ನ್ಯಾಯಮೂರ್ತಿಗಳು, ನ್ಯಾಯಾಂಗ ಅಧಿಕಾರಿಗಳು ಮತ್ತು ಲೋಕಾಯುಕ್ತ, ಉಪ ಲೋಕಾಯುಕ್ತದಂತಹ ಮಹತ್ವದ ಸ್ಥಾನದಲ್ಲಿರುವವರು ಮಂಪರು ಪರೀಕ್ಷೆಗೆ ಮುಂದಾಗಬೇಕು ಹಾಗೂ ಈ ಹುದ್ದೆಯಲ್ಲಿರುವ ವ್ಯಕ್ತಿಗೆ ನೀಡಲಾದ ದೂರು ಸುಳ್ಳು ಎನಿಸಿದರೆ ದೂರುದಾರರನ್ನೂ ಮಂಪರು ಪರೀಕ್ಷೆಗೆ ಒಳಪಡಿಸಬೇಕು ಹೈಕೋರ್ಟ್ ನ್ಯಾಯಮೂತಿ ಪಿ.ಕೃಷ್ಣ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನ್ಯಾಯಮೂರ್ತಿಗಳು, ನ್ಯಾಯಾಂಗ ಅಧಿಕಾರಿಗಳು ಮತ್ತು ಲೋಕಾಯುಕ್ತ, ಉಪ ಲೋಕಾಯುಕ್ತದಂತಹ ಮಹತ್ವದ ಸ್ಥಾನದಲ್ಲಿರುವವರು ಮಂಪರು ಪರೀಕ್ಷೆಗೆ ಮುಂದಾಗಬೇಕು ಹಾಗೂ ಈ ಹುದ್ದೆಯಲ್ಲಿರುವ ವ್ಯಕ್ತಿಗೆ ನೀಡಲಾದ ದೂರು ಸುಳ್ಳು ಎನಿಸಿದರೆ ದೂರುದಾರರನ್ನೂ ಮಂಪರು ಪರೀಕ್ಷೆಗೆ ಒಳಪಡಿಸಬೇಕು ಹೈಕೋರ್ಟ್ ನ್ಯಾಯಮೂತಿ ಪಿ.ಕೃಷ್ಣ ಭಟ್ ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್ 7ರಂದು ಸೇವೆಯಿಂದ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಚಾರದ ಕುರಿತು ಚರ್ಚೆ ನಡೆಯಬೇಕಿದೆ. ನ್ಯಾಯಮೂರ್ತಿ ಹಾಗೂ ನ್ಯಾಯಾಂಗ ಅಧಿಕಾರಿಗಳಿಗೆ ರಕ್ಷಣೆ ಅಗತ್ಯವಾಗಿದೆ ಎಂದು ತಿಳಿಸಿದರು.
ಉನ್ನತ ನ್ಯಾಯಾಲಯಗಳ ನ್ಯಾಯಮೂರ್ತಿಗಳು ಬರುತ್ತಿದ್ದರೆ ವಿಚಾರಣಾಧೀನ ನ್ಯಾಯಾಲಯಗಳ ನ್ಯಾಯಾಧೀಶರು ಅವರನ್ನು ಬರಮಾಡಿಕೊಂಡು ಶಿಷ್ಟಚಾರ ಪಾಲಿಸಬೇಕು ಆದರೆ, ಎಲ್ಲಿಯವರೆಗೆ ಶಿಷ್ಟಾಚಾರದ ಮಿತಿಗಳನ್ನು ತಪ್ಪಿಸಿಕೊಳ್ಳುತ್ತಾರೋ ಅಲ್ಲಿಯವರೆಗೆ ಸ್ವತಂತ್ರವಾಗಿರಬಹುದು. ವಿಚಾರಣಾಧೀನ ನ್ಯಾಯಾಧೀಶರು ಆಡಳಿತ ವಿಭಾಗ ಹಾಗೂ ನೇಮಕಾತಿ ವಿಭಾಗಳನ್ನು ಆಯ್ಕೆ ಮಾಡಿಕೊಂಡರೆ, ಸಂಭವನೀಯ ಫೋನ್ ಕರೆಗಳು ಮತ್ತು ಚಿಟ್‌ಗಳನ್ನು ಲೆಕ್ಕಿಸದೆ ಕೆಲಸ ಮಾಡಿದರೆ ಸ್ವತಂತ್ರರಾಗುತ್ತಾರೆ ಎಂದು ತಿಳಿಸಿದರು.
ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟ ನಿಷೇಧ : ಆದೇಶ ಎತ್ತಿ ಹಿಡಿದ ಹೈಕೋರ್ಟ್
ಅಲ್ಲದೆ, ನಾನು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆಗಿದ್ದ ವೇಳೆ ಪೊಲೀಸರು ಹಾಗೂ ವಕೀಲರ ನಡುವೆ ಜಟಾಪಟಿ ನಡೆದಿತ್ತು. ಪೊಲೀಸ್ ಮತ್ತು ವಕೀಲರು ಪರಸ್ಪರ ಬೆರಳು ಮಾಡುತ್ತಿದ್ದರು. ಇಂತಹ ಸಂದಿಗ್ಧ ಅವಧಿಯು ನನಗೆ ಅತ್ಯಂತ ಸವಾಲಿನದ್ದಾಗಿತ್ತು ಎಂದು ಅವರು ಸ್ಮರಿಸಿದರು.
ಚುನಾವಣಾ ಪದ್ಧತಿಯಲ್ಲಿ ಬದಲಾವಣೆ ಅಗತ್ಯ
ಬೆಂಗಳೂರು ವಕೀಲರ ಸಂಘದ ವತಿಯಿಂದ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಮಾತನಾಡಿದ ನ್ಯಾ.ಪಿ.ಕೃಷ್ಣ ಭಟ್ ಅವರು, ಚುನಾವಣಾ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಹಾಗೂ ಸುಧಾರಣೆಯಾಗುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಹಿರಿಯ ವಕೀಲ ಉದಯ ಹೊಳ್ಳ ಮಾತನಾಡಿ, ನ್ಯಾ.ಕೃಷ್ಣ ಭಟ್ ಅವರ ಪ್ರಾಮಾಣಿಕತೆ ಮತ್ತು ವೃತ್ತಿನಿಷ್ಠೆ ಪ್ರಶ್ನೆ ಮಾಡುವಂತಿಲ್ಲ. ಆದರೆ, ಅವರು ತಮ್ಮ ಸೇವಾ ಅವಧಿಯಲ್ಲಿ ಅನೇಕ ಸಂಕಟಗಳನ್ನು ಎದುರಿಸಿದರು. ಅವರು ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆಯಲು ವಿಳಂಬವಾಯಿತು. ಅತ್ಯುತ್ತಮ ಗುಣ ಹೊಂದಿರುವ ಅವರಿಗೆ ಸರಿಯಾದ ಸಮಯದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಪದೋದನ್ನತಿ ನೀಡದೇ ಹೋದದ್ದು ಅನ್ಯಾಯ ಎಂದು ಬೇಸರ ವ್ಯಕ್ತಪಡಿಸಿದರು.
ವಿಳಂಬವಾಗಿ ದೂರು ಸಲ್ಲಿಸಿದ್ದಕ್ಕೆ ಎಫ್‌ಐಆರ್ ರದ್ದು, ದೂರಿನ ನೈಜತೆ ಬಗ್ಗೆ ಹೈಕೋರ್ಟ್ ಅನುಮಾನ
ಕಾರ್ಯಕ್ರಮದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.