ್ಜಿತ ಗ್ರಂಥಾಲಯ ಶೀಘ್ರ ಒದಗಿಸಬೇಕಿದೆ. ಐ.ಎ.ಎಸ್‌, ಕೆ.ಎ.ಎಸ್‌ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಅಭ್ಯರ್ಥಿಗಳು ಸಜ್ಜುಗೊಳ್ಳಲು ಅಧ್ಯಯನ ಕೇಂದ್ರ ಕಲ್ಪಿಸಬೇಕಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಇನ್ನಷ್ಟು ಚುರುಕುಗೊಳಿಸಬೇಕು. ವಿಳಂಬ ಮಾಡದೇ ಕಾಮಗಾರಿ ತ್ವರಿತವಾಗಿ ಕೈಗೊಂಡು ಅಕ್ಟೋಬರ್‌ ವೇಳೆಗೆ ಉದ್ಘಾಟನೆಗೆ ಸಿದ್ದಪಡಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು. ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದ ಕಟ್ಟಡಕ್ಕೆ ಸಿದ್ದಪಡಿಸಲಾಗಿರುವ ಅಂದಾಜು ಪಟ್ಟಿಮತ್ತು ನೀಲ ನಕ್ಷೆಗೆ ಅನುಗುಣವಾಗಿ ಕೊಠಡಿಗಳು ನಿರ್ಮಾಣವಾಗಬೇಕು. 

ಚಾಮರಾಜನಗರದಲ್ಲಿ ಹುಲಿ ಹಾಗೂ ಆನೆ ಕಾಟದಿಂದ ಹೈರಾಣಾದ ರೈತರು

ಓದುಗರ ವಿಭಾಗ, ಮಕ್ಕಳ ವಿಭಾಗ, ಮಹಿಳೆಯರಿಗೆ ಸೇರಿದಂತೆ ಪ್ರತ್ಯೇಕ ಕಂಪ್ಯೂಟರ್‌ ವಿಭಾಗಗಳೂ ಸಹ ಇರಬೇಕು. ಐ.ಎ.ಎಸ್‌. ಕೆ.ಎ.ಎಸ್‌ ನಂತಹ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಅನುಕೂಲವಾಗುವಂತಹ ವಿಶಾಲ ಕೊಠಡಿಗಳ ಸೌಲಭ್ಯ ಕಲ್ಪಿಸಬೇಕು. ಅಲ್ಲದೇ ಸಭಾಂಗಣ ಲಿಫ್‌್ಟ ಇತರೆ ಕೆಲಸಗಳೂ ಸಹ ಕೈಗೊಳ್ಳಬೇಕೆಂದು ಸಚಿವರು ನಿರ್ದೇಶನ ನೀಡಿದರು. ಗ್ರಂಥಾಲಯ ಆವರಣದಲ್ಲಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳವಕಾಶ ಇರಬೇಕು. ಕುಡಿವ ನೀರು ಸೌಲಭ್ಯ ಸಮರ್ಪಕವಾಗಿ ಇರುವಂತೆ ಈಗಿನಿಂದಲೇ ಅವಶ್ಯಕ ಕಾಮಗಾರಿ ನಿರ್ವಹಿಸಬೇಕು. ಸುಸಜ್ಜಿತ ಗ್ರಂಥಾಲಯಕ್ಕೆ ಏನೇನು ಅಗತ್ಯ ಬೀಳಲಿದೆಯೋ ಆ ಎಲ್ಲವನ್ನು ಪೂರೈಸುವ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.

ಯಾವುದೇ ಕೆಲಸ ಲೋಪವಾಗುವುದನ್ನು ಸಹಿಸಲಾಗುವುದಿಲ್ಲ. ಪ್ರತಿಯೊಂದು ವಿಭಾಗಗಳ ಕಾಮಗಾರಿ ಅಚ್ಚುಕಟ್ಟಾಗಿ ಪರಿಪೂರ್ಣವಾಗಬೇಕು. ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಸೂಚಿಸಲಾಗಿರುವ ಅವಧಿಯೊಳಗೆ ಕಾಮಗಾರಿ ನಿರ್ವಹಿಸಿ ಸಂಪೂರ್ಣ ಸುಸಜ್ಜಿತ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ ಸೇವೆಗೆ ಲೊಕಾರ್ಪಣೆ ಮಾಡಲು ಅವಶ್ಯಕ ಪ್ರಕ್ರಿಯೆಯನ್ನು ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಿಜೆಪಿ ರಾಜಕೀಯ ಸಂಸ್ಕೃತಿಯ ಚಿತ್ರಣವನ್ನೇ ಬದಲಿಸಿದೆ: ಶಾಸಕ ಎನ್‌.ಮಹೇಶ್‌

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ. ಸತೀಶ್‌ಕುಮಾರ್‌ ಹೊಸಮನಿ, ಜಿಲ್ಲಾ ಗ್ರಂಥಾಲಯ ಅಧಿಕಾರಿ ಆರ್‌. ಶಿವಸ್ವಾಮಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಇಬ್ರಾಹಿಂ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಕಾರ್ಯಪಾಲಕ ಎಂಜಿನಿಯರ್‌ ವರದರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ವಿನಯ್‌ಕುಮಾರ್‌, ನಗರಸಭೆಯ ಪೌರಾಯುಕ್ತರಾದ ನಟರಾಜು, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

PREV
Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!