ಮಹಾ ವಿಧಾನ ಪರಿಷತ್ತಿನಲ್ಲಿ ಸಿಎಂ ಬೊಮ್ಮಾಯಿಗೆ ಅವಮಾನ

By Kannadaprabha News  |  First Published Mar 24, 2023, 10:00 PM IST

ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಮನಿಷಾ, ಗಡಿ ಗ್ರಾಮಗಳಲ್ಲಿನ ಜನತೆಗೆ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಕ್ರಮವನ್ನು ಮಹಾರಾಷ್ಟ್ರ ಸಿಎಂ ಬಸವರಾಜ ಬೊಮ್ಮಾಯಿ ವಿರೋಧಿಸಿದ್ದಾರೆ. ಗಡಿಭಾಗದಲ್ಲಿ ಕರ್ನಾಟಕ ಸಿಎಂ ದಾದಾಗಿರಿ ಹೆಚ್ಚಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಒಂದೇ ಪಕ್ಷದ ಸರ್ಕಾರವಿದೆ. ಗಡಿಭಾಗದಲ್ಲಿ ಮರಾಠಿ ಭಾಷಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಮರಾಠಿ ಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ಮರಾಠಿ ಮಾತನಾಡುವುದಕ್ಕೂ ನಿರ್ಬಂಧ ಹೇರಲಾಗುತ್ತಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ.

ಬೆಳಗಾವಿ(ಮಾ.24): ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಗ್ರಾಮಗಳಲ್ಲಿನ ಮರಾಠಿ ಭಾಷಿಕರ ಮೇಲೆ ಕರ್ನಾಟಕ ಮುಖ್ಯಮಂತ್ರಿ ದಾದಾಗಿರಿ ಮಾಡುತ್ತಿದ್ದಾರೆ ಎಂದು ಶಾಸಕಿ ಮನಿಷಾ ಆರೋಪಿಸುವ ಮೂಲಕ ಕಾಲು ಕೆದರಿ ಮತ್ತೆ ಗಡಿ ವಿವಾದ ಕೆದಕಿ ಉದ್ಧಟತನ ಮೆರೆದಿದ್ದಾರೆ. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಮನಿಷಾ, ಗಡಿ ಗ್ರಾಮಗಳಲ್ಲಿನ ಜನತೆಗೆ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಕ್ರಮವನ್ನು ಮಹಾರಾಷ್ಟ್ರ ಸಿಎಂ ಬಸವರಾಜ ಬೊಮ್ಮಾಯಿ ವಿರೋಧಿಸಿದ್ದಾರೆ. ಗಡಿಭಾಗದಲ್ಲಿ ಕರ್ನಾಟಕ ಸಿಎಂ ದಾದಾಗಿರಿ ಹೆಚ್ಚಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಒಂದೇ ಪಕ್ಷದ ಸರ್ಕಾರವಿದೆ. ಗಡಿಭಾಗದಲ್ಲಿ ಮರಾಠಿ ಭಾಷಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಮರಾಠಿ ಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ಮರಾಠಿ ಮಾತನಾಡುವುದಕ್ಕೂ ನಿರ್ಬಂಧ ಹೇರಲಾಗುತ್ತಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ.

Latest Videos

undefined

ಬಾಯಿಗೆ ಬಂದಂತೆ ಮಾತನಾಡುವ ಪ್ರವೃತ್ತಿಗೆ ಎಚ್ಚರಿಕೆಯ ಗಂಟೆ: ಪ್ರತಾಪ್‌ ಸಿಂಹ

ನಮ್ಮ ಸರ್ಕಾರ ಗಡಿಭಾಗದ ಜನತೆಯ ಆರೋಗ್ಯದ ಚಿಂತನೆ ನಡೆಸುತ್ತಿದೆ. ಗಡಿ ವಿವಾದ ಸುಪ್ರೀಂಕೋರ್ಚ್‌ನಲ್ಲಿದೆ. ಆರೋಗ್ಯಕ್ಕಾಗಿ ನಮ್ಮ ಜನತೆಗೆ ನಿಧಿ ಕೊಟ್ಟಿದ್ದೇವೆ. ಆದರೆ, ಕರ್ನಾಟಕ ಸರ್ಕಾರ ಭಾಷಾ ರಾಜಕೀಯ ಮಾಡುತ್ತಿದೆ. ಹಾಗಾಗಿ, ಕರ್ನಾಟಕ ಸಿಎಂಗೆ ನಾವು ಪ್ರತ್ಯುತ್ತರ ನೀಡಲೇಬೇಕು ಎಂದು ಒತ್ತಾಯಿಸಿದರು.

ಮಹಾರಾಷ್ಟ್ರ ನಡೆ ಖಂಡಿಸಿದ ಚಂದರಗಿ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿಯನ್ನು ಅವಮಾನಿಸುವಂತಹ ಘಟನೆ ನಡೆಯುತ್ತಿರುವುದು ಖಂಡನೀಯ ಎಂದು ಬೆಳಗಾವಿ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.
ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಸುಪ್ರೀಂ ಕೋರ್ಚ್‌ನಲ್ಲಿದೆ. ಹಾಗಾಗಿ, ಈ ಬಗ್ಗೆ ಉಭಯ ರಾಜ್ಯಗಳು ಗಡಿ ವಿವಾದ ಕೆದಕಬಾರದು ಎಂದು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉಭಯ ರಾಜ್ಯಗಳಿಗೆ ಎಚ್ಚರಿಕೆ ಕೊಟ್ಟಿದ್ದರು. ಆದಾಗ್ಯೂ ಮಹಾರಾಷ್ಟ್ರ ಪದೇ ಪದೆ ಗಡಿ ವಿವಾದ ಕೆದಕುತ್ತಿದೆ. ಮಹಾರಾಷ್ಟ್ರ ಸರ್ಕಾರ ಅನಗತ್ಯವಾಗಿ ಗಡಿಭಾಗದ 865 ಹಳ್ಳಿಗಳ ಜನತೆಗೆ ಆರೋಗ್ಯ ಯೋಜನೆಗೆ .54 ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಇದನ್ನು ಸಹಜವಾಗಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ಷೇಪಿಸಿದ್ದಾರೆ. ಇದನ್ನು ಖಂಡಿಸಿ ಶಾಸಕಿ ಮನಿಷಾ ಕರ್ನಾಟಕ ಸಿಎಂ ದಾದಾಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವುದು ಖಂಡನೀಯ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ಅವರ ಕನ್ನಡ ನಾಡು, ನುಡಿ, ಗಡಿ, ಜಲದ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದಾರೆ. ಮಹಾರಾಷ್ಟ್ರದ ಈ ನಡೆಯ ಕುರಿತು ಕೇಂದ್ರ ಗೃಹಸಚಿವರ ಗಮನಕ್ಕೆ ತರಬೇಕು. ಮಹಾರಾಷ್ಟ್ರ ಸರ್ಕಾರಕ್ಕೆ ಛೀಮಾರಿ ಹಾಕುವ ಕೆಲಸ ಮಾಡಬೇಕು ಅಂತ ಬೆಳಗಾವಿ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ. 

click me!