ತಡಕೋಡದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ, ಗ್ರಾಮೀಣ ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತದ ಸ್ಪಂದನೆ

By Suvarna News  |  First Published Apr 16, 2022, 7:36 PM IST

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮ
ತಡಕೋಡದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ
ಗ್ರಾಮೀಣ ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತದ ಸ್ಪಂದನೆ
 


ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ 
 
ಧಾರವಾಡ ಏ.16 : ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಪರಿಹಾರವಾಗಬೇಕಾಗಿರುವ ಸರ್ಕಾರದ ಕಾರ್ಯ,ಸಾರ್ವಜನಿಕರ ಅಹವಾಲುಗಳ ಈಡೇರಿಕೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವರದಾನವಾಗಿದೆ ಗ್ರಾಮೀಣ ಜನರ ಸಮಸ್ಯೆಗಳ ಸ್ಪಂದನೆಗೆ ಸರ್ಕಾರ, ಜಿಲ್ಲಾಡಳಿತ ಆದ್ಯತೆ ನೀಡುತ್ತಿವೆ  ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಹೇಳಿದರು.

ತಡಕೋಡದ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ  ಕೆಳಹಂತದಿಂದ ಪ್ರಾರಂಭವಾಗಿ ತಾಲೂಕು,ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ಒಂದು ಹಳ್ಳಿಯಲ್ಲಿ ಇದ್ದು ಸ್ಥಳೀಯ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ,ಪರಿಹರಿಸಲು ಕ್ರಮವಹಿಸಲಾಗುವುದು.ಇದೇ ಸಂದರ್ಭದಲ್ಲಿ ಆರೋಗ್ಯ ಕಾರ್ಯಕ್ರಮವೂ ನಡೆಯುವುದರಿಂದ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಕಾರ್ಡುಗಳನ್ನು  ವಿತರಿಸಲಾಗುತ್ತಿದೆ‌.ಸಾರ್ವಜನಿಕರು ಆಡಳಿತಾತ್ಮಕ ಕಾರಣದಿಂದ ತಾಲೂಕು,ಜಿಲ್ಲಾ ಹಂತದಲ್ಲಿ ವಿಳಂಬವಾಗಿರುವ ಸಮಸ್ಯೆಗಳನ್ನು ಈ ಕಾರ್ಯಕ್ರಮದ ಮೂಲಕ ಪರಿಹರಿಸಿಕೊಳ್ಳಬಹುದು.ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಾಶನಕ್ಕೆ  ನೀಡಿರುವ ಅರ್ಜಿಗಳನ್ನು ಕೂಡ ವಿಲೆ ಮಾಡಲಾಗುವುದು ಎಂದರು.

Tap to resize

Latest Videos

ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಭಾಗವಾಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಪ್ರತಿ ತಿಂಗಳು ಮೂರನೇ ಶನಿವಾರದಂದು ಹಮ್ಮಿಕೊಂಡು ಬರಲಾಗುತ್ತಿದೆ.ಸಾರ್ವಜನಿಕ ಹಿತದೃಷ್ಟಿಯ ಅನೇಕ ಕಾರ್ಯಕ್ರಮಗಳನ್ನು ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಸ್ಥಳದಲ್ಲಿಯೇ ಪರಿಹರಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಸಾಮಾಜಿಕ ಭದ್ರತಾ ಎಂದರು.

ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ.ಚೌಡಣ್ಣವರ, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಶೇಖರ ಮುನವಳ್ಳಿ,ಆಹಾರ ಇಲಾಖೆ ಉಪನಿರ್ದೇಶಕ ಸುಧೀರ್ ಸಾವ್ಕಾರ್,ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ್ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು ,ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಅಹವಾಲುಗಳಿಗೆ ಸ್ಪಂದನೆ ಗ್ರಾಮಸ್ಥರು ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಪದವಿ ಪೂರ್ವ ಕಾಲೇಜು  ಸ್ಥಾಪನೆ,ತಿಮ್ಮಾಪುರ ಮಡ್ಡಿಯಲ್ಲಿ ವಾಸವಾಗಿರುವ ಜನರ ಹೆಸರಿಗೆ ಮನೆಗಳ ಹಕ್ಕು ನೀಡುವುದು, ಟಾಟಾ ಮಾರ್ಕೊಪೊಲೊ ಸಂಸ್ಥೆಯ ಕಾರ್ಮಿಕರ ಪ್ರತಿಭಟನೆಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸಿ , ಕಾರ್ಖಾನೆಯ ಆಡಳಿತ ಮಂಡಳಿಯೊಂದಿಗೆ ಮಧ್ಯಸ್ಥಿಕೆ ವಹಿಸಿ ಕಾರ್ಮಿಕರ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು‌.

ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು,ಟಾಟಾ ಮಾರ್ಕೊಪೊಲೊ ಕಾರ್ಮಿಕರ ಹೋರಾಟ ಜಿಲ್ಲಾಡಳಿತ, ಸರ್ಕಾರ ಗಮನ ಹರಿಸಿದೆ.ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ಮಧ್ಯಸ್ಥಿಕೆ ವಹಿಸಿ ಪರಿಹರಿಸಲು ಕಾರ್ಖಾನೆ ಹಾಗೂ ಕಾರ್ಮಿಕರನ್ನು ಚರ್ಚೆಗೆ ಆಹ್ವಾನಿಸಲಾಗಿದೆ . ತಡಕೋಡದ ತಿಮ್ಮಾಪುರ ಮಡ್ಡಿ ಪ್ರದೇಶದ 73 ನಿವೇಶನಗಳಲ್ಲಿ ವಾಸವಾಗಿ,ಈಗಾಗಲೇ ಮನೆ ನಿರ್ಮಿಸಿಕೊಂಡಿರುವವ ಹೆಸರಿಗೆ ಹಕ್ಕು ಪತ್ರ ಕೊಡಬೇಕು.ಉಳಿದ ನಿವೇಶನಗಳನ್ನು ಅರ್ಹರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು‌.ಗ್ರಾಮದಲ್ಲಿ ಇರುವ ನಿವೇಶನ ರಹಿತರ ಪಟ್ಟಿ ಮಾಡಿ ನೀಡಿದರೆ, ಸೂರು ಒದಗಿಸಲು ಕ್ರಮ ವಹಿಸಲಾಗುವುದು ಎಂದರು.

click me!