ಶ್ರೀರಾಮುಲುಗೆ ಡಿಸಿಎಂ ಪಟ್ಟ ಕೊಡಿ| ವಾಲ್ಮೀಕಿ ಸಮಾಜ ಪಕ್ಷಭೇದ ಮೆರತು ಬಿಜೆಪಿ ಬೆಂಬಲಿಸಿದೆ| ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸಲು ಸಾಧ್ಯವಾಗಿದೆ|
ಹೊಸಪೇಟೆ(ಫೆ.01): ವಾಲ್ಮೀಕಿ ಸಮಾಜ ಬೆಂಬಲಿಸಿದ್ದರಿಂದಲೇ ಬಿಜೆಪಿ ರಾಜ್ಯದಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಕಂಪ್ಲಿಯ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸದಿಂದ ರಾಜ್ಯದ ಎಲ್ಲ ವಾಲ್ಮೀಕಿ ಸಮಾಜದ ಬಾಂಧವರು, ಪಕ್ಷಭೇದ ಮೆರತು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸಲು ಸಾಧ್ಯವಾಗಿದೆ ಎಂದಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈಗಾಗಲೇ ವಾಲ್ಮೀಕಿ ಸಮಾಜದ ರಾಜನಹಳ್ಳಿ ಗುರುಪೀಠದ ಪೀಠಾಧಿಪತಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ವಾಲ್ಮೀಕಿ ಸಮಾಜದ ಮುಖಂಡರಾದ ಶ್ರೀರಾಮುಲು ಹಾಗೂ ರಮೇಶ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರ ಜೊತೆಗೆ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿಯನ್ನು ಶೀಘ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.