Tumakuru : ‘ಜೆಡಿಎಸ್‌ನಿಂದ ತಿಮ್ಮರಾಯಪ್ಪ ಸ್ಪರ್ಧೆ ಖಚಿತ’

By Kannadaprabha News  |  First Published Oct 11, 2022, 4:46 AM IST

2023ರ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಜಾತ್ಯಾತೀತ ಜನತಾ ದಳದಿಂದ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಸ್ಪರ್ಧಿಸಲಿದ್ದು, ತಳ ಹಂತದಿಂದ ಪಕ್ಷ ಸಂಘಟಿಸಿ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಜೆಡಿಎಸ್‌ನ ತುಮಕೂರು ಜಿಲ್ಲಾಧ್ಯಕ್ಷ ಆರ್‌. ಸಿ. ಅಂಜಿನಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು.


 ಪಾವಗಡ (ಅ.11):  2023ರ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಜಾತ್ಯಾತೀತ ಜನತಾ ದಳದಿಂದ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಸ್ಪರ್ಧಿಸಲಿದ್ದು, ತಳ ಹಂತದಿಂದ ಪಕ್ಷ ಸಂಘಟಿಸಿ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಜೆಡಿಎಸ್‌ನ ತುಮಕೂರು ಜಿಲ್ಲಾಧ್ಯಕ್ಷ ಆರ್‌. ಸಿ. ಅಂಜಿನಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು.

ಜೆಡಿಎಸ್‌ನ (JDS) ತಾಲೂಕಾ ಘಟಕದ ವತಿಯಿಂದ ಪಟ್ಟಣದ ಎಸ್‌ಎಸ್‌ಕೆ ಬಯಲು ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಾಜ್ಯ ವರಿಷ್ಠರ ಆದೇಶದನ್ವಯ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election) ಪಾವಗಡ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಕೆ.ಎಂ.ತಿಮ್ಮರಾಯಪ್ಪ ಸ್ಪರ್ಧಿಸಲಿದ್ದು ಅತಿ ಹೆಚ್ಚು ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ಮುಖಂಡರು ಮತ್ತು ಕಾರ್ಯಕರ್ತರ ಮೇಲಿದೆ. ತಾಲೂಕಿನಲ್ಲಿ ಜೆಡಿಎಸ್‌ (JDS) ಸದೃಢವಾಗಿದ್ದು, ನಮ್ಮ ಪಕ್ಷ ಅಧಿಕಾರದಲ್ಲಿದ್ದ ಅವಧಿಯ ಸಾಧನೆಗಳನ್ನು ಜನತೆ ಮುಂದಿಡುವ ಮೂಲಕ ಬೂತ್‌ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷ ಸಂಘಟನೆಗೆ ಸಜ್ಜಾಗುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದರು.

Tap to resize

Latest Videos

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಪಾವಗಡಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಶೀಘ್ರವೇ ಬೆಂಗಳೂರಿಗೆ ತೆರಳಿ ಗಡುವು ಪಡೆದು, ನಗರದಲ್ಲಿಯೇ ಬೃಹತ್‌ ಮಟ್ಟದ ಕಾರ್ಯಕ್ರಮ ರೂಪಿಸುತ್ತೇವೆ ಎಂದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎನ್‌.ತಿಮ್ಮಾರೆಡ್ಡಿ, ತಾಲೂಕಾ ಅಧ್ಯಕ್ಷ ಬಲರಾಮರೆಡ್ಡಿ, ಕಾರ್ಯಾಧ್ಯಕ್ಷ ಎನ್‌. ಎ. ಈರಣ್ಣ, ಮುಖಂಡ ಮಾನಂ ವೆಂಕಟಸ್ವಾಮಿ, ಕೋಟಗುಟ್ಟಅಂಜಿನಪ್ಪ, ರಾಜಶೇಖರಪ್ಪ, ಭೀಮನಕುಂಟೆ ಸತ್ಯಪ್ಪ, ಜೆಡಿಎಸ್‌ ತಾಲೂಕಾ ಪ್ರಧಾನ ಕಾರ್ಯದರ್ಶಿ ಗೋವಿಂದಬಾಬು, ವಕ್ತಾರ ಅಕ್ಕಲಪ್ಪ ನಾಯ್ಡ್‌, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಮಂಜುನಾಥ ಚೌದರಿ, ಮಾಜಿ ತಾಪಂ ಅಧ್ಯಕ್ಷ ಸೊಗಡು ವೆಂಕಟೇಶ್‌, ಕೆ.ವಿ.ಗಿರಿರಾಜ್‌, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಯುನಿಸ್‌, ಮುಖಂಡ ಗೊರ್ತಿ ನಾಗರಾಜ್‌, ಪುರಸಭೆ ಮಾಜಿ ಸದಸ್ಯರಾದ ಮನುಮಹೇಶ್‌, ಜಿ.ಎ.ವೆಂಕಟೇಶ್‌, ಗುಟ್ಟಹಳ್ಳಿ ಮಣಿ, ವಸಂತ್‌ಕುಮಾರ್‌, ಡಿ.ಆರ್‌.ಲಿಂಗಪ್ಪ, ಬನಶಂಕರಿ ಲಕ್ಷ್ಮೀನರಸಯ್ಯ, ಗಂಗಾಧರ್‌ನಾಯ್ಡ್‌, ಹೊಸಕೋಟೆ ಸತ್ಯನಾರಾಯಣ್‌, ನರಳೇಕುಂಟೆ ಭರತ್‌ಕುಮಾರ್‌, ಕನ್ನಮೇಡಿ ಲೋಕೇಶ್‌, ಟಿ.ಎನ್‌.ಪೇಟೆ ರಮೇಶ್‌, ಮಂಗಳವಾಡ ಹನುಮಂತರಾಯಪ್ಪ, ಅಪ್‌ಬಂಡೆ ಗೋಪಾಲ್‌, ಕಡಪಲಕರೆ ನರಸಿಂಹಪ್ಪ, ಕೆ.ಟಿ.ಹಳ್ಳಿ ಮಂಜುನಾಥ್‌, ಐಟಿ ಘಟಕದ ಅಧ್ಯಕ್ಷ ಶಿವಕುಮಾರ್‌, ಟೀಸ್ಟಾಲ್‌ ಹನುಮಂತರಾಯಪ್ಪ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರಿದ್ದರು.

ಮೈತ್ರಿ ಬಗ್ಗೆ ನಾಯಕರ ತೀರ್ಮಾನ 

 

ತುಮಕೂರು (ಅ.09): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ರಾಜ್ಯ ನಾಯಕರು ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಭಾರತ್‌ ಜೋಡೋ ಯಾತ್ರೆ ನಿಮಿತ್ತ ತುರುವೇಕೆರೆ ತಾಲೂಕಿನ ಅರಳೀಕೆರೆ ಪಾಳ್ಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಚುನಾವಣೆ ವೇಳೆ ಕರ್ನಾಟಕದಲ್ಲಿ ಜೆಡಿಎಸ್‌ ಜತೆ ಒಪ್ಪಂದ ಮಾಡಿಕೊಳ್ಳಬೇಕೋ, ಬೇಡವೋ ಎಂಬುದರ ಬಗ್ಗೆ ರಾಜ್ಯ ನಾಯಕರು ಚರ್ಚಿಸಿ, ನಿರ್ಧಾರ ಕೈಗೊಳ್ಳುತ್ತಾರೆ. ನನ್ನ ಪ್ರಕಾರ ಜೆಡಿಎಸ್‌ ಜತೆ ಒಪ್ಪಂದ ಮಾಡಿಕೊಳ್ಳುವ ಅಗತ್ಯವೇ ಬೀಳುವುದಿಲ್ಲ. ಕರ್ನಾಟಕದಲ್ಲಿ ಯಾರ ಸಹಾಯವೂ ಇಲ್ಲದೆ ಕಾಂಗ್ರೆಸ್‌ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಬಳಿಕವೇ ಕಾಂಗ್ರೆಸ್‌ ಸಿಎಂ ಆಯ್ಕೆ: ರಾಹುಲ್‌ ಗಾಂಧಿ

ಅಧ್ಯಕ್ಷ ಚುನಾವಣೆಗೆ ಬಳ್ಳಾರಿಯಲ್ಲಿ ರಾಹುಲ್‌ ಮತದಾನ: ಅಕ್ಟೋಬರ್‌ 17ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷರ ಚುನಾವಣೆಗೆ ರಾಹುಲ್‌ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್‌ನ ಇತರ 40 ನಾಯಕರು ಬಳ್ಳಾರಿಯಲ್ಲಿ ಸ್ಥಾಪಿಸಲಾಗುವ ಮತದಾನ ಕೇಂದ್ರದಲ್ಲಿ ಮತದಾನ ಮಾಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಅಂದು ಭಾರತ್‌ ಜೋಡೋ ಯಾತ್ರೆ ಇರುವುದಿಲ್ಲ. ಮತದಾನಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಅಂದು ಯಾತ್ರೆಗೆ ವಿಶ್ರಾಂತಿ ನೀಡಲಾಗುವುದು. ಅಲ್ಲದೆ, ಅಂದು ಬಳ್ಳಾರಿಯಲ್ಲಿ ಮತದಾನ ಕೇಂದ್ರ ತೆರೆಯಲಾಗುವುದು. ರಾಹುಲ್‌ ಗಾಂಧಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ 40 ಪದಾಧಿಕಾರಿಗಳು ಈ ಮತದಾನ ಕೇಂದ್ರದಲ್ಲಿಯೇ ಮತದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ರಾಹುಲ್‌ ಜತೆ ಜೆಡಿಎಸ್‌ ಉಚ್ಚಾಟಿತ ಶಾಸಕ ನಡಿಗೆ: ಪಾದಯಾತ್ರೆ ತುರುವೇಕೆರೆ ತಾಲೂಕಿನ ನಂದಿಕಲ್‌ ಕೆರೆ ಗೇಟ್‌ ಸಮೀಪ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗುಬ್ಬಿ ಜೆಡಿಎಸ್‌ ಉಚ್ಚಾಟಿತ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಅವರು ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್‌ಗಾಂಧಿ ಜತೆ ಹೆಜ್ಜೆ ಹಾಕಿದರು. ಪಾದಯಾತ್ರೆ ನಡುವೆಯೇ ಎಸ್‌.ಆರ್‌. ಶ್ರೀನಿವಾಸ್‌ ಅವರನ್ನು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಅವರು ರಾಹುಲ್‌ಗೆ ಪರಿಚಯ ಮಾಡಿಕೊಟ್ಟರು.

click me!