ಚಿಕ್ಕಬಳ್ಳಾಪುರ (ಆ.02): ಎರಡು ರಾಷ್ಟ್ರೀಯ ಪಕ್ಷಗಳ ವೈಫಲ್ಯ, ಎಚ್ ಡಿ ಕುಮಾರಸ್ವಾಮಿ ಅವರ ಅಧಿಕಾರ ಅವಧಿಯಲ್ಲಿ ಜಾರಿಗೊಳಿಸಿದ ಜನಪರ ಯೋಜನೆಗಳೇ ಜೆಡಿಎಸ್‌ಗೆ ಶ್ರೀ ರಕ್ಷೆ ಆಗಲಿದ್ದು ರಾಜ್ಯದಲ್ಲಿ 2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ತಿಳಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ನೂತನ ಪಕ್ಷದ ಪದಾಧಿಕಾರಿಗಳ ನೇಮಕಾತಿ ಅದೇಶ ಪತ್ರಗಳನ್ನು ವಿತರಿಸಿದ ಬಳಿಕ ಮಾತನಾಡಿದ ಅವರು ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗಳಲ್ಲಿ ಪಕ್ಷಕ್ಕೆ ಬಲ ತುಂಬಲು ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ತಾಲೂಕು ಘಟಕಗಳಿಗೆ ನೇಮಕಗೊಂಡ ಪದಾಧಿಕಾರಿಗಳಿಗೆ ಸೂಚಿಸಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮತ್ತೋರ್ವ ಮುಖಂಡ
ರಾಜ್ಯ ಬಿಜೆಪಿ ಸರಕಾರ ಅಧಿಕಾರಕ್ಕಾಗಿ ಕಚ್ಚಾಟದಲ್ಲಿ ಮುಳುಗಿದೆ. ಮುಖ್ಯಮಂತ್ರಿಯೊಬ್ಬರು ಇರುವ ಒಂಟಿ ಸರ್ಕಾರ ಇದಾಗಿದೆ. ಅಧಿಕಾರ ಸ್ವೀಕರಿಸಿದ ಸಿಎಂ ಬೊಮ್ಮಾಯಿ ಕಾಟಾಚಾರಕ್ಕೆ ನೆರೆ ಪ್ರದೇಶಗಳಿಗೆ ಪ್ರವಾಸ ಕೈಗೊಂಡರು. ಯಾವುದೇ ನೆಲೆ ಇಲ್ಲದೆ ಕಂಗಾಲಾಗಿರುವ ನೆರೆಪೀಡಿತರಿಗೆ ಅಗತ್ಯ ಸೌಕರ್ಯ ಕಲ್ಪಿಸುವ ಗೋಜಿಗೆ ಹೊಗಿಲ್ಲ.
ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಪ್ರವಾಹ ಸಂಕಷ್ಟ ಎದುರಾಗಿತ್ತು. ಇದನ್ನು ಸಮರ್ಥವಾಗಿ ನಿಭಾಯಿಸಿದ್ದರು. ನೆರೆ ಪೀಡಿತರಗೆ ಅಗತ್ಯ ಸೌಕರ್ಯ ಕಲ್ಪಿಸಿದ್ದರು ಎಂದರು.
ಸಭೆಯಲ್ಲಿ ಚಿಂತಾಮಣಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಸೇರಿದಂತೆ ಅನೇಕ ಜೆಡಿಎಸ್ ಮುಖಂಡರಿದ್ದರು.