ಜೋಗ ಅಭಿವೃದ್ಧಿಯಿಂದ ಹಾನಿಯಿಲ್ಲ; ಪ್ರವಾಸೋದ್ಯಮ ಇಲಾಖೆ ಸ್ಪಷ್ಟನೆ

Published : Jul 14, 2021, 09:58 PM IST
ಜೋಗ ಅಭಿವೃದ್ಧಿಯಿಂದ ಹಾನಿಯಿಲ್ಲ; ಪ್ರವಾಸೋದ್ಯಮ ಇಲಾಖೆ ಸ್ಪಷ್ಟನೆ

ಸಾರಾಂಶ

* ಜೋಗ ಜಲಪಾತದ ಬಳಿ ಅಭಿವೃದ್ಧಿ ಕಾರ್ಯ * ಪರಿಸರಕ್ಕೆ ಹಾನಿಯಾಗಲಿದೆ ಎಂಬ ಮಾತು ಕೇಳಿಬಂದಿತ್ತು * ಪರಿಸರಕ್ಕೆ ಯಾವುದೇ ಹಾನಿ ಇಲ್ಲ ಎಂದು ಸ್ಪಷ್ಟಪಡಿಸಿದ ಪ್ರವಾಸೋದ್ಯಮ ಇಲಾಖೆ

ಬೆಂಗಳೂರು (ಜು.14):  ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಪ್ರವಾಸಿಗರನ್ನು ಆಕರ್ಷಿಸಲು ಜಲಪಾತದ ಸಮೀಪದಲ್ಲಿ ಪಂಚತಾರಾ ಹೋಟೆಲ್‌ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ ಗುಡ್ಡ ಕುಸಿತದಂತಹ ಪ್ರಕೃತಿ ವಿಕೋಪ ಸೇರಿದಂತೆ ಪರಿಸರ ಅಸಮತೋಲನ ಉಂಟಾಗಲಿದೆ ಎಂದು ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದರು.

ಆದರೆ ಈ ಬಗ್ಗೆ ಪ್ರತಿಕ್ರಿಯೆ  ನೀಡಿರುವ ಪ್ರವಾಸೋದ್ಯಮ ಇಲಾಖೆ  ನಿರ್ದೇಶಕಿ ಸಿಂಧೂ ರೂಪೇಶ್, ಪ್ರವಾಸೋದ್ಯಮ ಇಲಾಖೆ ಪ್ರಾಯೋಜಕತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಇದು ಪ್ರವಾಸಿಗರನ್ನು ಆಕರ್ಷಿಸುವ ಯೋಜನೆ. ಇದರಿಂದ ಪರಿಸರಕ್ಕೆ ಹಾನಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಜೋಗದಲ್ಲಿ ಸ್ಟಾರ್ ಹೋಟೆಲ್ ಗೆ ತೀವ್ರ ವಿರೋಧ
.
ಅಭಿವೃದ್ಧಿ ಹೆಸರಿನಲ್ಲಿ ಬೃಹತ್‌ ಕಟ್ಟಡಗಳನ್ನು ನಿರ್ಮಿಸುವುದರಿಂದ ಜಲಪಾತದ ಸುತ್ತಲ ಭಾಗಗಳಲ್ಲಿನ ಭೂಮಿ ಸಡಿಲಗೊಂಡು ಗುಡ್ಡ ಕುಸಿತದಂತಹ ವಿಕೋಪಗಳಿಗೆ ಆಸ್ಪದ ನೀಡಬಹುದು. ಜೊತೆಗೆ, ಮುಂದೊಂದು ದಿನ ಜಲಪಾತ ಮೂಲ ಸ್ವರೂಪವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು  ಪರಿಸರ ಹೋರಾಟಗಾರರು ಹೇಳಿದ್ದರು.
ಒಟ್ಟಿನಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯಕ್ಕೆ ಅಡಿ ಇಟ್ಟಿದ್ದು ಸವಾಲುಗಳು ನಿರ್ಮಾಣ ಆಗಿವೆ. ನಾಗರಿಕರ  ಮಾತುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. 

PREV
click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ