ಮದುವೆ ವಯಸ್ಸಿನ ಮಗಳೊಂದಿಗೆ ನದಿಗೆ ಹಾರಿದ ತಾಯಿ: ಇಬ್ಬರೂ ಸಾವು

By Sathish Kumar KHFirst Published Feb 13, 2024, 12:36 PM IST
Highlights

ಮದುವೆ ವಯಸ್ಸಿಗೆ ಬಂದಿದ್ದ ಮಗಳಿಗೆ ಮದುವೆ ಮಾಡಿಕೊಟ್ಟು ಹೊಸ ಜೀವನ ಕಟ್ಟಿಕೊಡುವ ಬದಲು ಹೆತ್ತ ತಾಯಿಯೇ ಮಗಳನ್ನು ಕರೆದುಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಲಬುರಗಿ (ಫೆ.13): ಮದುವೆ ವಯಸ್ಸಿಗೆ ಬಂದಿದ್ದ ಮಗಳಿಗೆ ಗಂಡು ಹುಡುಕಿ ಮದುವೆ ಮಾಡಿ ಉತ್ತಮ ಜೀವನವನ್ನು ಕಲ್ಪಿಸಿಕೊಡಬೇಕಾದ ತಾಯಿಯೇ ಕಾಲೇಜು ಓದುತ್ತಿದ್ದ ಮಗಳನ್ನು ಕಳೆದುಕೊಂಡು ಹೋಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್‌ನಲ್ಲಿ ನಡೆದಿದೆ.

ಹೌದು, ತಾಯಿ-ಮಗಳು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮೃತರನ್ನು ಸುಮಲತಾ(45) ಹಾಗೂ ವರ್ಷಾ(22) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ಬಳಿಯ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿ ನಗರದ ಎಂ.ಬಿ.ನಗರ ಬಡಾವಣೆ ನಿವಾಸಿಗಳು ಆಗಿದ್ದಾರೆ. ಈ ಇಬ್ಬರೂ ನಿನ್ನೆ ಸಾಯಂಕಾಲದಿಂದ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸುತ್ತಿದ್ದರು. ಆದರೆ, ಬೆಳಗಾಗುವಷ್ಟರಲ್ಲಿ ಇಬ್ಬರ ಮೃತದೇಹಗಳು ಕಾಗಿಣಾ ನದಿಯ ತೀರದಲ್ಲಿ ಬಿದ್ದಿದ್ದವು. ಈ ಘಟನೆ ಶಹಬಾದ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಮದುವೆಯಾಗಿ ಎರಡೇ ವರ್ಷದಲ್ಲಿ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ!

ಮೃತ ದೇಹಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ, ಸ್ಥಳೀಯ ನುರಿತ ಈಜುಗಾರರು ಹಾಗೂ ಮೀನುಗಾರರ ಸಹಾಯದಿಂದ ಮೃತ ದೇಹಗಳನ್ನು ನದಿ ತೀರಕ್ಕೆ ತಂದು ಹಾಕಲಾಗಿದೆ. ನಂತರ, ಮೃತರ ಸಂಬಂಧಿಕರಿಗೆ ಮಾಹಿನಿ ನೀಡಿ, ಅವರನ್ನು ಕರೆಸಿದಾಗ ನಿನ್ನ ಸಂಜೆಯೇ ತಾಯಿ-ಮಗಳು ಮನೆಯಿಂದ ಹೊರಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ನಾಪತ್ತೆಯಾದ ಬಗ್ಗೆ ಪೊಲೀಸ್‌ ಠಾಣೆಗೆ ಯಾಕೆ ದೂರು ಕೊಟ್ಟಿಲ್ಲ ಎಂದು ವಿಚಾರಿಸಿದಾಗ, ತಾಯಿ-ಮಗಳು ಇಬ್ಬರೂ ಹೊರಗೆ ಹೋಗಿದ್ದರಿಂದ ಯಾರಾದರೂ ನೆಂಟರಿಷ್ಟರ ಮನೆಗೆ ಹೋಗಿರಬಹುದೆಂದು ಸುಮ್ಮನಾಗಿದ್ದೆವು ಎಂದು ತಿಳಿಸಿದ್ದಾರೆ. ಆದರೆ, ಇಲ್ಲಿ ಇಬ್ಬರೂ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಕೇಳಿ ಕುಟುಂಬಸ್ಥರು ಹಾಗೂ ನೆರೆಹೊರೆಯವರ ಆಕ್ರಂದನ ಮುಗಿಲು ಮುಟ್ಟಿತ್ತು. 

ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು. ಆದರೆ, ತಾಯಿ-ಮಗಳು ಸಾವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಕುಟುಂಬಸ್ಥರನ್ನು ವಿಚಾರಣೆ ನಡೆಸಲಿದ್ದಾರೆ.

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ: ಬೆಂಗಳೂರು(ಫೆ.13): ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂಜೀವಿನಿನಗರ ನಿವಾಸಿ ಕಾವ್ಯಶ್ರೀ(24) ಆತ್ಮಹತ್ಯೆ ಮಾಡಿಕೊಂಡವರು. ಪತಿ ಪ್ರವೀಣ್‌ ಕುಮಾರ್‌ ಹಾಗೂ ಆತನ ಪೋಷಕರ ವಿರುದ್ಧ ವರಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ತರಕಾರಿ ತರಲು ಹೋದ ಮಗಳು ಕೊಳೆತ ಶವವಾಗಿ ಸಿಕ್ಕಳು

ತುಮಕೂರು ಜಿಲ್ಲೆ ಕುಣಿಗಲ್‌ ಮೂಲದ ಪ್ರವೀಣ್‌ ಕುಮಾರ್‌ ಮತ್ತು ಕಾವ್ಯಶ್ರೀ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಒಂದು ವರ್ಷದ ಮಗುವಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ ಪ್ರವೀಣ್‌ ಕುಟುಂಬದೊಂದಿಗೆ ಸಂಜೀವಿನಿ ನಗರದಲ್ಲಿ ನೆಲೆಸಿದ್ದರು. ಪ್ರವೀಣ್‌ ಹಾಗೂ ಆತನ ಕುಟುಂಬದವರು ಕಾವ್ಯಶ್ರೀಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದರು ಎನ್ನಲಾಗಿದೆ. ಈ ನಡುವೆ ಪ್ರವೀಣ್‌ಗೆ ಬೇರೆ ಹೆಂಗಸಿನ ಜತೆಗೆ ಅನೈತಿಕ ಸಂಬಂಧವಿತ್ತು. ಈ ವಿಚಾರ ಕಾವ್ಯಶ್ರೀ ಅವರಿಗೆ ಗೊತ್ತಾಗಿ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಕಾವ್ಯಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

click me!