* ಶ್ರೀಗಳ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು
* ಕೊರೋನಾ ಅಲೆ ಇನ್ನು ಹೆಚ್ಚಾಗುತ್ತಲೇ ಇದೆ
* ಜೀವ ಉಳಿಸುವ ಅವರ ಮಾಹನ್ ಕಾರ್ಯಕ್ಕೆ ಬೆಂಬಲ ನೀಡಬೇಕು
ಕೊಪ್ಪಳ(ಮೇ.15): ಮಹಾಮಾರಿ ಕೊರೋನಾ ನಿಯಂತ್ರಣಕ್ಕಾಗಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿ ಕೋವಿಡ್ ಆಕ್ಸಿಜನ್ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಆರ್. ಶ್ರೀನಾಥ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಆದರೆ, ಈ ಬಾರಿ ಇಂಥ ಗಂಭೀರ ಕಾಯಿಲೆಯಿಂದ ದೊಡ್ಡ ಸಮಸ್ಯೆ ಎದುರಾಗಿದೆ, ಸರ್ಕಾರವೂ ಕೈಚೆಲ್ಲುವ ಸ್ಥಿತಿಯಲ್ಲಿದೆ. ಇಂಥ ಪರಿಸ್ಥಿತಿಯಲ್ಲಿ ಕೋವಿಡ್ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಸಾಮಾನ್ಯವೇನಲ್ಲ.
ಕೊಪ್ಪಳ: ಕೋವಿಡ್ ಆಸ್ಪತ್ರೆ ಕಸಗೂಡಿಸಿದ ಗವಿಸಿದ್ಧೇಶ್ವರ ಶ್ರೀ
ಅವರ ಈ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು. ಎಲ್ಲರೂ ಕೈಜೋಡಿಸುವ ಮೂಲಕ ಅಲ್ಲಿಯ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ, ಜೀವ ಉಳಿಸುವ ಅವರ ಮಾಹನ್ ಕಾರ್ಯಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಕೊರೋನಾ ಅಲೆ ಇನ್ನು ಹೆಚ್ಚಾಗುತ್ತಲೇ ಇದೆ. ಮುಂದಿನ ದಿನಗಳಲ್ಲಿ ಮೂರನೇ ಅಲೆಯೂ ಬರುತ್ತದೆ ಎನ್ನುತ್ತಾರೆ. ಹೀಗಾಗಿ, ಇಂಥ ಆಸ್ಪತ್ರೆಗಳ ಅಗತ್ಯತೆ ಇನ್ನು ಹೆಚ್ಚಾಗುತ್ತದೆ. ಇಂಥ ಮಹಾನ್ ಕಾರ್ಯಕ್ಕೆ ಕೈಜೋಡಿಸೋಣ ಎಂದಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona