ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.
ಚಾಮರಾಜನಗರ(ಡಿ.03): 2019-2020ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗಳಿಗೆ ಸೇರಿದ ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.
ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಬೇಕಿದ್ದು, ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು, ಎಲ್ಲ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಆಧಾರ್ ಅಪ್‌ಡೇಷನ್ ಕೇಂದ್ರಗಳ ಉಸ್ತುವಾರಿಗಳು ವಿದ್ಯಾರ್ಥಿವೇತನ ಸಂಬಂಧ ವಿದ್ಯಾರ್ಥಿಗಳಿಗೆ ಸಹಕಾರ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮನವಿ ಮಾಡಿದ್ದಾರೆ.
ಮಡಿಕೇರಿ: ವಲಸೆಯಿಂದಾಗಿ ಶಾಲೆಯಿಂದ ಹೊರಗುಳಿದ ಮಕ್ಕಳು
ಹೆಚ್ಚಿನ ಮಾಹಿತಿಗಾಗಿ ನಗರದ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ. 08226-222069, ಗುಂಡ್ಲುಪೇಟೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ. 08229-297091, ಕೊಳ್ಳೆಗಾಲ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ. 08224-253141 ಹಾಗೂ ಯಳಂದೂರು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ. 08226-240221 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಮಂಗಳೂರು: ಸತ್ತು 9 ತಿಂಗಳ ನಂತರ ಸೌದಿಯಿಂದ ಬಂತು ಮೃತದೇಹ..!