* ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
* ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಅನೇಕ ಮುಖಂಡರು, ಅಭಿಮಾನಿಗಳ ಒತ್ತಾಯ
* ಬಡಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಸಮಾರಂಭ
ಕೊಪ್ಪಳ(ಜೂ.23): ಕಾಂಗ್ರೆಸ್ ಪಕ್ಷದ ತತ್ವ- ಸಿದ್ಧಾಂತಗಳನ್ನು ಒಪ್ಪಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡಗೊಂಡಿರುವುದಾಗಿ ರಾಜ್ಯ ಜೆಡಿಎಸ್ ಮುಖಂಡ ಕೆ.ಎಂ. ಸೈಯದ್ ಹೇಳಿದ್ದಾರೆ.
ಅವರು ಕೊಪ್ಪಳ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಬಡಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಸಮಾರಂಭಕ್ಕೆ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ , ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್‌ಗೆ ಸೇರ್ಪಡೆ
ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಅನೇಕ ಮುಖಂಡರು, ಅಭಿಮಾನಿಗಳ ಒತ್ತಾಯದಿಂದ ಕೊಪ್ಪಳ ವಿಧಾನಸಭೆ ಕ್ಷೇತ್ರದ ಬೂತ್ ಮಟ್ಟದ ಬಡಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಸಮಾರಂಭಕ್ಕೆ ಆಗಮಿಸುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಶಾಸಕ ಸುರೇಶ ಭೈರತಿ, ಕೆ. ರಾಘವೇಂದ್ರ ಹಿಟ್ನಾಳ, ಅಮರೇಗೌಡ ಪಾಟೀಲ್ ಬಯ್ಯಾಪೂರು, ಉಸ್ತುವಾರಿ ಅಶೋಕ ಪಟ್ಟಣ, ಪ್ರಕಾಶ ರಾಥೋಡ, ಜಿ.ಪಂ. ಅಧ್ಯಕ್ಷ ಕೆ,ರಾಜಶೇಖರ ಹಿಟ್ನಾಳ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ನ್ಯಾಯವಾದಿ ಅಸೀಫ್ ಅಲಿ, ನಗರಸಭೆ ಸದಸ್ಯ ಅಮ್ಜದ್ ಪಟೇಲ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಮೌಲಾಹುಸೇನ ಜಮೇದಾರ, ಖತೀಬ್ ಬಾಷುಸಾಬು ಸೇರಿದಂತೆ ಮತ್ತಿತರರು ಇದ್ದರು.