ಬಜೆಟ್‌ನಲ್ಲಿ ಕಳಸಾ ಬಂಡೂರಿ ನೀರಾವರಿ ಯೋಜನೆಗೆ ಆದ್ಯತೆ: ಸಿಎಂ

By Suvarna NewsFirst Published Feb 21, 2020, 12:29 PM IST
Highlights

ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ ಬಂಡೂರಿ ಯೋಜನೆ ಸಮಸ್ಯೆ ಬಗೆ ಹರಿದಿರುವುದು ಸಂತಸ ತಂದಿದೆ. ಈ ಬಜೆಟ್‌ನಲ್ಲಿ ಅದಕ್ಕೆ ಹಣ ತೆಗೆದಿಟ್ಟು ಆದಷ್ಟು ಬೇಗ ನೀರಾವರಿ ಯೋಜನೆ ಚಾಲನೆ ಮಾಡುವುದು ನನ್ನ ಮೊದಲ ಆದ್ಯತೆ ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. 

ಮೈಸೂರು(ಫೆ.21): ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ ಬಂಡೂರಿ ಯೋಜನೆ ಸಮಸ್ಯೆ ಬಗೆ ಹರಿದಿರುವುದು ಸಂತಸ ತಂದಿದೆ. ಈ ಬಜೆಟ್‌ನಲ್ಲಿ ಅದಕ್ಕೆ ಹಣ ತೆಗೆದಿಟ್ಟು ಆದಷ್ಟು ಬೇಗ ನೀರಾವರಿ ಯೋಜನೆ ಚಾಲನೆ ಮಾಡುವುದು ನನ್ನ ಮೊದಲ ಆದ್ಯತೆ ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. 

ಖಾಸಗಿ ಕಾರ್ಯನಿಮಿತ್ತ ಮೈಸೂರಿಗೆ ಆಗಮಿಸಿದ ಸಿಎಂ ಬಿ. ಎಸ್. ಯಡಿಯೂರಪ್ಪ ಮಾತನಾಡಿ, ನಾಡಿನ ಜನತೆಗೆ ಶಿವರಾತ್ರಿ ಹಬ್ಬದ ಶುಭಾಶಯ ಕೋರಿದ ಸಿಎಂ‌ ಯಡಿಯೂರಪ್ಪ ಮಾರ್ಚ್ 5ರಂದು ಬಜೆಟ್ ಮಂಡನೆ ಮಾಡುತ್ತಿದ್ದೇವೆ. ಈಗಾಗಲೇ ಅದರ ಬಗ್ಗೆ ಸಿದ್ಧತೆ ನಡೆದಿದೆ, 3 ನೇ ತಾರೀಖಿನ ಒಳಗೆ ಅದಕ್ಕೊಂದು ರೂಪ ಕೊಡುವ ಪ್ರಯತ್ನ ಆಗಲಿದೆ ಎಂದಿದ್ದಾರೆ.

ಅಮೂಲ್ಯಳನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಿ, ಗ್ರಾಮಸ್ಥರಿಂದ ಆಕ್ರೋಶ

ವಿಧಾನಸಭೆ ಅಧಿವೇಶನದಲ್ಲಿ ಸಾಕಷ್ಟು ನಡೆದಿದೆ. ಸರ್ಕಾರ ರಚನೆಯಾಗಿ 7 ತಿಂಗಳಾಗಿದೆ. ರಾಜ್ಯದ ಜನರಿಗೆ ನಮ್ಮ ಅಭಿವೃದ್ಧಿ ಕಾರ್ಯಕ್ರಮ ತಿಳಿಯಲು ಇನ್ನು 5-6ತಿಂಗಳು ಬೇಕಾಗಲಿದೆ. ಇನ್ನು 6 ತಿಂಗಳಲ್ಲಿ ಜನ ಮೆಚ್ಚುವ ಅಭಿವೃದ್ಧಿ ಕಾರ್ಯ ಮಾಡುವ ವಿಶ್ವಾಸ ಇದೆ. ನೆರೆ ಸಂತ್ರಸ್ತರಿಗೆ ಏನೇನು ಮಾಡಬೇಕೋ ನಮ್ಮ ಶಕ್ತಿಮೀರಿ ಮಾಡಿದ್ದೇವೆ. ಅಲ್ಲಿ ಇಲ್ಲಿ ಕೊರತೆ ಅಗಿದ್ರೆ ಅದನ್ನ ಸರಿಪಡಿಸಲಾಗುತ್ತೆ ಎಂದು ಭರವಸೆ ನೀಡಿದ್ದಾರೆ.

ಜನ ಬಿಜೆಪಿ ಸರ್ಕಾರದ ಮಂದಿದೆ ಬಡಿಗೆ ತೆಗೆದು ಹೊಡಿತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ 6 ತಿಂಗಳು‌ ಕಾಯಲಿ. ಅವರ ಬಣ್ಣ ಬಯಲು ಮಾಡಲು ನಾನು ಸಿದ್ದ ಇದ್ದೇನೆ. ಅಲ್ಲಿ ವರೆಗೆ ತಾಳ್ಮೆಯಿಂದ ಕಾಯಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮಂಗಳೂರು: CAA ವಿರೋಧಿ ಪ್ರತಿಭಟನೆಯಿಂದ ಅಮೂಲ್ಯ ಔಟ್..!

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ರಿ. ಕುಮಾರಸ್ವಾಮಿ 1.5 ವರ್ಷ ಸಿಎಂ ಆಗಿದ್ರಿ. ಇಬ್ಬರು ಏನು ಮಾಡಿದ್ರಿ..? ನಮ್ಮ ಸರ್ಕಾರ ಬಂದು 6 ತಿಂಗಳಾಗಿಲ್ಲ, ಪ್ರಶ್ನೆ ಮಾಡುತ್ತಿದ್ದೀರಿ. ಹಿಂದೆ ತಿರುಗಿ ನೋಡಿದ್ರೆ ಜನ ಬಡಿಗೆ ತೆಗೆದುಕೊಂಡು ನಿಮಗೆ ಹೊಡಿತಾರೋ ನಮಗೆ ಹೊಡಿತಾರೋ ಗೊತ್ತಾಗುತ್ತೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಿಎಂ ಬಿಎಸ್‌ವೈ ಜೊತೆಗೆ ಉಸ್ತುವಾರಿ ಸಚಿವ ವಿ.ಸೋಮಣ್ಣ, ಕೃಷಿ ಸಚಿವ ಬಿ.ಸಿ.ಪಾಟೀಲ್ ಸಾಥ್ ನೀಡಿದ್ದಾರೆ. ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ತಂಡ ಆಗಮಿಸಿದ್ದು, ಸ್ಥಳೀಯ ಬಿಜೆಪಿ ಮುಖಂಡರು ಸಿಎಂ ಅವರನ್ನು ಸ್ವಾಗತಿಸಿದ್ದಾರೆ.

click me!