ದಳಕ್ಕೆ ಅಧಿಕಾರದ ಚುಕ್ಕಾಣಿ : ಪ್ರಜ್ವಲ್ ರೇವಣ್ಣ ಭರವಸೆ

Kannadaprabha News   | Asianet News
Published : Apr 16, 2021, 03:48 PM IST
ದಳಕ್ಕೆ ಅಧಿಕಾರದ ಚುಕ್ಕಾಣಿ : ಪ್ರಜ್ವಲ್ ರೇವಣ್ಣ ಭರವಸೆ

ಸಾರಾಂಶ

ದಳಕ್ಕೆ ವಿಜಯ ಒಲಿದು ಅಧಿಕಾರ ದೊರಕಲಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತ್ಯಧಿಕ ಸ್ಥಾನಗಳು ತಮ್ಮವಾಗಲಿವೆ ಎಂದರು.

ಬೇಲೂರು (ಏ.16):  ಈ ಬಾರಿ ಪುರಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಪುರಸಭೆ ಅ​ಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಪುರಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಚನ್ನಕೇಶವ ದೇವಾಲಯದಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ ದೇಗುಲದಿಂದ ಪುರಸಭೆಯವರೆಗೂ ಪಾದಯಾತ್ರೆ ಮಾಡುವ ಮೂಲಕ ಆಗಮಿಸಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳ ಜೊತೆ ನಾಮಪತ್ರ ಸಲ್ಲಿಸಿ ಅವರು ಮಾತನಾಡಿದರು.

ಈ ಬಾರಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವುದೇ ಜಾತಿ, ಮತ, ಭೇದವಿಲ್ಲದೆ ಎಲ್ಲಾ ಜನಾಂಗದವರಿಗೂ ಸಾಮಾಜಿಕ ನ್ಯಾಯ ದೊರಕಿಸುವ ಉದ್ದೇಶದಿಂದ ಜಾತ್ಯತೀತದ ನಿಲುವು ಸಿದ್ಧಾಂತ ಇಟ್ಟುಕೊಂಡು ಪ್ರತಿಯೊಬ್ಬರಿಗೂ ಸಮಾನವಾಗಿ ಟಿಕೆಟ್‌ ಹಂಚಿಕೆ ಮಾಡಲಾಗಿದೆ. ಈ ಹಿಂದೆ ಪುರಸಭೆಯಲ್ಲಿ ನಮ್ಮ ಪಕ್ಷ ಅಧಿ​ಕಾರದಲ್ಲಿದ್ದಾಗ ಉತ್ತಮ ಆಡಳಿತ ನಡೆಸುವ ಮೂಲಕ ಶಾಸಕರ ನೇತೃತ್ವದಲ್ಲಿ ಸುಮಾರು .900 ಕೋಟಿ ಅನುದಾನ ತಂದು ವಿವಿಧ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್ ...

ಈ ಬಾರಿ 23 ವಾರ್ಡ್‌ಗಳಲ್ಲಿ 22 ವಾರ್ಡ್‌ಗಳಿಗೆ ಎಲ್ಲಾ ವರ್ಗದವರಿಗೂ ಟಿಕೆಟ್‌ ಹಂಚಲಾಗಿದೆ. 18 ವಾರ್ಡ್‌ಗಳಲ್ಲಿ ಜೆಡಿಎಸ್‌ ಜಯಭೇರಿ ಬಾರಿಸುವ ಮೂಲಕ ಮತ್ತೆ ಪುರಸಭೆಯ ಅಧಿ​ಕಾರ ಹಿಡಿಯುವುದು ಶತಸಿದ್ಧ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ವಾರ್ಡ್‌ ಸಭೆಯಲ್ಲಿ ಹಾಗೂ ಕಾರ್ಯಕರ್ತರ ಒಮ್ಮತದ ನಿರ್ಣಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಭಸ್ಮೀಕರಣ ಸ್ಥಳಾಂತರ ಯೋಜನೆ ಚಾಲನೆ:

ಶಾಸಕ ಕೆ.ಎಸ್‌.ಲಿಂಗೇಶ್‌ ಮಾತನಾಡಿ, ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ  50 ಕೋಟಿ ರು. ವೆಚ್ಚದಲ್ಲಿ ವಿವಿಧ ಕಾಮಗಾರಿ ನಡೆಸಿದ್ದು, ಕುಡಿಯುವ ನೀರು, ರಸ್ತೆ, ಚರಂಡಿ, ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 24*7 ಕಾಲ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬಹುಮುಖ್ಯ ವಾಗಿ ಭಸ್ಮೀಕರಣ ಹೊಂಡವನ್ನು ಬೇರೆಡೆಗೆ ಸ್ಥಳಾಂತರಿಸಲು ಈಗಾಗಲೇ ಕಾರ್ಯ ಯೋಜನೆ ಮಾಡಲಾಗಿದೆ. ಇದರ ಜೊತೆಗೆ ಬಸ್‌ ನಿಲ್ದಾಣ ನವೀಕರಣ, ಮುಖ್ಯರಸ್ತೆ ಅಗಲೀಕರಣಕ್ಕೆ ಈಗಾಗಲೇ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅದ್ಯಕ್ಷ ತೊ.ಚ.ಅನಂತ ಸುಬ್ಬರಾಯ್‌, ಡಿಸಿಸಿ ಬ್ಯಾಂಕ್‌ ಮಾಜಿ ಉಪಾಧ್ಯಕ್ಷ ಎಂ.ಎ.ನಾಗರಾಜ್‌, ಮುಖಂಡರಾದ ಬಿ.ಡಿ.ಚಂದ್ರೇಗೌಡ, ಬಿ.ಸಿ.ಮಂಜುನಾಥ್‌, ಚೇತನ್‌ ಕುಮಾರ್‌, ಪ್ರಧಾನ ಕಾರ್ಯದರ್ಶಿ ಸಿ.ಎಚ್‌.ಮಹೇಶ್‌,ನಾಗೇಶ್‌, ದಿಲೀಪ್‌, ಶ್ರೀನಿ​ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

PREV
click me!

Recommended Stories

ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!
ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!