ಹಳ್ಳಿಯಿಂದ ರಾಜ್ಯಮಟ್ಟದವರೆಗೆ ಅಫಜಲಪುರ ತಾಲೂಕಿನ ಹವಳಗ ಗ್ರಾಮದ ಸೃಷ್ಟಿ ಪೂಜಾರಿ ಓಟ

Published : Oct 07, 2026, 07:57 AM IST
kalaburagi

ಸಾರಾಂಶ

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಪೂಜಾರಿ 200 ಮೀಟರ್ ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಲಬುರಗಿಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಈ ಸಾಧನೆ ಮಾಡಿದ್ದಾರೆ. ಗ್ರಾಮೀಣ ಪ್ರತಿಭೆಯ ಈ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ಜಿಲ್ಲಾಮಟ್ಟದ 2026–27ನೇ ಸಾಲಿನ ಕ್ರೀಡಾಕೂಟದ 200 ಮೀಟರ್ ಓಟ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ಅಫಜಲಪುರ ತಾಲೂಕಿನ ಹವಳಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಪೂಜಾರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಶಾಲೆ ಹಾಗೂ ಗ್ರಾಮದಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ.

ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸೃಷ್ಟಿ ಪೂಜಾರಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ಹವಳಗ ಗ್ರಾಮದಲ್ಲಿ ಸಂತಸ

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರತಿಭೆ, ಶ್ರಮ ಮತ್ತು ಆತ್ಮವಿಶ್ವಾಸದಿಂದ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದು ಶಾಲೆ ಹಾಗೂ ಹವಳಗ ಗ್ರಾಮಕ್ಕೆ ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರ ವೃಂದ, ಎಸ್‌ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಮತ್ತು ಸದಸ್ಯರು, ಪಾಲಕ-ಪೋಷಕರು, ಕ್ರೀಡಾಪ್ರೇಮಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಜಿಲ್ಲೆ ಶಾಲೆ ಹಾಗೂ ಗ್ರಾಮದ ಕೀರ್ತಿ ಮತ್ತಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಜಮಾದಾರ, ದೈಹಿಕ ಶಿಕ್ಷಣ ಶಿಕ್ಷಕ ಶೀಲಸಿದ್ದ ಹೂಗಾರ, ಸಂತೋಷ ಚವ್ಹಾಣ, ಜಗದೀಶ್ ಹಳ್ಯಾಳ್, ಶ್ರೀಶೈಲ ಜಗದಿ, ರಾಜು ಕಂಬಾರ, ಮಲ್ಲಿಕಾರ್ಜುನ ಆವೇರಿ, ಸೌಭಾಗ್ಯವತಿ ದೊಡ್ಮನಿ, ನೀಲಮ್ಮ ಪದಕಿ, ಜಯಶ್ರೀ ಸೊನ್ನ ಇತರರಿದ್ದರು

ಪರಿಶ್ರಮ ಮತ್ತು ಕ್ರೀಡೆಯ ಮೇಲಿನ ಆಸಕ್ತಿಯಿಂದ ಈ ಯಶಸ್ಸು

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಉತ್ತಮ ಅವಕಾಶ, ಸೂಕ್ತ ಮಾರ್ಗದರ್ಶನ ಮತ್ತು ನಿರಂತರ ಅಭ್ಯಾಸದಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ಸೃಷ್ಟಿ ಪೂಜಾರಿ ಅವರ ಸಾಧನೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಸೃಷ್ಟಿ ಅವರ ಪರಿಶ್ರಮ ಮತ್ತು ಕ್ರೀಡೆಯ ಮೇಲಿನ ಆಸಕ್ತಿಯಿಂದ ಈ ಯಶಸ್ಸು ದೊರೆತಿದೆ ಎಂದು ಹವಳಗಾ ಸ.ಹಿ.ಪ್ರಾ.ಶಾಲೆ ಮುಖ್ಯಶಿಕ್ಷಕ ಪರಮೇಶ್ವರ ಜಮಾದಾರ ಹೇಳಿದರು.

ಇದನ್ನೂ ಓದಿ: ಇಂದಿನಿಂದ ಮುದ್ದೇಬಿಹಾಳ, ತಾಳಿಕೋಟೆ ಕೆರೆಗಳಿಗೆ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ

PREV
Read more Articles on
click me!

Recommended Stories

ಇಂದಿನಿಂದ ಮುದ್ದೇಬಿಹಾಳ, ತಾಳಿಕೋಟೆ ಕೆರೆಗಳಿಗೆ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ
ಬರವಿದ್ದರೂ ಬತ್ತದ ರಾಮನಗರದ ನಾಲ್ಕು ಜಲಾಶಯಗಳು; ಅಪಾರ ನೀರು, ಅಂತರ್ಜಲ ಮಟ್ಟ ವೃದ್ಧಿ