ಕಲಬುರಗಿ: ಆರೋಗ್ಯ ಭಾಗ್ಯಕ್ಕೆ ಯುನೈಟೆಡ್‌ ಆಸ್ಪತ್ರೆ ಆಯ್ಕೆ

Published : Aug 05, 2023, 08:47 PM IST
ಕಲಬುರಗಿ: ಆರೋಗ್ಯ ಭಾಗ್ಯಕ್ಕೆ ಯುನೈಟೆಡ್‌ ಆಸ್ಪತ್ರೆ ಆಯ್ಕೆ

ಸಾರಾಂಶ

ಈ ಹಿಂದೆಯೇ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ಆಸ್ಪತ್ರೆಯನ್ನು ಕೇಂದ್ರ ಸರ್ಕಾರದ ಆರೊಗ್ಯ ಯೋಜನೆ (ಸಿಜಿಎಚ್‌ಎಸ್‌) ಅಡಿಯಲ್ಲಿ ಆರೋಗ್ಯ ಸೇವೆಗಳನ್ನು ನೀಡುವುದಕ್ಕೆ ಆಯ್ಕೆ ಮಾಡಿತ್ತು. ಈಗ ರಾಜ್ಯ ಸರ್ಕಾರವೂ ತನ್ನ ಆರೋಗ್ಯಭಾಗ್ಯ ಯೋಜನೆ ಅಡಿಯಲ್ಲಿ ಸೇವೆ ನೀಡುತ್ತಿರುವ ಆಸ್ಪತ್ರೆಗಳ ಪಟ್ಟಿಗೆ ಈ ಆಸ್ಪತ್ರೆಯನ್ನು ಸೇರಿಸಿದೆ.

ಬೀದರ್(ಆ.05):  ಕಾಂಗ್ರೆಸ್‌ ಆಡಳಿತದಲ್ಲಿ ಬೀದರ್‌ ಮಾರ್ಗವಾಗಿ ಚಲಿಸುವ ಒಂದು ರೈಲಿನ ಸಮಯವನ್ನೂ ಬದಲಾಯಿಸಲು ಆಗಿರಲಿಲ್ಲಾ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವ್ಯಂಗ್ಯವಾಡಿದ್ದಾರೆ. 

ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಇದರ ಜೊತೆಗೆ 2 ದಶಕಗಳ ಕಾಲ ನೆನೆಗುದಿಗೆ ಬಿದ್ದಿದ್ದ ಬೀದರ್‌-ಕಲಬುರಗಿ ರೈಲ್ವೆ ಲೈನ್‌ 1998-99ರಲ್ಲಿ ಪ್ರಾರಂಭಗೊಂಡು 2013-14ರವರೆಗೆ (16 ವರ್ಷದಲ್ಲಿ) 150 ಕೋಟಿ ಅನುದಾನದಲ್ಲಿ ಕೇವಲ 37 ಕಿಮೀ. ಪೂರ್ಣಗೊಳಿಸಿದ್ದರು. 2014ಕ್ಕೆ ನಾನು ಸಂಸದನಾದ ಮೇಲೆ ಕೇವಲ 3 ವರ್ಷದಲ್ಲಿ, 1392ಕೋಟಿ ಅನುದಾನದಲ್ಲಿ 73.193 ಕಿಮೀ ಕಾಮಗಾರಿ ಪೂರ್ಣಗೊಳಿಸಿ, ಅಕ್ಟೋಬರ್‌ 29, 2017ರಲ್ಲಿ ಪ್ರಧಾನಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಳಿಸಿರುವೆ ಎಂದು ತಿಳಿಸಿದ್ದಾರೆ.

25 ಕೋಟಿ ರು. ವೆಚ್ಚದಲ್ಲಿ ಬೀದರ್‌ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ಸಚಿವ ಭಗವಂತ ಖೂಬಾ

ಬೀದರ್‌ ಯಶವಂತಪೂರ ವಾಯಾ ಕಲಬುರಗಿ ಶೀಘ್ರ ಆರಂಭ:

ವಾಯಾ ಕಲಬುರಗಿ ಮಾರ್ಗವಾಗಿ ಈಗಾಗಲೆ ಬೆಂಗಳೂರು, ತಿರುಪತಿ, ಹುಬ್ಬಳ್ಳಿ, ಮುಂಬೈಗೆ ಪ್ರಾಯೋಗಿಕವಾಗಿ ರೈಲುಗಳು ಚಲಿಸಿವೆ, ಜನತೆಯ ಆಶಯದಂತೆ ಬೀದರ್‌ನಿಂದ ಯಶವಂತಪೂರ ವಾಯಾ ಕಲಬುರಗಿ ಮಾರ್ಗವಾಗಿ ಶೀಘ್ರದಲ್ಲಿ ಹೊಸ ರೈಲು ಪ್ರಾರಂಭವಾಗಲಿದೆ ಎಂದು ಭರವಸೆ ನೀಡಿದ್ದಾರೆ. ನನ್ನ ಈ ಒಂಬತ್ತು ವರ್ಷಗಳ ಅವಧಿಯಲ್ಲಿ ಐತಿಹಾಸಿಕ ಸಾಧನೆಗಳು ಆಗಿವೆ. ಇವುಗಳ ಸಾಲಿಗೆ ರೈಲ್ವೆ ನಿಲ್ದಾಣ ಅಭಿವೃದ್ದಿ ಕಾಮಗಾರಿಗಳು ಸಹ ಸೇರ್ಪಡೆಗೊಳ್ಳುತ್ತಿವೆ, ಇವುಗಳೆಲ್ಲವೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ಸಾಧ್ಯವಾಗುತ್ತಿವೆ ಎಂದು ಸಚಿವ ಖೂಬಾ ತಿಳಿಸಿದ್ದಾರೆ.

PREV
Read more Articles on
click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ