ಸಂಡೂರಿನ ಐತಿಹಾಸಿಕ ಶ್ರೀ ಕುಮಾರಸ್ವಾಮಿ ದೇವಸ್ಥಾನದ ಸುತ್ತಮುತ್ತ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಸಿಎಂ ಯಡಿಯೂರಪ್ಪ ಮಾತು ಕೊಟ್ಟಿದ್ದರು| ಹೀಗಾಗಿ ಕೊಟ್ಟ ಮಾತಿನಂತೆ ದೇವಾಲಯದ ಸುತ್ತ ಗಣಿಗಾರಿಕೆ ನಿಷೇಧ ಮಾಡಿ| ಇಲ್ಲವಾದರೆ ಅಧಿಕಾರ ಕಳೆದುಕೊಳ್ಳುತ್ತಿರಾ ಎಂದು ಹೋರಾಟಗಾರು ಸಿಎಂಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ|
ಬಳ್ಳಾರಿ(ನ.24): ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಂಟಕ ಎದುರಾಗುತ್ತಾ? ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ದೇವಾಲಯದ ವಿಚಾರದಲ್ಲಿ ಕೊಟ್ಟ ಮಾತು ಉಳಿಸಿ ಕೊಳ್ಳದೇ ಇದ್ರೇ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ.
ಜಿಲ್ಲೆಯ ಸಂಡೂರಿನ ಐತಿಹಾಸಿಕ ಶ್ರೀ ಕುಮಾರಸ್ವಾಮಿ ದೇವಸ್ಥಾನದ ಸುತ್ತಮುತ್ತ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಸಿಎಂ ಯಡಿಯೂರಪ್ಪ ಅವರು ಮಾತು ಕೊಟ್ಟಿದ್ದರು. ಹೀಗಾಗಿ ಕೊಟ್ಟ ಮಾತಿನಂತೆ ದೇವಾಲಯದ ಸುತ್ತ ಗಣಿಗಾರಿಕೆ ನಿಷೇಧ ಮಾಡಿ, ಇಲ್ಲವಾದರೆ ಅಧಿಕಾರ ಕಳೆದುಕೊಳ್ಳುತ್ತಿರಾ ಎಂದು ಹೋರಾಟಗಾರು ಸಿಎಂಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.
ಸದ್ಯ ದೇವಾಲಯದ ಸುತ್ತಮುತ್ತ 500 ಮೀಟರ್ ಒಳಗಡೆ ಗಣಿಗಾರಿಕೆ ಅವಕಾಶವಿದೆ. ದೇವಾಲಯದ ಸುತ್ತುಮುತ್ತ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಷೇಧಿಸಿ ಇಲ್ಲವಾದರೆ ಅಧಿಕಾರ ಕಳೆದುಕೊಳ್ಳುತ್ತೀರಿ ಎಂದು ಹೋರಾಟಗಾರರು ಮನವಿ ಮಾಡಿಕೊಂಡಿದ್ದಾರೆ.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಹಿಂದೆ ಹೆಚ್. ಡಿ. ಕುಮಾರಸ್ವಾಮಿ ಅವರು ಕೊಟ್ಟ ಮಾತು ಉಳಿಸಿಕೊಳ್ಳದೇ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಹೀಗಾಗಿ ತಾವೂ ಈ ಕೂಡಲೇ ಆದೇಶ ಹೊರಡಿಸಿ, ಅಧಿಕಾರ ಉಳಿಯುತ್ತದೆ ಇಲ್ಲವಾದ್ರೇ ನೀವು ಅಧಿಕಾರ ಕಳೆದುಕೊಳ್ಳುತ್ತೀರಾ ಎಂದು ಎಂದು ಹೋರಾಟಗಾರರು ಹೇಳಿದ್ದಾರೆ.