ವಾಣಿಜ್ಯನಗರಿ ಹುಬ್ಬಳ್ಳಿಯ 40 ಕ್ಕೂ ಹೆಚ್ಚು ಕಡೆ ಐಟಿ ದಾಳಿ

By Suvarna NewsFirst Published Dec 5, 2019, 1:04 PM IST
Highlights

ನಗರದ ನಲವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ| ನಗರದ ವಿವಿಧ ಬಟ್ಟೆ ಅಂಗಡಿಗಳ‌ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ| ತೆರಿಗೆ ವಂಚನೆ ಹಾಗೂ ಕೊಟ್ಟಿ ರಸೀದಿ ನೀಡಿ ತೆರಿಗೆ ವಂಚನೆ ಆರೋಪದ ಮೇಲೆ ನಡೆದ ದಾಳಿ| ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವ ಗೋವಾ ಹಾಗೂ ಹುಬ್ಬಳ್ಳಿ ವಿಭಾಗದ ಅರವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳು| 

ಹುಬ್ಬಳ್ಳಿ(ಡಿ.05): ವಾಣಿಜ್ಯನಗರಿ ಹುಬ್ಬಳ್ಳಿ ಇಂದು(ಗುರುವಾರ) ನಲವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ವಿವಿಧ ಬಟ್ಟೆ ಅಂಗಡಿಗಳ‌ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಗಂಗಾವತಿ ಸಿಲ್ಕ್ ಪ್ಯಾಲೇಸ್ ಹಾಗೂ ಎಸ್.ಟಿ.ಭಂಡಾರಿ ಮಾಲ್ ಸೇರಿದಂತೆ ನಗರದ ನಲವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೋವಾ ಹಾಗೂ ಹುಬ್ಬಳ್ಳಿ ವಿಭಾಗದ ಅರವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ತೆರಿಗೆ ವಂಚನೆ ಹಾಗೂ ಕೊಟ್ಟಿ ರಸೀದಿ ನೀಡಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 
 

click me!