ವರುಣ ಕ್ಷೇತ್ರದ ಜನತೆ ಅತ್ಯಧಿಕ ಮತ ನೀಡಿ ಗೆಲ್ಲಿಸಿದ್ದರಿಂದಾಗಿ ಸಿದ್ದರಾಮಯ್ಯ ಅವರಿಗೆ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸಿಕ್ಕಿದೆ. ವರುಣ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಂಜನಗೂಡು : ವರುಣ ಕ್ಷೇತ್ರದ ಜನತೆ ಅತ್ಯಧಿಕ ಮತ ನೀಡಿ ಗೆಲ್ಲಿಸಿದ್ದರಿಂದಾಗಿ ಸಿದ್ದರಾಮಯ್ಯ ಅವರಿಗೆ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸಿಕ್ಕಿದೆ. ವರುಣ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ತಾಲೂಕಿನ ಕೆಂಪಿಸಿದ್ದನ ಹುಂಡಿ ಗ್ರಾಪಂ ವ್ಯಾಪ್ತಿಯ ಬಸವನಪುರ, ಕೆಂಪಿಸಿದ್ದನಹುಂಡಿ, ಹೆಜ್ಜಿಗೆ, ತೊರೆಮಾವು ಗ್ರಾಮಗಳಲ್ಲಿ ಕುಂದು ಕೊರತೆ ಸಭೆ ನಡೆಸಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
undefined
ಯ ನಂತರ ಎಲ್ಲ ಗ್ರಾಮಗಳಿಗೂ ತೆರಳಿ ಮತದಾರರಿಗೆ ಕೃತಜ್ಞತೆ ಸಲ್ಲಿಸಬೇಕಿತ್ತು. ಆದರೆ ಅವರು ಕೆಲಸದ ಒತ್ತಡದಿಂದಾಗಿ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಕೃತಜ್ಞತೆ ಸಭೆ ಏರ್ಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ನನಗೆ ಯಾವುದೇ ಸಂವಿಧಾನಿಕ ಹುದ್ದೆ ಇಲ್ಲದ್ದರಿಂದಾಗಿ ನಾನೂ ಸಹ ಗ್ರಾಮಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ, ಈಗ ಆಶ್ರಯ ಸಮಿತಿ ಅಧ್ಯಕ್ಷನಾಗಿ ಸಂವಿಧಾನಿಕ ಹುದ್ದೆ ಇರುವುದರಿಂದ ಪ್ರತಿ ಗ್ರಾಮಗಳಿಗೂ ತೆರಳಿ ಕೃತಜ್ಞತೆ ಸಲ್ಲಿಸುವ ಜೊತೆಗೆ ಸಾರ್ವಜನಿಕರ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸುವ ಸಲುವಾಗಿ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಬಂದಿದ್ದೇವೆ, ನಿಮ್ಮ ಸಮಸ್ಯೆಗಳನ್ನು ಪರಿಹರಿಸುವುದು ನಮ್ಮ ಆದ್ಯ ಕರ್ತವ್ಯ ಆ ಮೂಲಕ ನಿಮ್ಮಗಳ ಋಣ ತೀರಿಸಲು ಕ್ರಮವಹಿಸುತ್ತೇನೆ ಎಂದರು.
ಬಸವನಪುರ ಗ್ರಾಮದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರಿಗೆ ಮತ್ತು ಗೊದ್ದನಪುರ ಗ್ರಾಪಂ ವ್ಯಾಪ್ತಿಯಲ್ಲಿ 300 ಜನರಿಗೆ ಅರ್ಜಿ ಸಲ್ಲಿಸಿದ್ದರೂ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದು ದೂರಿದರು.
ಇದಕ್ಕೆ ಉತ್ತರಿಸಿದ ಯತೀಂದ್ರ ಅವರು ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಕೆಲವರಿಗೆ ಹಣ ಬಂದಿಲ್ಲ, ಇದು ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆ ಬಗೆಹರಿಸಿ ಹಣ ಎಲ್ಲರಿಗೂ ಸಿಗುವಂತೆ ಕ್ರಮವಹಿಸಲಾಗುವುದು ಎಂದರು.
ಗ್ರಾಪಂ ಸದಸ್ಯ ಗಿರೀಶ್ ಮಾತನಾಡಿ, ತಾಲೂಕಿನ ತೊರೆಮಾವು ಗ್ರಾಮದಲ್ಲಿ ವಿದ್ಯುತ್ ಬಿಲ್ 0 ಬರುತ್ತಿಲ್ಲ, ಬಹುತೇಕ ಮನೆಗಳಿಗೆ ಈಗಲೂ ವಿದ್ಯುತ್ ಬಿಲ್ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ತಾಲೂಕಿನ ಹೆಜ್ಜಿಗೆ ಗ್ರಾಮದಲ್ಲಿ ಯುಬಿ ಕಾರ್ಖಾನೆಯ ಸಿಎಸ್ ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ಬೋರ್ ವೆಲ್, ನೀರಿನ ಟ್ಯಾಂಕ್ ಗಳನ್ನು ಉದ್ಘಾಟಿಸಿದರು.
ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ವಾಲ್ಮೀಕಿ ನಿಗಮ ಮಾಜಿ ಅಧ್ಯಕ್ಷ ಎಸ್ಸಿ ಬಸವರಾಜು, ಮುಖಂಡರಾದ ಇಂಧನ್ ಬಾಬು, ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಹೆಜ್ಜಿಗೆ ಪ್ರಸನ್ನಕುಮಾರ್, ಕೆಪಿಸಿದ್ದನಹುಂಡಿ ಗ್ರಾಪಂ ಅಧ್ಯಕ್ಷ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಜಿಪಂ ಮಾಜಿ ಸದಸ್ಯರಾದ ಲತಾಸಿದ್ದಶೆಟ್ಟಿ, ಕೆ.ಬಿ. ಸ್ವಾಮಿ, ಕುರುಬರ ಸಂಘದ ತಾಲೂಕು ಅಧ್ಯಕ್ಷ ಕೆಂಪಣ್ಣ, ಮುಖಂಡರಾದ ಶ್ರೀಕಂಠ, ಜಗದೀಶ್, ರವಿ, ನಂಜಯ್ಯ, ಮಹದೇವು, ಬಸವರಾಜು, ರಾಜು, ಗ್ರಾಪಂ ಸದಸ್ಯರಾದ ಗಿರಿಧರ್, ಪದ್ಮಪಾಣಿ ಇದ್ದರು.