ಬಿಜೆಪಿ ಜೊತೆಗೆ ಜನಾರ್ದನ ರೆಡ್ಡಿ ಮೈತ್ರಿ ಇನ್ನೂ ಸಸ್ಪೆನ್ಸ್‌!

By Kannadaprabha News  |  First Published Feb 1, 2024, 5:44 AM IST

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಅಧ್ಯಕ್ಷರಾದ ಶಾಸಕ ಗಾಲಿ ಜನಾರ್ದನರೆಡ್ಡಿ ಅವರಿಗೆ ಪಕ್ಷದ ಕಾರ್ಯಕಾರಿಣಿ ನೀಡಿದೆ.


ಬೆಂಗಳೂರು (ಫೆ.1):  ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಅಧ್ಯಕ್ಷರಾದ ಶಾಸಕ ಗಾಲಿ ಜನಾರ್ದನರೆಡ್ಡಿ ಅವರಿಗೆ ಪಕ್ಷದ ಕಾರ್ಯಕಾರಿಣಿ ನೀಡಿದೆ.

ಬುಧವಾರ ನಗರದ ರೆಡ್ಡಿ ಅವರ ನಿವಾಸದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ನರೇಂದ್ರ ಮೋದಿ (Narendra Modi) ಅವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗುವ ಉದ್ದೇಶದಿಂದ ಬಿಜೆಪಿಯು ಕೆಆರ್‌ಪಿಪಿ ಜೊತೆ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿದ್ದಲ್ಲಿ ಮುಕ್ತವಾಗಿ ಪಕ್ಷದ ಕಾರ್ಯಕರ್ತರೆಲ್ಲರೂ ಕೂಡ ಬದ್ಧವಾಗಿರಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು ಎನ್ನಲಾಗಿದೆ.

Latest Videos

undefined

ಶ್ರೀರಾಮುಲು-ಜನಾರ್ದನ ರೆಡ್ಡಿ ಮತ್ತೆ ಒಂದಾದ್ರೆ ಲೋಕಸಭಾ ಚುನಾವಣೆ ಗೆಲುವು ಗ್ಯಾರಂಟಿ: ಮಾಜಿ ಶಾಸಕ ಸೋಮಶೇಖರ್ ರೆಡ್ಡಿ

ಸಭೆಯಲ್ಲಿ ಈಗಾಗಲೇ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಂಘಟನೆ ಬಲಿಷ್ಠವಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವ ವಿಚಾರವಾಗಿ ಚರ್ಚೆ ನಡೆಸಲಾಯಿತು.

ಪಕ್ಷದ ಅಧ್ಯಕ್ಷ ಜನಾರ್ದನ ರೆಡ್ಡಿ ಅವರು ತೆಗೆದುಕೊಳ್ಳುವ ನಿರ್ಣಯಗಳಿಗೆ ಬದ್ಧರಾಗಿದ್ದೇವೆ ಎಂದು ಸಭೆಯಲ್ಲಿ ಒಕ್ಕೂರಲಿನಿಂದ ಪಕ್ಷದ ಎಲ್ಲಾ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ತೀರ್ಮಾನಿಸಿದರು.

ಶ್ರೀರಾಮುಲು-ಜನಾರ್ದನ ರೆಡ್ಡಿ ಮತ್ತೆ ಒಂದಾದ್ರೆ ಲೋಕಸಭಾ ಚುನಾವಣೆ ಗೆಲುವು ಗ್ಯಾರಂಟಿ: ಮಾಜಿ ಶಾಸಕ ಸೋಮಶೇಖರ್ ರೆಡ್ಡಿ

click me!