ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಜೆಡಿಎಸ್‌

Suvarna News   | Asianet News
Published : Aug 18, 2020, 01:23 PM IST
ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಜೆಡಿಎಸ್‌

ಸಾರಾಂಶ

ರಾಜ್ಯ ಸರ್ಕಾರದ ವಿವಿಧ ತೀರ್ಮಾನಗಳ ವಿರುದ್ಧ ಜೆಡಿಎಸ್ ಮುಖಂಡರು ತಿರುಗಿ ಬಿದ್ದಿದ್ದು, ವಿವಿಧೆಡೆ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ(ಆ.18):  ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಕೈಗಾರಿಕೆ ವ್ಯಾಜ್ಯ ಕಾಯ್ದೆ, ಗುತ್ತಿಗೆ ಕಾರ್ಮಿಕರ ನಿಯಂತ್ರಣ ಮತ್ತು ನಿರ್ಮೂಲನೆ ಕಾಯ್ದೆಗಳಿಗೆ ತಿದ್ದುಪಡಿ ತಂದು, ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಸರ್ಕಾರದ ಕ್ರಮವನ್ನು ಖಂಡಿಸಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಾತ್ಯತೀತ ಜನತಾದಳ (ಜೆಡಿಎಸ್‌) ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಸರ್ಕಾರದ ಮನೆಹಾಳು ನಿರ್ಧಾರ ಎಂದ ಕುಮಾರಸ್ವಾಮಿಯಿಂದ ಎಚ್ಚರಿಕೆ ಸಂದೇಶ...

ಕಾರ್ಮಿಕರು, ರೈತರ, ಬಡವರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿ ಕಾಯ್ದೆ ಜಾರಿ ಕೈಬಿಡಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಭೂ ಸುಧಾರಣೆ ಕಾಯ್ದೆಯಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಂಡು, 7 ವರ್ಷಗಳ ನಂತರ ಪರಭಾರೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಊಳುವವರೇ ಭೂಮಿಯ ಒಡೆಯರಾಗಿ, ಕೃಷಿಕರು ಕಷ್ಟಕ್ಕೆ ಸಿಲುಕುವಂತಾಗುತ್ತದೆ. ಇನ್ನು ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರ ಹಿತಕ್ಕೆ ಮಾರಕವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

'ಬಿಜೆಪಿ ಸೇರಲು ಜೆಡಿಎಸ್‌ನ ನಾಲ್ವರು ಶಾಸಕರ ಉತ್ಸುಕ'..

ಪ್ರತಿಭಟನೆಯಲ್ಲಿ ಜೆಡಿಎಸ್‌ ಮುಖಂಡರಾದ ಶಂಕರ ಮಾಡಲಗಿ, ಅಶೋಕ ಪೂಜಾರಿ, ಸುಭಾಷ ಪೂಜಾರಿ, ಪ್ರಮೋದ ಪಾಟೀಲ, ಚನ್ನಪ್ಪ ವಗ್ಗನ್ನವರ, ಇಬ್ರಾಹಿಂ ಕಿತ್ತೂರ, ಈರಣ್ಣ ಕಮ್ಮಾರ, ಮಲ್ಲು ಅರಭಾವಿ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!