ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ

By Kannadaprabha News  |  First Published Mar 30, 2023, 7:13 AM IST

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬಿಜೆಪಿ ಒಬಿಸಿ ಮೋರ್ಚಾದ ಪದಾಧಿಕಾರಿಗಳು ಬಿಜೆಪಿ ತೊರೆದು ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.


  ನಂಜನಗೂಡು :ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬಿಜೆಪಿ ಒಬಿಸಿ ಮೋರ್ಚಾದ ಪದಾಧಿಕಾರಿಗಳು ಬಿಜೆಪಿ ತೊರೆದು ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.

ತಾಲೂಕಿನ ಒಬಿಸಿ ಮೋರ್ಚಾದ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಶಿವಣ್ಣ, ನಂಜುಂಡಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಾಗಶೆಟ್ಟಿ, ಶಿವು, ಅಂಕನಾಯಕ, ಮಹದೇವಸ್ವಾಮಿ, ಮಹೇಶ್‌, ಎಸ್ಸಿ ಮೋರ್ಚಾ ಉಪಾಧ್ಯಕ್ಷ ಬಸವರಾಜು, ನಾರಾಯಣ್‌, ಬಸವರಾಜು, ರವಿಪ್ರಸಾದ್‌ ಮತ್ತು ಮಲ್ಕುಂಡಿ ಗ್ರಾಮಸ್ಥರು ಮತ್ತು ಬಿಜೆಪಿ ಮುಖಂಡರು, ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್‌ ಬಾವುಟ ನೀಡಿ ಶಾಲು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

Latest Videos

undefined

ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ. ವಿಜಯಕುಮಾರ್‌ ಮಾತನಾಡಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್‌ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಹಾಗೂ ಧ್ರುವನಾರಾಯಣ ಸುಪುತ್ರ ದರ್ಶನ್‌ ಧ್ರುವ ಅವರನ್ನು ಬೆಂಬಲಿಸಲು ಬಿಜೆಪಿಯ ಸುಮಾರು 50ಕ್ಕೂ ಹೆಚ್ಚಿನ ಜನರು ಕಾಂಗ್ರೆಸ್‌ನ್ನು ಸೇರ್ಪಡೆಯಾದರು. ಎಲ್ಲರಿಗೂ ಕಾಂಗ್ರೆಸ್‌ ಸ್ವಾಗತವನ್ನು ಬಯಸುತ್ತದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದರು.

ಕಾಂಗ್ರೆಸ್ ಗೆದ್ದರೆ ಮತ್ತೆ ಮೀಸಲು

ಬೆಂಗಳೂರು(ಮಾ.27): ‘ಚುನಾವಣೆ ಸಮಯದಲ್ಲಿ ಜನರ ದಾರಿತಪ್ಪಿಸಲು ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ಜನದ್ರೋಹಿ ತೀರ್ಮಾನಗಳನ್ನು ಕೈಗೊಂಡಿದೆ. ಈ ತೀರ್ಮಾನಗಳು ಕಾರ್ಯಸಾಧುವಲ್ಲ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಜನದ್ರೋಹಿ ತೀರ್ಮಾನಗಳನ್ನು ರದ್ದು ಮಾಡಿ ಲಿಂಗಾಯತರು, ಒಕ್ಕಲಿಗರು, ಎಸ್ಸಿ-ಎಸ್ಟಿ ಮತ್ತು ಅಲ್ಪಸಂಖ್ಯಾತರಿಗೆ ಸಿಗಬೇಕಾದ ನ್ಯಾಯವನ್ನು ನೀಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕರಣೆ ನಿರ್ಧಾರಗಳನ್ನು ಕಟುವಾಗಿ ಟೀಕಿಸಿದರು.

ರಾಹುಲ್‌ ಅನರ್ಹತೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ ಸತ್ಯಾಗ್ರಹ

ರಾಜ್ಯದಲ್ಲಿರುವ ‘ಬಿಟ್ರೇಯಲ್‌ ಜನತಾ ಪಕ್ಷ’ (ದ್ರೋಹಿ ಜನತಾ ಪಕ್ಷ) ಸೋಲಿನ ಆತಂಕಕ್ಕೆ ಒಳಗಾಗಿದೆ. ಹೀಗಾಗಿ ಎಲ್ಲ ಸಮಾಜಗಳನ್ನು ರಕ್ಷಣೆ ಮಾಡಬೇಕಾದವರು, ಅಧಿಕಾರ ದುರುಪಯೋಗ ಮಾಡಿಕೊಂಡು ಎಲ್ಲ ವರ್ಗದ ಜನರಿಗೆ ಮೋಸ ಮಾಡಲು ಮುಂದಾಗಿದ್ದಾರೆ. 75 ವರ್ಷಗಳ ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದೂ ಒಂದು ರಾಜ್ಯ ಸರ್ಕಾರ 90 ದಿನಗಳ ಅವಧಿಯಲ್ಲಿ ಮೂರು ಬಾರಿ ಮೀಸಲಾತಿ ವರ್ಗೀಕರಣ ಬದಲಿಸಿಲ್ಲ. ಯಾವುದೇ ಆಯೋಗಗಳು ಅಂತಿಮ ವರದಿ ನೀಡುವ ಮುನ್ನವೇ ಒಂದು ಚೀಟಿಯಲ್ಲಿ ಇವರಿಗೆ ಇಂತಿಷ್ಟುಮೀಸಲಾತಿ ಎಂದು ಬರೆದು ಹಂಚಲು ಮುಂದಾಗಿದ್ದಾರೆ. ಈ ರೀತಿ ಹಂಚಲು ಮೀಸಲಾತಿ ಏನು ಅವರ ಮನೆ ಆಸ್ತಿಯೇ ಎಂದು ಕಿಡಿಕಾರಿದರು.

ಲಿಂಗಾಯತ, ಒಕ್ಕಲಿಗರಲ್ಲಿ ಯಾರಾದರೂ ಅಲ್ಪಸಂಖ್ಯಾತ ಮೀಸಲಾತಿಯನ್ನು ಕಿತ್ತು ನಮಗೆ ಕೊಡಿ ಎಂದು ಕೇಳಿದ್ದರೇ? ಈಗಿರುವ ಶೇ.56ರಷ್ಟುಮೀಸಲಾತಿಯ ಜತೆಗೆ ಮೀಸಲಾತಿ ಮಿತಿಯನ್ನು ವಿಸ್ತರಣೆ ಮಾಡಿ ಈ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ನೀಡಬೇಕಿತ್ತು. ಲಿಂಗಾಯತರು ಶೇ.15ರಷ್ಟು, ಒಕ್ಕಲಿಗರು ಶೇ.12ರಷ್ಟುಮೀಸಲಾತಿ ಕೇಳಿದ್ದು, ಕೇವಲ 2% ಮೀಸಲಾತಿಯನ್ನು ಭಿಕ್ಷೆ ನೀಡುತ್ತಿದ್ದೀರಾ? ಅದರಲ್ಲೂ ಅಲ್ಪಸಂಖ್ಯಾತರ ಮೀಸಲಾತಿಯನ್ನು ಕಸಿದು ನಮಗೆ ನೀಡುತ್ತಿರುವುದೇಕೆ? ಆ ಮೂಲಕ ಸಮುದಾಯಗಳ ಮಧ್ಯೆ ದ್ವೇಷ ಬಿತ್ತಿ ಪರಸ್ಪರ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.

click me!