ಇಂದಿನಿಂದ 3 ದಿನ ಬೆಳಗಾವಿಯಲ್ಲಿ ಮೋಡ ಬಿತ್ತನೆ

By Kannadaprabha News  |  First Published Sep 29, 2023, 10:37 AM IST

ಮೋಡ ಬಿತ್ತನೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಅನುಮತಿ ನೀಡಿವೆ. ಮೋಡ ಬಿತ್ತನೆಗೆ ಬಳಸುವ ವಿಮಾನಗಳು ಸಾಂಬ್ರಾ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. ಇನ್ನು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡ ಬಿತ್ತನೆ ಮಾಡಲಾಗುವುದು. ಈ 3 ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಮೋಡ ಬಿತ್ತನೆ ಕಾರ್ಯ ಬೆಳಗಾವಿ ಜಿಲ್ಲೆಗೆ ಅಷ್ಟೇ ಸೀಮಿತವಾಗಿದೆ: ಸಚಿವ ಸತೀಶ ಜಾರಕಿಹೊಳಿ 


ಬೆಳಗಾವಿ(ಸೆ.29):  ಮಳೆ ಕೈಕೊಟ್ಟಿರುವುದರಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾವಿ ಜಿಲ್ಲೆಯಲ್ಲಿ ಸೆ.29 ರಿಂದ 3 ದಿನಗಳ ಕಾಲ ಬೆಳಗಾಂ ಶುಗರ್ಸ್‌ ವತಿಯಿಂದ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಮೋಡ ಬಿತ್ತನೆ ಖರ್ಚು, ವೆಚ್ಚವನ್ನು ಬೆಳಗಾಂ ಶುಗರ್ಸ್‌ ಭರಿಸಲಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಅನುಮತಿ ನೀಡಿವೆ. ಮೋಡ ಬಿತ್ತನೆಗೆ ಬಳಸುವ ವಿಮಾನಗಳು ಸಾಂಬ್ರಾ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. ಇನ್ನು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡ ಬಿತ್ತನೆ ಮಾಡಲಾಗುವುದು. ಈ 3 ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಮೋಡ ಬಿತ್ತನೆ ಕಾರ್ಯ ಬೆಳಗಾವಿ ಜಿಲ್ಲೆಗೆ ಅಷ್ಟೇ ಸೀಮಿತವಾಗಿದೆ ಎಂದು ತಿಳಿಸಿದರು.

Tap to resize

Latest Videos

ಕೈಕೊಟ್ಟ ಮಳೆ: ಬೆಳಗಾವಿಯಲ್ಲೂ ಮೋಡ ಬಿತ್ತನೆಗೆ ಗ್ರೀನ್‌ ಸಿಗ್ನಲ್‌

ಹೊಂದಾಣಿಕೆಯಲ್ಲ:

ತಮಿಳುನಾಡಿಗೆ ಎಲ್ಲ ಸರ್ಕಾರಗಳೂ ಕಾವೇರಿ ನೀರು ಬಿಟ್ಟಿವೆ. ಯಾವ್ಯಾವ ಸರ್ಕಾರಗಳು ಎಷ್ಟು ನೀರು ಬಿಟ್ಟಿದ್ದಾರೆ. ಬಸವರಾಜ ಬೊಮ್ಮಾಯಿಯವರು ಸಿಎಂ ಇದ್ದಾಗ ಎಷ್ಟು ನೀರು ಬಿಟ್ಟಿದ್ದಾರೆ ಎಂಬುವುದರತ್ತ ಮಾಧ್ಯಮದವರು ಬೆಳಕು ಚೆಲ್ಲಬೇಕಿದೆ. ನಾವು ತಮಿಳುನಾಡಿನ ಜತೆ ಯಾವುದೇ ಹೊಂದಾಣಿಕೆ ಮಾಡಿಲ್ಲ. ಆದರೆ, ನ್ಯಾಯಾಲಯದ ಆದೇಶ ಪಾಲಿಸಲೇಬೇಕು ಎಂದರು.

click me!