ಜನಸ್ಪಂದನ ಸಭೆ: ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಿ ಹಕ್ಕುಪತ್ರ ವಿತರಿಸಿದ ಮಡಿಕೇರಿ ಶಾಸಕ ಮಂತರ್ ಗೌಡ

By Govindaraj S  |  First Published Jul 13, 2024, 8:33 PM IST

ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ  ಸಂಬಂಧಿಸಿದಂತೆ ‘ಜನಸ್ಪಂದನ ಸಭೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
 


ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು (ಜು.13): ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ  ಸಂಬಂಧಿಸಿದಂತೆ ‘ಜನಸ್ಪಂದನ ಸಭೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು  ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಗಣಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜನರಿಗೆ ಇದ್ದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರು. ಅಲ್ಲದೆ ಅರ್ಹ ವೃದ್ಧರಿಗೆ ವೃದ್ಧಾಪ್ಯ ವೇತನದ ಪತ್ರಗಳನ್ನು ವಿತರಣೆ ಮಾಡಿದರು. ಅಲ್ಲದೆ ಅರ್ಹ ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರಗಳನ್ನು ವಿತರಣೆ ಮಾಡಿದರು. 

Tap to resize

Latest Videos

ಜನಸ್ಪಂದನ ಸಭೆಗೆ ಸಾರ್ವಜನಿರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮನವಿ ಸಲ್ಲಿಸಿದ್ದು ವಿಶೇಷವಾಗಿತ್ತು.  ನೂರಾರು ಮನವಿದಾರರು ಜನಸ್ಪಂದನ ಸಭೆಯಲ್ಲಿ  ಹಾಜರಾಗಿ ತಮ್ಮ ಅಹವಾಲು ಸಲ್ಲಿಸಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ಸಾವದಾನದಿಂದ ಆಲಿಸಿದ ಡಾ.ಮಂತರ್ ಗೌಡ ಅವರು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮತ್ತೂ ಕೆಲವು ಅರ್ಜಿಗಳಿಗೆ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರು ಸಾಲು ಸಾಲು ನಿಂತು ತಮ್ಮ ಅಹವಾಲನ್ನು ಶಾಸಕರಿಗೆ ಸಲ್ಲಿಕೆ ಮಾಡಿದರು. 

ದೇವರು ಒಂದೇ ನಮ್ಮ ಬಾಸ್ ಒಂದೇ: ದರ್ಶನ್ ಭೇಟಿಗೆ ಜೈಲು ಬಳಿ ಬಂದು ಕಣ್ಣೀರಿಟ್ಟ ಟಿ.ನರಸೀಪುರ ಮಹಿಳೆ!

ಈ ಸಂದರ್ಭ ಮಾತನಾಡಿದ ಶಾಸಕ ಮಂತರ್ ಗೌಡ ಅವರು ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಇಂದು ಬಂದಿಲ್ಲ, ನಾಳೆ ಬನ್ನಿ, ನೋಡುತ್ತೇವೆ, ಮಾಡಿಕೊಡುತ್ತೇವೆ ಎಂಬ ಸಾಬೂಬುಗಳು ಬೇಡ, ಕೆಲಸ ಆಗುವುದಿದ್ದಲ್ಲಿ ಕೂಡಲೇ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಆಗುವುದಿಲ್ಲ ಎಂದು ಹಿಂಬರಹ ನೀಡಬೇಕು. ಪ್ರತಿ ಕ್ಷೇತ್ರದಲ್ಲಿ ಪಾರದರ್ಶಕತೆ ಇರಬೇಕು. ಆ ದಿಸೆಯಲ್ಲಿ  ಸಾರ್ವಜನಿಕರಿಗೆ ಸ್ಪಂದನೆ ಮುಖ್ಯ ಎಂದು ಶಾಸಕ ಮಂತರ್ ಗೌಡ ಕಟ್ಟುನಿಟ್ಟಾಗಿ ಸೂಚಿಸಿದರು. ಸಾರ್ವಜನಿಕರಿಗೆ ನ್ಯಾಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆ ಆಗಿದೆ. ಸಲ್ಲಿಕೆಯಾದ ಅರ್ಜಿಗೆ ಮಾತ್ರ ಸೀಮಿತವಾಗದೆ. ಸ್ಥಳೀಯ ಎಲ್ಲಾ ರೀತಿಯ ಸಮಸ್ಯೆ ಬಗೆಹರಿಸುವುದು ಅತಿಮುಖ್ಯ ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು. 

ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಇಂದು ಬಂದಿಲ್ಲ, ನಾಳೆ ಬನ್ನಿ, ನೋಡುತ್ತೇವೆ, ಮಾಡಿಕೊಡುತ್ತೇವೆ ಎಂಬ ಸಾಬೂಬುಗಳು ಬೇಡ, ಕೆಲಸ ಆಗುವುದಿದ್ದಲ್ಲಿ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಆಗುವುದಿಲ್ಲ ಎಂದು ಹಿಂಬರಹ ನೀಡಬೇಕು.  ಪ್ರತಿ ಕ್ಷೇತ್ರದಲ್ಲಿ ಪಾರದರ್ಶಕತೆ ಇರಬೇಕು. ಆ ದಿಸೆಯಲ್ಲಿ  ಸಾರ್ವಜನಿಕರಿಗೆ ಸ್ಪಂದನೆ ಮುಖ್ಯ ಎಂದು ಶಾಸಕರು ನುಡಿದರು. ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಸಹ ಒಂದು ಬಗೆಹರಿದಲ್ಲಿ, ಮತ್ತೊಂದು ಸಮಸ್ಯೆಗಳು ಉದ್ಬವ ಆಗುತ್ತವೆ. ಆದ್ದರಿಂದ ಭಾರತವು  ಮುಂದುವರೆಯುತ್ತಿರುವ ರಾಷ್ಟ್ರವಾಗಿದ್ದು, ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎಲ್ಲರೂ ಶ್ರಮವಹಿಸಬೇಕಿದೆ ಎಂದರು. 

ಸಿಎಂ ಸಿದ್ಧರಾಮಯ್ಯಗೆ ರೈತರು ಹಾಗೂ ಸಾರ್ವಜನಿಕರು ನೀಡಿದ್ದ ಮನವಿ ಪತ್ರ ಕಸದ ರಾಶಿಯಲ್ಲಿ!

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಸರ್ಕಾರದ ಹಲವು ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸುವುದು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ  ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ  ವಿ.ಪಿ.ಶಶಿಧರ, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಡಿಪಿ ಸಮಿತಿ ಸದಸ್ಯರಾದ ಸುನಿತಾ, ತಹಶೀಲ್ದಾರ್ ಕಿರಣ್ ಗೌರಯ್ಯ, ನವೀನ್ ಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

click me!