ಕಲಬುರಗಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್/ ಜಿಲ್ಲಾಧಿಕಾರಿ ಆದೇಶ/ ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಅನಿವಾರ್ಯ ಕ್ರಮ
ಕಲಬುರಗಿ(ಜು. 19) ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ರವಿವಾರ ಆದೇಶ ಹೊರಡಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ ಅನ್ವಯವಾಗುವುದಿಲ್ಲ.
ಲಾಕ್ ಡೌನ್ ಇಲ್ಲದೇ ಕೊರೋನಾ ಕಂಟ್ರೋಲ್ ಹೇಗೆ ಸಾಧ್ಯ
ಅಲ್ಲದೆ ಭಾನುವಾರದ ಲಾಕ್ ಡೌನ್ ಗೂ ಈ ಆದೇಶ ಅನ್ವಯಿಸುವುದಿಲ್ಲ ಎಂದು ಡಿ.ಸಿ.ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಿರಿಮೀರಿದ ಕೊರೋನಾ ಕಾರಣಕ್ಕೆ ಬೆಂಗಳೂರಿನಲ್ಲಿಯೂ ಒಂದು ವಾರದ ಲಾಕ್ ಡೌನ್ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಇನ್ನೊಂದು ಸುತ್ತಿನ ಲಾಕ್ ಡೌನ್ ಇಲ್ಲವೇ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.