ಏರ್‌ಪೋರ್ಟಲ್ಲಿ ಕೊರೋನಾ ತಪಾಸಣೆ ಪರಿಶೀಲಿಸಿದ ಸಚಿವ

Kannadaprabha News   | Asianet News
Published : Mar 01, 2020, 08:13 AM ISTUpdated : Mar 04, 2020, 01:17 PM IST
ಏರ್‌ಪೋರ್ಟಲ್ಲಿ ಕೊರೋನಾ ತಪಾಸಣೆ ಪರಿಶೀಲಿಸಿದ ಸಚಿವ

ಸಾರಾಂಶ

ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ತಪಾಸಣೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ.  

ಬೆಂಗಳೂರು(ಮಾ.01): ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಶನಿವಾರ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ತಪಾಸಣೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ.

ಪ್ರತಿ ನಿತ್ಯ ಸಾವಿರಾರು ಮಂದಿ ವಿದೇಶಿಗರು ಹಾಗೂ ವಿದೇಶಗಳಿಂದ ಬರುವ ಭಾರತೀಯರು ವಿಮಾನ ನಿಲ್ದಾಣಕ್ಕೆ ಬರುವುದರಿಂದ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಂತೆಯೇ ವಿಮಾನ ನಿಲ್ದಾಣದಲ್ಲಿ ತಪಾಸಣೆಗಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಷೇರುಪೇಟೆ ಮೇಲೆ ಮಾರಕ ಕೊರೋನಾ ದಾಳಿ

ಕೊರೋನಾ ವೈರಸ್‌ ಕುರಿತಾಗಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ಸರ್ಕಾರ ಕೂಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್‌ ಪರಿಶೀಲನೆ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವದ ಶೇ.70ರಷ್ಟು ಜನರಿಗೆ ಕೊರೋನಾ ಭೀತಿ : ಹೊರಬಿತ್ತು ಮತ್ತೊಂದು ಆತಂಕದ ವಿಚಾರ

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ