ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಜೆಡಿಎಸ್ ಮುಖಂಡ ಬಹಿರಂಗಪಡಿಸಿದ್ದಾರೆ. ಏಪ್ರಿಲ್ ಎರಡರ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಅವರು ಹೇಳಿದ್ದಾರೆ.
ಬೆಳಗಾವಿ (ಮಾ.30): ಗೋಕಾಕ ತಾಲೂಕಿನ ನನ್ನ ಅಭಿಮಾನಿಗಳು, ಹಿತೈಷಿಗಳ ಒತ್ತಾಸೆ ಮೇರೆಗೆ ಏ.2ರ ನಂತರ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲು ತೀರ್ಮಾನಿಸಿದ್ದೇನೆ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಹೇಳಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ಗೆ ಸೇರ್ಪಡೆ ಆಗುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೇ ಹೆಬ್ಬಾಳಕರ್ ಆಹ್ವಾನ ನೀಡಿದ್ದರು. ಈ ಸಂಬಂಧ ಭಾನುವಾರ ನನ್ನ ಹಿತೈಷಿಗಳು, ಅಭಿಮಾನಗಳ ಜೊತೆ ನಡೆದ ಸಭೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಒಮ್ಮತದ ಒಲವು ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ನಾನು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಎಂದರು.
ಕಾಂಗ್ರೆಸ್‌ಗೆ ಮೋಸ ಮಾಡಿ ಪ್ರತಾಪ್ ಗೌಡ ಪಾಟೀಲ್ 20-25 ಕೋಟಿಗೆ ಮಾರಾಟ: ಸಿದ್ದು
ಗೋಕಾಕ ರಾಜಕೀಯ ಮತ್ತು ಅಲ್ಲಿನ ರಾಜಕೀಯ ವ್ಯವಸ್ಥೆ ಬದಲಾವಣೆ ಮಾಡುವ ಹಿನ್ನೆಲೆಯಲ್ಲಿ ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಗೋಕಾಕ ವಿಧಾನಸಭೆ ಕ್ಷೇತ್ರದಲ್ಲಿ ನಾನು ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಅನಿವಾರ್ಯವಾಗಿ ಪಕ್ಷ ಬದಲಾವಣೆ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.