HDK ಆಯ್ತು : ಜಾರಕಿಹೊಳಿ ಬೆಂಬಲಕ್ಕೆ ನಿಂತ ರೇವಣ್ಣ

Kannadaprabha News   | Asianet News
Published : Mar 13, 2021, 08:43 AM IST
HDK ಆಯ್ತು : ಜಾರಕಿಹೊಳಿ ಬೆಂಬಲಕ್ಕೆ ನಿಂತ ರೇವಣ್ಣ

ಸಾರಾಂಶ

ಎಚ್ ಡಿ ಕುಮಾರಸ್ವಾಮಿ ಆಯ್ತು. ಇದೀಗ ಮಾಜಿ ಸಚಿವ ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ರಮೇಶ್ ಜಾರಕಿಹೊಳಿ ಪರವಾಗಿ ನಿಂತಿದ್ದಾರೆ. ಈ ರೀತಿ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಹಾಸನ (ಮಾ.13):  ರಮೇಶ್‌ ಜಾರಕಿಹೊಳಿ ನಾಯಕ ಸಮುದಾಯದಲ್ಲಿ ಕಷ್ಟಪಟ್ಟು ಬೆಳೆದಿದ್ದಾರೆ. ಪಕ್ಷಕ್ಕಿಂತ ಮನುಷ್ಯತ್ವ ಇರಬೇಕು. ಅದನ್ನು ಬಿಟ್ಟು ರಾಜಕೀಯಕ್ಕಾಗಿ ಕೀಳುಮಟ್ಟಕ್ಕೆ ಇಳಿಯಬಾರದು ಎಂದು ರೇವಣ್ಣ ಹೇಳಿದರು.

ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ವೈಯಕ್ತಿಕ ವಿಚಾರವನ್ನು ರಾಜಕೀಯಕ್ಕೆ ತಂದು ಒಬ್ಬ ವ್ಯಕ್ತಿಯನ್ನು ತೇಜೋವಧೆ ಮಾಡುವುದು ಸರಿಯಲ್ಲ. ಒಬ್ಬ ಮನುಷ್ಯ ನೋವಿನಲ್ಲಿದ್ದಾಗ ಧೈರ್ಯ ಹೇಳುವುದರಲ್ಲಿ ತಪ್ಪೇನಿಲ್ಲ  ಎಂದರು.

ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್ ವಾಪಸ್ ಪಡೆದಿದ್ಯಾಕೆ? ಕಾರಣ ಕೊಟ್ಟ ಕಲ್ಲಹಳ್ಳಿ ...

 ರಾಜಕಾರಣ ಇಂದು ಇರುತ್ತದೆ, ನಾಳೆ ಇರುವುದಿಲ್ಲ. ಇಂತಹ ವಿಚಾರಗಳನ್ನು ಬಳಸಿಕೊಂಡು ಅವರ ವ್ಯಕ್ತಿತ್ವ ಮತ್ತು ಕುಟುಂಬಕ್ಕೆ ಮಸಿ ಬಳಿಯುವ ಕೆಲಸ ಮಾಡಬಾರದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಬಿ.ವಿ. ಕರೀಗೌಡ ಉಪಸ್ಥಿತರಿದ್ದರು.

ಮಾಜಿ ಸಿಎಂ ಯಡಿಯೂರಪ್ಪನವರು ಯಾವ ಹೊಸ ಯೋಜನೆಗಳನ್ನು ನೀಡುವುದು ಬೇಡ. ಸಮ್ಮಿಶ್ರ ಸರ್ಕಾರದ ಯೋಜನೆಗಳು ಮತ್ತು ಕುಮಾರ ಸ್ವಾಮಿ ಮತ್ತು ಸಿದ್ದರಾಮಯ್ಯ ನೀಡಿದ್ದ ಯೋಜನೆಗಳಿಗೆ ಚಾಲನೆ ನೀಡಬೇಕು.

PREV
click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ