ವಿಶ್ವವಿಖ್ಯಾತ ಜೋಗ ಜಲಪಾತವನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ. ಯಾರಿಗೂ ಅನಿರ್ಧಿಷ್ಟಾವಧಿವರೆಗೆ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ [ಮಾ.16]: ಕೊರೋನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ವಾರ ರಾಜ್ಯವನ್ನು ಬಂದ್ ಮಾಡಿದೆ.
ಇದರ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿ ಜೋಗ ಜಲಪಾತವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತಕ್ಕೆ ದೇಶದ ವಿವಿಧೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಅನಿರ್ಧಿಷ್ಟಾವಧಿವರೆಗೆ ಬಂದ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಗಾಯಕ ಅರ್ಜುನ್ ಇಟಗಿಗೂ ತಟ್ಟಿದ ಕೊರೋನಾ ಭೀತಿ!...
ಪ್ರವಾಸಿಗರಿಗೆ ಜೋಗ ಜಲಪಾತಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದು, ಗೇಟ್ ಬಂದ್ ಮಾಡಲಾಗಿದೆ.
ಅಲ್ಲದೇ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ತ್ಯಾವರೆಕೊಪ್ಪ ಸಿಂಹಧಾಮಕ್ಕೂ ಪ್ರವೇಶ ನಿರ್ಭಂಧಿಸಲಾಗಿದೆ. ಮುಂಜಾಗೃತೆಗಾಗಿ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ.