ಎಸ್‌ಸಿ, ಎಸ್‌ಟಿ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರೊಂದಿಗೆ ಗೌಪ್ಯ ಸಭೆ ನಡೆಸಿದ ರಮೇಶ ಜಾರಕಿಹೊಳಿ ಮತ್ತು ಖನ್ ಜಾರಕಿಹೊಳಿ
ಬೆಳಗಾವಿ(ನ.29): ಎಸ್‌ಸಿ, ಎಸ್‌ಟಿ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರು ಬೆಳಗಾವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಸೋಮವಾರಿ ಭೇಟಿ ನೀಡಿ, ಗೌಫ್ಯ ಸಭೆ ನಡೆಸಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಚಿತ್ರದುರ್ಗ ಬಂಜಾರಾ ಗುರುಪೀಠದ ಸಂತ ಸೇವಾಲಾಲ ಸ್ವಾಮೀಜಿ, ಚಿತ್ರದುರ್ಗ ಮೇದಾರ ಕೇತೇಶ್ವರ ಗುರುಪೀಠದ ಬಸವಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿದರು.
ದಿಲ್ಲೀಲಿ ವಕೀಲರೊಂದಿಗೆ ಗಡಿ ವಿಚಾರ ಚರ್ಚೆ: ಸಿಎಂ ಬೊಮ್ಮಾಯಿ
ತಮ್ಮ ಮನೆಗೆ ಆಗಮಿಸಿದ ಮಠಾಧೀಶರನ್ನು ರಮೇಶ ಜಾರಕಿಹೊಳಿ ಮತ್ತು ಲಖನ್ ಜಾರಕಿಹೊಳಿ ಶಾಲು ಹೊದಿಸಿ ಸನ್ಮಾನಿಸಿದರು. ಮಾಧ್ಯಮದವರನ್ನು ಹೊರಗೆ ಕಳುಹಿಸಿ, ಸುದೀರ್ಘವಾಗಿ ಗೌಪ್ಯ ಸಭೆ ನಡೆಸಿದರು.
ಇದಕ್ಕೂ ಮುನ್ನ ನಗರದ ಖಾಸಗಿ ಹೊಟೇಲ್ಲೊಂದರಲ್ಲಿ ಸ್ವಾಭಿಮಾನಿ ಎಸ್‌ಟಿ,ಎಸ್‌ಸಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಠಾಧೀಶರ ಸಭೆ ನಡೆದಿದೆ. ಎಸಿ ಮತ್ತು ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ.
ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಪರಿಶಿಷ್ಟಜಾತಿಯಲ್ಲಿನ 101 ಉಪಜಾತಿಗಳು ಮತ್ತು ಪರಿಶಿಷ್ಟ ಪಂಗಡದಲ್ಲಿರುವ 50 ಉಪಜಾತಿಯವರು ಸಂಘಟಿತರಾಗಬೇಕು ಎಂದರು.
ರಾಜ್ಯ ಸರ್ಕಾರ ಈಗ ಎಸ್‌ಸಿ,ಎಸ್‌ಟಿಗಳ ಮೀಸಲಾತಿ ಹೆಚ್ಚಳ ಮಾಡಿದ್ದರೆ, ಅದಕ್ಕೆ ಸಮುದಾಯವರು ಗ್ರಾಮ, ಹೋಬಳಿ, ತಾಲೂಕು ಮತ್ತುಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಮಾಡಿದ ಹೋರಾಟ ಕಾರಣ. ನಮ್ಮ 23 ಬೇಡಿಕೆಗಳಲ್ಲಿ ಒಂದು ಬೇಡಿಕೆ ಮಾತ್ರ ಈಡೇರಿದೆ. ಒಂದು ಹೆಜ್ಜೆ ಇಟ್ಟಿದ್ದೇವೆ. ಇನ್ನು 22 ಹೆಜ್ಜೆಗಳನ್ನು ಇಡಬೇಕಿದೆ. ಮೂರ್ನಾಲ್ಕು ವರ್ಷಗಳಿಂದ ನಾವು ಜಾಗೃತಿಗಾಗಿ ಜಾತ್ರೆ ಮಾಡಿದ್ದೇವೆ. ಸ್ವಾಭಿಮಾನಿ ಎಸ್‌ಸಿ,ಎಸ್‌ಟಿ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಂ.ಗೋಪಿನಾಥ, ಎಂ.ವೆಂಕಟಸ್ವಾಮಿ, ಮಾರಸಂದ್ರ ಮುನಿಯಪ್ಪ, ರಾಹುಲ್ ಜಾರಕಿಹೊಳಿ, ಭರತ ಮಗದೂರು, ರಾಜಶೇಖರ ತಳವಾರ, ಎನ್.ಪ್ರಶಾಂತರಾವ್ ಮೊದಲಾದವರು ಉಪಸ್ಥಿತರಿದ್ದರು.