ಎನ್‌ಆರ್‌ಸಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡಿರುವುದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟೀಕರಣ ನೀಡಬೇಕು ಇಲ್ಲವೇ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ಹಾಗೆಯೇ ಅಮಿತ್ ಶಾಗೆ ಐವನ್ ಅವರು ನಾಲ್ಕು ಪ್ರಶ್ನೆಗಳನ್ನೂ ಕೇಳಿದ್ದಾರೆ.
ಮಂಗಳೂರು(ಜ.17): ಎನ್‌ಆರ್‌ಸಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡಿರುವುದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟೀಕರಣ ನೀಡಬೇಕು ಇಲ್ಲವೇ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ಅಲ್ಲದೆ ಅಮಿತ್ ಶಾ ತನ್ನ ನಾಲ್ಕು ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಐವನ್ ಡಿಸೋಜಾ ಆಗ್ರಹಿಸಿದ್ದಾರೆ.
ಗುರುವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್ ಡಿಸೋಜಾ, ಪ್ರಧಾನಿ ನರೇಂದ್ರ ಮೋದಿಯವರು ದೇಶ ಎಲ್ಲ ರಾಜ್ಯಗಳಲ್ಲಿ ಎನ್‌ಆರ್‌ಸಿ ಅನುಷ್ಠಾನಗೊಳಿಸಲು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.
undefined
ಪೌರತ್ವ ಕಾಯ್ದೆ: ಬಿಜೆಪಿ ರಾಜ್ಯಗಳಲ್ಲೇ ಹಿಂಸಾಚಾರ ಯಾಕೆ..?
ಆದರೆ ಅಮಿತ್ ಶಾ ಅನುಷ್ಠಾನಗೊಳಿಸುವುದರಲ್ಲಿ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಈ ಮೂಲಕ ದೇಶದಲ್ಲಿ ನಡೆಯುತ್ತಿರುವ ಪ್ರಸಕ್ತ ಪರಿಸ್ಥಿತಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಅವರು ದೇಶದ ಜನತೆಗೆ ಸ್ಪಷ್ಟಪಡಿಸಬೇಕು, ಇಲ್ಲವೇ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಐವನ್ ಡಿಸೋಜಾ ಆಗ್ರಹಿಸಿದ್ದಾರೆ.
ಎನ್‌ಆರ್‌ಸಿ, ಸಿಸಿಎ ವಿರುದ್ಧ ಮಂಗಳೂರಿನಲ್ಲಿ ಬುಧವಾರ ನಡೆದ ಪ್ರತಿಭಟನೆಯಿಂದ ಸರ್ಕಾರ ಕಣ್ತೆರೆಯಲು ಸೂಕ್ತ ಸಮಯ ಎಂದು ಹೇಳಿದ ಐವನ್ ಡಿಸೋಜಾ, ಶಾಂತಯುತವಾಗಿ ನಡೆಯುವಲ್ಲಿ ಸಂಘಟಕರು ಮಾತ್ರವಲ್ಲದೆ, ಪೊಲೀಸರ ಮುನ್ನೆಚ್ಚರಿಕಾ ಕ್ರಮವೂ ಅಭಿನಂದನಾರ್ಹ ಎಂದಿದ್ದಾರೆ.
CAA ವಿರುದ್ಧ ಶಾಂತಿಯುತ ಕಿಚ್ಚು, 1 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಸಮಾವೇಶ ಹೀಗಿತ್ತು..!
ಈ ಸಂದರ್ಭ ಅವರು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ತಮ್ಮ ಶಿಫಾರಸಿನ ಮೇರೆಗೆ 26 ಮಂದಿ ಅರ್ಜಿದಾರರಿಗೆ ಬಿಡುಗಡೆಯಾದ ಒಟ್ಟು 13,11,353 ರು.ಗಳ ಪರಿಹಾರ ಧನದ ಚೆಕ್ಕನ್ನು ಫಲಾನುಭವಿಗಳಿಗೆ ವಿತರಿಸಿದರು.
ಅಮಿತ್ ಶಾಗೆ ಐವನ್ ಡಿಸೋಜಾ ನಾಲ್ಕು ಪ್ರಶ್ನೆ
ಕಲ್ಲಡ್ಕ ಪ್ರಭಾಕರ ಭಟ್ ಸಂವಿಧಾನ ಓದಲಿ!
ಕಪಾಲಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸಿ ಕನಕಪುರದಲ್ಲಿ ಮಾತಾಡಿರುವ ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕ್ರೈಸ್ತ ಸಮುದಾಯಕ್ಕೆ ನೋವಾಗುವಂತೆ ನಡೆದುಕೊಂಡಿದ್ದಾರೆ. ರಾಜಕೀಯ ಪ್ರೇರಿತವಾಗಿ ಅವರು ನೀಡಿರುವ ಹೇಳಿಕೆ ಕ್ರೈಸ್ತ ಸಮುದಾಯದ ಜನರಿಗೆ ಮಾನಸಿಕ ವೇದನೆಯನ್ನು ನೀಡಿದೆ ಎಂದು ಐವನ್ ಡಿಸೋಜಾ ಹೇಳಿದ್ದಾರೆ. ಪ್ರಭಾಕರ ಭಟ್ ಅವರು ಸಾಮರಸ್ಯದ ಬಗ್ಗೆ ಸಂವಿಧಾನ ಓದಿ ತಿಳಿದುಕೊಳ್ಳಲಿ. ಕ್ರೈಸ್ತ ವಿರೋಧಿ ಮಾತನಾಡಿರುವ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.