ರಾಮನಗರ (ಡಿ.11): ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಬೆಂಬಲಿತ ಸದಸ್ಯರು ಸಹ ಕಾಂಗ್ರೆಸ್ (Congress) ಅಭ್ಯರ್ಥಿ ಎಸ್.ರವಿ ಅವರನ್ನೇ ಗೆಲ್ಲಿಸಿಕೊಳ್ಳುವ ವಿಶ್ವಾಸವಿದೆ ಎಂದು ಸಂಸದ ಡಿ.ಕೆ.ಸುರೇಶ್ (DK Suresh) ಪ್ರತಿಕ್ರಿಯಿಸಿದರು. ಜಿಲ್ಲಾ ಕೇಂದ್ರ ರಾಮನಗರದ (Ramanagar) ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಲ್ಲಿ ಡಿ.ಕೆ.ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯ (Siddaramaiah) ಅವರ ಕೈ ಬಲಪಡಿಸಲು ಅನ್ಯ ಪಕ್ಷಗಳ ಬೆಂಬಲಿತ ಸದಸ್ಯರು ಸಹ ಕಾಂಗ್ರೆಸ್ (congress) ಅಭ್ಯರ್ಥಿ ಎಸ್.ರವಿ ಅವರನ್ನೇ ಬೆಂಬಲಿಸುವುದಾಗಿ ತಮ್ಮ ಬಳಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದರು.
ಅಲ್ಲದೆ ಸ್ಥಳೀಯ ಸಂಸ್ಥೆಗಳಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ (congress) ಸದಸ್ಯರು ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಇದು ಕೂಡ ರವಿ ಅವರ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಡಿಕೆ ಸುರೇಶ್ (DK Suresh ) ಹೇಳಿದರು.
undefined
ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಪ್ರಯತ್ನ ಪಡುವುದು ತಪ್ಪೇನು ಅಲ್ಲ. ಅವರೆಲ್ಲ ಅವರ ಪ್ರಯತ್ನ ಮಾಡಿದ್ದಾರೆ. ನಾವು ಸಹ ಮತದಾರರ ವಿಶ್ವಾಸಗಳಿಸಲು ಪ್ರಯತ್ನ ಮಾಡಿದ್ದೇವೆ. ಯಾರನ್ನೇ ಮತ ಕೇಳಿದರು ರಾಜ್ಯ, ಜಿಲ್ಲೆಯ ಭವಿಷ್ಯದ ದೃಷ್ಠಿಯಿಂದ ಕಾಂಗ್ರೆಸ್ ಬೆಂಬಲಿಸುವುದಾಗಿ ತಿಳಿಸಿದ್ದರು. ರಾಜ್ಯಕ್ಕೆ ಇದೊಂದು ಬದಲಾವಣೆಯ ಕಾಲ ಎಂದರು.
ನಗರಸಭೆ ಕಾಂಗ್ರೆಸ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಸಿಎಂಎಲ್ - ಸಿಪಿವೈ ಮತದಾನ ವಂಚಿತರು: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಎಂ.ಲಿಂಗಪ್ಪ ಮತ್ತು ಸಿ.ಪಿ.ಯೋಗೇಶ್ವರ್ (CP Yogeshwar) ಮತದಾನದಿಂದ ವಂಚಿತರಾಗಿದ್ದಾರೆ.
ಬಿಡದಿ ಪುರಸಭೆಯಲ್ಲಿ ಸಿ.ಎಂ.ಲಿಂಗಪ್ಪ ಮತದಾನದ ಹಕ್ಕು ಹೊಂದಿದ್ದರು. ಆದರೆ, ಪುರಸಭೆಗೆ ಇನ್ನೂ ಚುನಾವಣೆ ನಡೆಯದ ಕಾರಣ ಲಿಂಗಪ್ಪರವರು ಮತದಾನ ಮಾಡಲು ಆಗಲಿಲ್ಲ. ಇನ್ನು ಚನ್ನಪಟ್ಟಣ ನಗರಸಭೆಯಲ್ಲಿ ಮತದಾನದ ಹಕ್ಕು ಇಲ್ಲ
ಜೆಡಿಎಸ್ ಅಭ್ಯರ್ಥಿ ಗೆಲುವಿನ ನಿರೀಕ್ಷೆಯಲ್ಲಿ ಜೆಡಿಎಸ್ ಮುಖಂಡರು :
ಮಾಗಡಿ: ತಾಲೂಕಿನಲ್ಲೂ ಕೂಡ ಜೆಡಿಎಸ್ (JDS) ವಿಧಾನ ಪರಿಷತ್ ಅಭ್ಯರ್ಥಿ ರಮೇಶ್ ಗೌಡರವರ ಪರವಾಗಿ ಅಲೆಯಿದ್ದು, ಈ ಬಾರಿ ರಮೇಶ್ ಗೌಡರವರು ಬೆಂಗಳೂರು (Bengaluru) ಗ್ರಾಮಾಂತರ ಕ್ಷೇತ್ರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಎ.ಮಂಜುನಾಥ್ ಭವಿಷ್ಯ ನುಡಿದರು. ಪಟ್ಟಣದ ಪುರಸಭೆ ಮತಗಟ್ಟೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ (BJP) ಸದಸ್ಯರ ಜೊತೆ ಬಂದು ಮತ ಚಲಾಯಿಸಿ ಮಾತನಾಡಿದ ಅವರು, ಪುರಸಭೆಯ 14 ಮತಗಳು ಕೂಡ ರಮೇಶ್ ಗೌಡ (Ramesh Gowda) ರವರ ಪರವಾಗಿ ಚಲಾವಣೆ ಮಾಡಿದ್ದೇವೆ. ನಮ್ಮ ಅಭ್ಯರ್ಥಿ ಪರವಾಗಿ ಒಲವಿದ್ದು ಗೆಲ್ಲುವ ಸನಿಹದಲ್ಲಿದ್ದಾರೆ. ಇದರ ಜೊತೆಗೆ ಬಿಜೆಪಿ ಪಕ್ಷವು ಕೂಡ ನಮ್ಮ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದು, ಬೆಂಬಲ ಕೂಡ ಸೂಚಿಸಿದ್ದಾರೆ ಎಂದರು.
ವಿಶೇಷವಾಗಿ ಮಾಗಡಿ ತಾಲೂಕಿನಲ್ಲಿ ಮೊದಲಿನಿಂದಲೂ ಬಿಜೆಪಿ ಮತ್ತು ಜೆಡಿಎಸ್ ಜೊತೆ ಒಳ್ಳೆ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಉಸ್ತುವಾರಿ ಸಚಿವರಾದ ಡಾ.ಅಶ್ವತ್ ನಾರಾಯಣ ರವರು ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಕಳೆದ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಸದಸ್ಯರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟಿದ್ದೇವು.
ಒಂದು ವರ್ಷಗಳ ಕಾಲ ಅಧಿಕಾರವನ್ನು ಒಂದು ಸದಸ್ಯರಿದ್ದರು ಕೂಡ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟು ಉತ್ತಮ ಆಡಳಿತಕ್ಕೆ ಬೆಂಬಲ ಕೊಟ್ಟಿದ್ದೇವೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ತಾಲೂಕಿನ ಅಭಿವೃದ್ಧಿಗಾಗಿ ಜೊತೆಯಲ್ಲಿದ್ದು, ಸರ್ಕಾರದ ಜೊತೆ ನಾವು ಇದ್ದಾಗ ಮಾತ್ರ ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆಂಬ ವಿಚಾರವಾಗಿ ಮಾತ್ರ ಒಡಂಬಡಿಕೆ ಸೂತ್ರ ಮಾಡಿಕೊಂಡಿದ್ದೇವೆಂದು ತಿಳಿಸಿದರು.