ಕಲ್ಯಾಣ ಕರ್ನಾಟಕದ ನೀರಿನ ಸಮಸ್ಯೆ ನಿವಾರಣೆಗೆ ಮಹಾರಾಷ್ಟ್ರದ ಶಿರಪುರ ಮಾದರಿ, 200 ಕೋಟಿ ವೆಚ್ಚದಲ್ಲಿ ಜಲ ಸಂರಕ್ಷಣೆ

Published : Nov 28, 2026, 09:37 AM IST
kalyana karnataka water conservation

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂತರ್ಜಲಮಟ್ಟ ವೃದ್ಧಿ ಮತ್ತು ಮಳೆನೀರು ಸಂರಕ್ಷಣೆಗಾಗಿ 200 ಕೋಟಿ ರೂ. ವೆಚ್ಚದಲ್ಲಿ ಶಿರಪುರ ಮಾದರಿಯ ಜಲಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು (ನ.28): ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಲಂಸಂಪನ್ಮೂಲ ಸಮರ್ಥ ನಿರ್ವಹಣೆ, ಮಳ ನೀರು ಸಂರಕ್ಷಣೆ ಹಾಗೂ ಅಂತರ್ಜಲಮಟ್ಟ ವೃದ್ಧಿಗೆ ಮಹಾರಾಷ್ಟ್ರದ ಶಿರಪುರ ಮಾದರಿಯಲ್ಲಿ 200 ಕೋಟಿ ರು. ವೆಚ್ಚದ ಜಲಸಂರಕ್ಷಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಡಾ. ಅಜಯ್‌ ಧರ್ಮಸಿಂಗ್‌ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ ಸರಣಿ ಚೆಕ್‌ ಡ್ಯಾಂಗಳ ನಿರ್ಮಾಣ, ಹಳ್ಳ ಮತ್ತು ನಾಲೆಗಳ ಆಳ ಹಾಗೂ ಅಗಲ ಹೆಚ್ಚಿಸುವುದು, ಅಂತರ್ಜಲ ಮರುಪೂರಣ ಘಟಕಗಳ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ಧಿ ಸೇರಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಸ್ಥಳೀಯವಾಗಿಯೇ ಸಂಗ್ರಹಿಸಿ ಭೂಮಿಯಲ್ಲಿ ಇಂಗುವಂತೆ ಮಾಡುವುದು ಶಿರಪುರ ಮಾದರಿಯ ಪ್ರಮುಖ ಉದ್ದೇಶ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಯೋಜನೆಗೆ 200 ಕೋಟಿ ರು. ವ್ಯಯಿಸಲಾಗುತ್ತಿದೆ. ಅದರಲ್ಲಿ ಕಲಬುರಗಿ ಜಿಲ್ಲೆಗೆ 49.20 ಕೋಟಿ ರು, ರಾಯಚೂರು ಜಿಲ್ಲೆಗೆ 38.80 ಕೋಟಿ ರು, ಬಳ್ಳಾರಿ ಜಿಲ್ಲೆಗೆ 35 ಕೋಟಿ ರು, ಯಾದಗಿರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಿಗೆ ತಲಾ 21 ಕೋಟಿ ರು. ಹಾಗೂ ಬೀದರ್‌ ಜಿಲ್ಲೆಗೆ 14 ಕೋಟಿ ರು. ಮೀಸಲಿಡಲಾಗಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ತಲಾ 100 ಕೋಟಿ ರು. ಅನುದಾನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಜಿಲ್ಲೆಗೆ ₹49.20 ಕೋಟಿ, ರಾಯಚೂರು ಜಿಲ್ಲೆಗೆ ₹ 38.80 ಕೋಟಿ, ಬಳ್ಳಾರಿ ಜಿಲ್ಲೆಗೆ ₹35 ಕೋಟಿ, ಯಾದಗಿರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ತಲಾ ₹21 ಕೋಟಿ ಮತ್ತು ಬೀದರ್ ಜಿಲ್ಲೆಗೆ ₹14 ಕೋಟಿ ಮೀಸಲಿಡಲಾಗಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ತಲಾ ₹100 ಕೋಟಿ ಅನುದಾನ ನೀಡಿದ್ದು, ಒಟ್ಟು ₹200 ಕೋಟಿ ರು. ವೆಚ್ಚದಲ್ಲಿ ಕೈಗೊಳ್ಳಾಗುತ್ತಿರುವ ಕಾಮಗಾರಿಗಳನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಶಿರಪುರ ಮಾದರಿಯಲ್ಲಿ ಹಳ್ಳ ಮತ್ತು ನಾಲೆಗಳಿಗೆ ಅಡ್ಡಲಾಗಿ ಸರಣಿ ಚೆಕ್‌ಡ್ಯಾಂಗಳನ್ನು ನಿರ್ಮಿಸುವುದರಿಂದ ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬಹುದು. ಆಯಾ ಪ್ರದೇಶದ ಭೌಗೋಳಿಕ ಪರಿಸ್ಥಿತಿ, ಮಳೆಯ ಪ್ರಮಾಣ ಹಾಗೂ ನೀರಿನ ಲಭ್ಯತೆಯನ್ನು ಪರಿಗಣಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಜಲಸಂರಕ್ಷಣೆಯಲ್ಲಿ ಸುಸ್ಥಿರ ಫಲಿತಾಂಶ ಸಾಧಿಸುವುದು ಇಲಾಖೆಯ ಉದ್ದೇಶ ಎಂದು ಅಜಯ್‌ ಸಿಂಗ್‌ ಹೇಳಿದ್ದಾರೆ.

PREV
Read more Articles on
click me!

Recommended Stories

ಈಗ ನಮ್ಮ ಸರ್ಕಾರ ಇಲ್ಲ, ನಾನು ಸಿಎಂ ಅಲ್ಲ; ಆಶಾ ಸಮಸ್ಯೆ ಡಿಕೆಶಿ ಬಗೆಹರಿಸಬಹುದು: ಸಿದ್ದರಾಮಯ್ಯ
ಬೆಂಗಳೂರಲ್ಲಿ ದೇಶದ ಮೊದಲ ಬುಲೆಟ್ ಟ್ರೈನ್ ನಿರ್ಮಾಣದ ವಿಡಿಯೋ ಹಂಚಿಕೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌