ಎಲ್ಲದಕ್ಕೂ ಹೈಕಮಾಂಡ್ ಮೊರೆ ಹೋಗುವುದು ತಪ್ಪು ಎಂದ ಬಸವರಾಜ ಹೊರಟ್ಟಿ| ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ| ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಬಹಳಷ್ಟು ಚಿಂತನೆ ಮಾಡಬೇಕು|
ವಿದ್ಯಾರ್ಥಿಗಳ ಭವಿಷ್ಯದ ಜೊತೆಯಲ್ಲಿ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕು|
ಜಮಖಂಡಿ(ಡಿ.16): ರಾಜ್ಯದಲ್ಲಿ ಕಟ್ಟುನಿಟ್ಟಿನ ಆಡಳಿತ ನೀಡುವ ಮೂಲಕ ಬಿಜೆಪಿ ಸರ್ಕಾರ ಮಾದರಿ ಆಡಳಿತ ನೀಡಬೇಕು ಹೊರತು ಪ್ರತಿಯೊಂದಕ್ಕೂ ಹೈಕಮಾಂಡ್ ಮೊರೆ ಹೋಗುವುದು ಸರಿಯಲ್ಲ. ರಾಜ್ಯದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಮುಖ ನೋಡಿ ಮತದಾರರ ಉಪಚುನಾವಣೆಯಲ್ಲಿ ಮತ ಹಾಕಿಲ್ಲ, ಬದಲಾಗಿ ಬಿಜೆಪಿಗೆ ಮತ ನೀಡಿದ್ದನ್ನು ರಾಜ್ಯದ ಸಿಎಂ ಯಡಿಯೂರಪ್ಪ ಸೂಕ್ಷ್ಮವಾಗಿ ಗಮನಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಅವರು ಇಲ್ಲಿನ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದ್ದು, ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಬಹಳಷ್ಟು ಚಿಂತನೆ ಮಾಡಬೇಕು. ವಿದ್ಯಾರ್ಥಿಗಳ ಭವಿಷ್ಯದ ಜೊತೆಯಲ್ಲಿ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕು. ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ನಡೆದರೆ ಮಾತ್ರ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಪಾಠ ಬೋಧನೆ ಆಗಲಿದೆ. 50 ವಿದ್ಯಾರ್ಥಿಗಳಿ ಗೆ ಒಬ್ಬ ಶಿಕ್ಷಕ ನೇಮಕ ಮಾಡಬೇಕಾಗಿರುವ ರಾಜ್ಯ ಸರ್ಕಾರ 100 ವಿದ್ಯಾರ್ಥಿಗಳಿಗೂ ಒಬ್ಬ ಶಿಕ್ಷಕ ನೇಮಿಸುವಲ್ಲಿ ವಿಫಲವಾಗಿದೆ ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಅನ್ಯಾಯವಾಗಿದೆ. ರಾಜ್ಯದಲ್ಲಿ 59 ಸಾವಿರ ಶಾಲೆಗಳಿದ್ದು, ಕೇವಲ ಪೂರ್ಣ ಪ್ರರ್ಮಾಣದಲ್ಲಿ ಶಿಕ್ಷಕರ ನೇಮಕಾತಿ ಮಾಡಿಲ್ಲ. ಕೇವಲ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ನಡೆದರೆ ಖಂಡಿತವಾಗಿ ಮಕ್ಕಳ ಭವಿಷ್ಯಕ್ಕೆ ಕುತ್ತು ಬರಲಿದೆ. ಸರ್ಕಾರದ ಅವ್ಯವಸ್ಥೆಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಪ್ರತಿವರ್ಷ ಹೆಚ್ಚಾಗುತ್ತಿದೆ. ನಾನು ಶಿಕ್ಷಣ ಮಂತ್ರಿಯಾಗಿದ್ದ ಸಂದರ್ಭದಲ್ಲಿ 42 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು.ಅಂದಿನಿಂದ ಇವತ್ತಿನವರೆಗೆ ರಾಜ್ಯ ಸರ್ಕಾರ ಕೇವಲ 1200 ಶಿಕ್ಷಕರನ್ನು ಮಾತ್ರ ನೇಮಕ ಮಾಡಿದೆ.ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡದೇ ಹೋದರೆ ದೇಶಕ್ಕೆ ಭವಿಷ್ಯವಿಲ್ಲ ಎಂದರು.