ಜಿಲ್ಲೆಯ ಶಿಡ್ಲಘಟ್ಟವಿಧಾನಸಭಾ ಕ್ಷೇತ್ರದ ಚುನಾವಣಾ ರಾಜಕೀಯ ಇತಿಹಾಸದದಲ್ಲಿ ಈ ವರೆಗೆ ಹೊರಗಿನ ಯಾರನ್ನು ಕೂಡ ಶಾಸಕರನ್ನಾಗಿ ಆಯ್ಕೆ ಮಾಡಿಲ್ಲ ಎನ್ನುವುದು ಕ್ಷೇತ್ರದ ವಿಶೇಷ. ರಾಜ್ಯ ವಿಧಾನ ಸಭೆಗೆ ಚುನಾವಣೆ ಇನ್ನೂ 6 ತಿಂಗಳು ಇರುವಾಗಲೇ ತಾಲೂಕಿನ ಚುನಾವಣಾ ಕಾವು ಗರಿಗೆದರಿದ್ದು ಟಿಕೆಟ್‌ಗಾಗಿ ನಾಯಕರ ನಡುವೆ ಪೂಪೋಟಿ ಶುರುವಾಗಿದೆ.
ರೂಪಸಿ ರಮೇಶ್
ಶಿಡ್ಲಘಟ್ಟ (ಡಿ.10): ಜಿಲ್ಲೆಯ ಶಿಡ್ಲಘಟ್ಟವಿಧಾನಸಭಾ ಕ್ಷೇತ್ರದ ಚುನಾವಣಾ ರಾಜಕೀಯ ಇತಿಹಾಸದದಲ್ಲಿ ಈ ವರೆಗೆ ಹೊರಗಿನ ಯಾರನ್ನು ಕೂಡ ಶಾಸಕರನ್ನಾಗಿ ಆಯ್ಕೆ ಮಾಡಿಲ್ಲ ಎನ್ನುವುದು ಕ್ಷೇತ್ರದ ವಿಶೇಷ. ರಾಜ್ಯ ವಿಧಾನ ಸಭೆಗೆ ಚುನಾವಣೆ ಇನ್ನೂ 6 ತಿಂಗಳು ಇರುವಾಗಲೇ ತಾಲೂಕಿನ ಚುನಾವಣಾ ಕಾವು ಗರಿಗೆದರಿದ್ದು ಟಿಕೆಟ್‌ಗಾಗಿ ನಾಯಕರ ನಡುವೆ ಪೂಪೋಟಿ ಶುರುವಾಗಿದೆ.
ಹೇಳಿ ಕೇಳಿ ಶಿಡ್ಲಘಟ್ಟತಾಲೂಕು ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಯಾಗಿದ್ದು 10ಕ್ಕೂ ಅಧಿಕ ಬಾರಿ ಕಾಂಗ್ರೆಸ್ ಪಕ್ಷ ಗೆದ್ದು ತನ್ನ ಪ್ರಾಬಲ್ಯ ಮೆರೆದಿದೆ. ಹಾಲಿ ಶಾಸಕ ವಿ ಮುನಿಯಪ್ಪ 1989 ರಿಂದ ಸತತವಾಗಿ 1999 ರ ವರೆಗೆ ಗೆದ್ದು ಹ್ಯಾಟ್ರಿಕ್ ಹೀರೋ ಆಗಿದ್ದಾರೆ. 6 ಬಾರಿ ಶಾಸಕರಾಗಿ 2 ಬಾರಿ ಮಂತ್ರಿ ಗಳಾಗಿದ್ದು ದಾಖಲೆ ನಿರ್ಮಿಸಿದ್ದಾರೆ. ಜೆಡಿಎಸ್ 2, ಜನತಾ ಪಕ್ಷ 1, ಇಂದಿರಾ ಕಾಂಗ್ರೆಸ್ ಒಮ್ಮೆ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದೆ.
ದಳಕ್ಕೆ ಮೇಲೂರು ರವಿ:
ಕಳೆದ ಬಾರಿ ಕೊನೆ ಕ್ಷಣದಲ್ಲಿ ಬಿ.ಫಾರಂ ಕೈ ತಪ್ಪಿದರೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್‌ನ ವಿ.ಮುನಿಯಪ್ಪ ವಿರುದ್ದ ವಿರುದ್ದ ಅಲ್ಪಮತಗಳ ಅಂತರದಿಂದ ಸೋತಿದ್ದ ಮೇಲೂರು ರವಿಕುಮಾರ್‌ಗೆ ಈ ಬಾರಿ ಜೆಡಿಎಸ್ ಎಚ್ಚರಿಕೆ ಹೆಜ್ಜೆ ಇಟ್ಟು ಟಿಕೆಟ್ ಘೋಷಿಸಿದೆ. ಇಡೀ ಜಿಲ್ಲೆಯಲ್ಲಿ ಪಂಚರತ್ನರಥಯಾತ್ರೆಗೆ ಭಾರೀ ಸಂಖ್ಯೆಯ ಜನಸ್ತೋಮವನ್ನು ಸೇರಿಸಿ ಮೇಲೂರು ರವಿಕುಮಾರ್ ಚುನಾವಣೆಗೂ ಮುನ್ನ ತಮ್ಮ ಶಕ್ತಿ ಪ್ರದರ್ಶನ ನೀಡಿದ್ದಾರೆ.
ಕಾಂಗ್ರೆಸ್‌ನಲ್ಲಿ ಟಿಕೆಟ್ ಗೊಂದಲ
ಕಾಂಗ್ರೆಸ್ ಶಾಸಕ ವಿ. ಮುನಿಯಪ್ಪ ಗೊಂದಲದಲ್ಲಿದ್ದು, ತಮ್ಮ ಮಗ ಶಶಿಧರ್æಗೆ ಟಿಕೆಟ್ ಕೊಡಿಸಲು ಪ್ರಯತ್ನದಲ್ಲಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ 10 ಸಾವಿರ ಮತಗಳಿಸಿದ್ದ ಪುಟ್ಟು ಆಂಜಿನಪ್ಪ ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿ ಯಾಗಿದ್ದು ಕೃಷ್ಣ ಭೈರೇಗೌಡರ ಸಂಪರ್ಕದಲ್ಲಿದ್ದಾರೆ. ಮತ್ತೊಬ್ಬ ಪ್ರಬಲ ಆಕಾಂಕ್ಷಿ ರಾಜೀವ್ ಗೌಡ ಕೋವಿಡ್ ಸಮಯದಲ್ಲಿ ಸಮಾಜ ಸೇವೆಗೆಂದು ಬಂದವರು ಈಗ ಇಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ನಿಕಟ ಸಂಪರ್ಕದಲ್ಲಿದ್ದಾರೆ. ಇತ್ತೀಚೆಗೆ ಅಷ್ಟೇ ತಾಲೂಕಿನ ದೊಗರಗಾನ ಹಳ್ಳಿ ಯ ವೆಂಕಟೇಶ್ ಎಂಬುವವರು ಟಿಕೆಟ್ ಆಕಾಂಕ್ಷೆ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಕೈ ಟಿಕೆಟ್ ವಿಚಾರದಲ್ಲಿ ಯಾರ ಪರ ಬ್ಯಾಟಿಂಗ್ ನಡೆಸುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ಟಿಕೆಟ್‌ಗೆ ರಾಜಣ್ಣ ಪ್ರಯತ್ನ
ಬಿಜೆಪಿ (BJP) ಅಭ್ಯರ್ಥಿಯಾಗಿ ಈವರೆಗೆ ಯಾರನ್ನೂ ಹೆಸರಿಸಿಲ್ಲ. ಇದರಿಂದ ನಿಷ್ಠಾವಂತ ಕಾರ್ಯಕರ್ತರು ನಿರಾಸೆ ಗೊಂಡಿದ್ದಾರೆ. ಜೆಡಿಎಸ್‌ನಲ್ಲಿದ್ದ ಮಾಜಿ ಶಾಸಕ ಎಂ.ರಾಜಣ್ಣ ಈಗ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಈ ವರೆಗೂ ಪಕ್ಷ ಯಾವುದೇ ಆಶ್ವಾಸನೆ ನೀಡಿಲ್ಲ.
Congress Ticket ಕಾದಾಟ
ಬಳ್ಳಾರಿ(ಡಿ.10): 1999ರಲ್ಲಿ ಸೋನಿಯಾ ಗಾಂಧಿ ಹಾಗೂ ಸುಷ್ಮಾ ಸ್ವರಾಜ್ ನಡುವಿನ ಸ್ಪರ್ಧೆಯಿಂದಾಗಿ ರಾಷ್ಟ್ರದ ಗಮನ ಸೆಳೆದಿದ್ದ ಬಳ್ಳಾರಿ ಜಿಲ್ಲೆ ಗಣಿದಣಿಗಳ ರಾಜಕಾರಣಕ್ಕೆ ಹೆಸರುವಾಸಿ. ಒಂದು ಕಾಲದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗುತ್ತಿದ್ದ ಬಳ್ಳಾರಿಯಲ್ಲಿ ಜೆಡಿಎಸ್ ನಿಧಾನವಾಗಿ ಮೂಲೆಗೆ ಸರಿದು ಅದರ ಜಾಗವನ್ನು ಬಿಜೆಪಿ ಆಕ್ರಮಿಸಿಕೊಂಡಿದೆ.
Assembly election: ಪಿಟಿಪಿ ಹ್ಯಾಟ್ರಿಕ್ ಕನಸಿಗೆ ಬ್ರೇಕ್ ಹಾಕುವದೇ ಕಮಲ?
ಜಿಲ್ಲೆಯಲ್ಲಿ ಜೆಡಿಎಸ್ ಸಂಘಟನಾತ್ಮಕವಾಗಿ ಸೊರಗಿದೆ. ಗಣಿ ಧಣಿ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಿಂದಾಗಿ ಜಿಲ್ಲೆಯಲ್ಲೀಗ ಬಿಜೆಪಿ ಸಂಘಟನಾತ್ಮಕವಾಗಿ ಬಲಿಷ್ಠವಾಗಿದೆ. ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಬಳ್ಳಾರಿ ನಗರ ಹೊರತುಪಡಿಸಿ ಉಳಿದವು ಪರಿಶಿಷ್ಟಪಂಗಡಕ್ಕೆ ಮೀಸಲಾಗಿವೆ. ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಶಾಸಕರಾಗಿದ್ದಾರೆ. ಬಿಜೆಪಿಯಲ್ಲಿ ಸಚಿವ ಬಿ. ಶ್ರೀರಾಮುಲು, ಶಾಸಕ ಜಿ. ಸೋಮಶೇಖರ ರೆಡ್ಡಿ ವರ್ಚಸ್ಸಿನ ನಾಯಕರು ಎನಿಸಿಕೊಂಡಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಎಂಎಲ್‌ಸಿ ಕೆ.ಸಿ.ಕೊಂಡಯ್ಯ, ಮಾಜಿ ಸಚಿವ ಎಂ.ದಿವಾಕರಬಾಬು, ಗ್ರಾಮೀಣ ಶಾಸಕ ನಾಗೇಂದ್ರ ಪ್ರಮುಖ ರಾಜಕೀಯ ನಾಯಕರು. ದಲಿತ, ವಾಲ್ಮೀಕಿ, ಲಿಂಗಾಯತ ಹಾಗೂ ಕುರುಬ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ದಲಿತ ಮತಗಳು ನಿರ್ಣಾಯಕ ಎನಿಸಿವೆ.
ಜನಾರ್ಧನ ರೆಡ್ಡಿ ರಾಜಕೀಯ ಎಂಟ್ರಿಗೆ ಭಾರಿ ಮುನ್ನಡೆ: 4 ಕೋರ್ಟ್ ಕೇಸ್ ರದ್ದು
ಬಳ್ಳಾರಿ ನಗರ ಕ್ಷೇತ್ರ: ಕಾಂಗ್ರೆಸ್‌ನಲ್ಲಿ ಟಿಕೆಟ್ ಪೈಪೋಟಿ
ಗಣಿದಣಿ ಜನಾರ್ದನ ರೆಡ್ಡಿ ಅವರ ಸೋದರ, ಬಿಜೆಪಿಯ ಜಿ.ಸೋಮಶೇಖರ ರೆಡ್ಡಿ ಬಳ್ಳಾರಿ ನಗರ ಕ್ಷೇತ್ರದ ಹಾಲಿ ಶಾಸಕರು. ಈ ಬಾರಿಯ ಚುನಾವಣೆಯಲ್ಲಿ ಈವರೆಗೆ ಸೋಮಶೇಖರ ರೆಡ್ಡಿ ಹೊರತುಪಡಿಸಿ ಬಿಜೆಪಿಯಲ್ಲಿ ಬೇರಿನ್ಯಾವ ಆಕಾಂಕ್ಷಿಗಳ ಹೆಸರೂ ಕೇಳಿ ಬರುತ್ತಿಲ್ಲ. ಹೀಗಾಗಿ ಸೋಮಶೇಖರ ರೆಡ್ಡಿ ಅವರೇ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತ. ಆದರೆ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ಪುತ್ರ ಭರತ್ ರೆಡ್ಡಿ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪನವರ ಪುತ್ರ ಅಲ್ಲಂ ಪ್ರಶಾಂತ್, ಡಿ.ಕೆ.ಶಿವಕುಮಾರ್ ಆಪ್ತ ಜೆ.ಎಸ್.ಆಂಜಿನೇಯಲು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಹ್ಮದ್ ರಫೀಕ್, ಉದ್ಯಮಿ ಸುನೀಲ್ ರಾವೂರ್ ಸೇರಿದಂತೆ 15ಕ್ಕೂ ಹೆಚ್ಚು ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಜೆಡಿಎಸ್‌ನಿಂದ ಈವರೆಗೆ ಯಾವುದೇ ಹೆಸರು ಹೊರಬಿದ್ದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ನೋಡಿಕೊಂಡು ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆ ಇದೆ