ಕನ್ನಡ ನಾಮಫಲಕ: ಕರಪತ್ರ ಹಂಚುವ ಮೂಲಕ ಒತ್ತಾಯ

By Kannadaprabha News  |  First Published Jan 9, 2024, 10:21 AM IST

  ಕರ್ನಾಟಕ ಸರಕಾರ ಜಾರಿಗೆ ತಂದಿರುವ ಕರ್ನಾಟಕ ರಾಜ್ಯ ಶಾಫ್ ಅಂಡ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ 1963 ರ ಕಲಂ 2 ಎ ಅನ್ನು ನಗರದಲ್ಲಿರುವ ಎಲ್ಲಾ ಅಂಗಡಿ ಮುಂಗಟ್ಟುಗಳು ಅನುಸರಿಸುವಂತೆ ಒತ್ತಾಯಿಸಿ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ ನೇತೃತ್ವದಲ್ಲಿ ನಗರದ ಎಂ.ಜಿ.ರಸ್ತೆಯ ಅಂಗಡಿ, ಮುಂಗಟ್ಟುಗಳ ಮಾಲೀಕರಿಗೆ ಕರಪತ್ರ ಹಂಚುವ ಮೂಲಕ ಒತ್ತಾಯಿಸಲಾಯಿತು.


  ತುಮಕೂರು :  ಕರ್ನಾಟಕ ಸರಕಾರ ಜಾರಿಗೆ ತಂದಿರುವ ಕರ್ನಾಟಕ ರಾಜ್ಯ ಶಾಫ್ ಅಂಡ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ 1963 ರ ಕಲಂ 2 ಎ ಅನ್ನು ನಗರದಲ್ಲಿರುವ ಎಲ್ಲಾ ಅಂಗಡಿ ಮುಂಗಟ್ಟುಗಳು ಅನುಸರಿಸುವಂತೆ ಒತ್ತಾಯಿಸಿ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ ನೇತೃತ್ವದಲ್ಲಿ ನಗರದ ಎಂ.ಜಿ.ರಸ್ತೆಯ ಅಂಗಡಿ, ಮುಂಗಟ್ಟುಗಳ ಮಾಲೀಕರಿಗೆ ಕರಪತ್ರ ಹಂಚುವ ಮೂಲಕ ಒತ್ತಾಯಿಸಲಾಯಿತು.

ಕರುನಾಡ ವಿಜಯಸೇನೆಯ ಹತ್ತಾರು ಕಾರ್ಯಕರ್ತರು ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ ಅವರ ನೇತೃತ್ವದಲ್ಲಿ ನಗರದ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಎಂ.ಜಿ.ರಸ್ತೆ, ಕೆ.ಆರ್. ಬಡಾವಣೆ, ವಿವೇಕಾನಂದ ರಸ್ತೆ, ಹೊರಪೇಟೆ ಮುಖ್ಯ ರಸ್ತೆಗಳಲ್ಲಿರುವ ಅಂಗಡಿ ಮುಂಗಟ್ಟುಗಳ ಬಳಿ ತೆರಳಿ, ಸರಕಾರದ ನಿಯಮದಂತೆ ಕರ್ನಾಟಕದಲ್ಲಿ ಅಂಗಡಿ ತೆರೆದು ವ್ಯಾಪಾರ ಮಾಡುವ ಅಂಗಡಿಗಳ ಮಾಲೀಕರು ಕರ್ನಾಟಕ ರಾಜ್ಯ ಶಾಫ್ಸ್ ಅಂಡ್ ಎಷ್ಟಾಬ್ಲಿಷ್‌ಮೆಂಟ್ ಅಕ್ಟ್ ಅನ್ವಯ ತಮ್ಮ ಅಂಗಡಿ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು.

Tap to resize

Latest Videos

undefined

60:40ರ ಅನುಪಾತದಲ್ಲಿ, ಕನ್ನಡ ನಾಮಫಲಕ ಶೇ.60 ರಷ್ಟು ದೊಡ್ಡದಾಗಿದ್ದು, ಉಳಿದ ಭಾಷೆಯ ನಾಮಫಲಕ ಶೇ.೪೦ ರಷ್ಟಿರಬೇಕು ಎಂಬ ನಿಯಮ ರೂಪಿಸಿದೆ. ಇದರ ಅಧಿಸೂಚನೆಯನ್ನು ಹೊರಡಿಸಿದೆ. ಒಂದು ವೇಳೆ ಈ ನಿಯಮ ಪಾಲಿಸದಿದ್ದರೆ ಸ್ಥಳೀಯ ಆಡಳಿತ ಅಂತಹ ಅಂಗಡಿ ಮುಂಗಟ್ಟುಗಳಿಗೆ ನೋಟಿಸ್‌ ನೀಡಿ, ನಿಗದಿತ ಅವಧಿಯೊಳಗೆ ಪಾಲಿಸದೇ ಇದ್ದಲ್ಲಿ ದಂಡ ವಿಧಿಸುವ ಅವಕಾಶವಿದೆ. ಆದರೆ ಇದುವರೆಗೂ ತುಮಕೂರು ನಗರದಲ್ಲಿ ಜಾರಿಯಾಗದ ಹಿನ್ನೆಲೆಯಲ್ಲಿ ಕರಪತ್ರ ವಿತರಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ಅರುಣ್ ಕೃಷ್ಣಯ್ಯ ತಿಳಿಸಿದರು.

ಸುಗ್ರೀವಾಜ್ಞೆ ಮೂಲಕ ಜಾರಿ

ಬೆಂಗಳೂರು (ಜ.6) : ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು’ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇತ್ತೀಚೆಗೆ ತಮ್ಮ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ ಮಾಡುವುದಾಗಿ ತಿಳಿಸಿದ್ದರು. 

ಬೆಂಗಳೂರಿನ ವಾಣಿಜ್ಯ ಮಳಿಗೆಗಳಿಗೆ ದೊಡ್ಡ ಕನ್ನಡ ನಾಮಫಲಕ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು!

ಅಲ್ಲದೆ, ಸುಗ್ರೀವಾಜ್ಞೆ ಮೂಲಕ ಜಾರಿಯಾಗಲಿರುವ ತಿದ್ದುಪಡಿ ಕಾನೂನು ಅನ್ವಯ 2024ರ ಫೆಬ್ರುವರಿ 28ರ ಒಳಗಾಗಿ ರಾಜ್ಯದಲ್ಲಿನ ಎಲ್ಲಾ ‘ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನರಂಜನಾ ಕೇಂದ್ರ ಮತ್ತು ಹೋಟೆಲ್‌’ ಮುಂತಾದವುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು. ಉಳಿದ ಶೇ.40ರಷ್ಟು ಜಾಗದಲ್ಲಿ ಮಾತ್ರ ಇತರೆ ಭಾಷೆ ಇರಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

click me!