ಬಿಬಿಎಂಪಿ ವಿಭಜನೆಯಿಂದ ಕನ್ನಡಿಗರ ಹಿತಾಸಕ್ತಿಗೆ ಧಕ್ಕೆ: ಕರವೇ ನಾರಾಯಣಗೌಡ ಆತಂಕ

Published : Jun 15, 2024, 07:08 AM IST
ಬಿಬಿಎಂಪಿ ವಿಭಜನೆಯಿಂದ ಕನ್ನಡಿಗರ ಹಿತಾಸಕ್ತಿಗೆ ಧಕ್ಕೆ: ಕರವೇ ನಾರಾಯಣಗೌಡ ಆತಂಕ

ಸಾರಾಂಶ

ಬೆಂಗಳೂರು ಮಹಾನಗರ ಇತ್ತೀಚೆಗೆ ವಲಸಿಗರ ಸಂತೆಯಾಗಿ ಹೋಗಿದೆ. ಬೆಂಗಳೂರಿನ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ ಚಹರೆಯನ್ನೇ ಈ ವಲಸಿಗರು ಬದಲಾಯಿಸುತ್ತಿದ್ದಾರೆ. ಇಲ್ಲಿನ ಮೂಲನಿವಾಸಿ ಕನ್ನಡಿಗರೇ ಅತಂತ್ರ ಸ್ಥಿತಿಯಲ್ಲಿ ಬದುಕುವಂತಾಗಿದೆ. 

ಬೆಂಗಳೂರು (ಜೂ.15): ಆಡಳಿತ ವಿಕೇಂದ್ರೀಕರಣ ನೆಪದಲ್ಲಿ ಬಿಬಿಎಂಪಿಯನ್ನು ಐದು ಪಾಲಿಕೆಗಳನ್ನಾಗಿ ವಿಭಜಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ಇದು ಕನ್ನಡಿಗರ ಹಿತಾಸಕ್ತಿಗೆ ಮಾರಕವಾಗಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಮಹಾನಗರ ಇತ್ತೀಚೆಗೆ ವಲಸಿಗರ ಸಂತೆಯಾಗಿ ಹೋಗಿದೆ. ಬೆಂಗಳೂರಿನ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ ಚಹರೆಯನ್ನೇ ಈ ವಲಸಿಗರು ಬದಲಾಯಿಸುತ್ತಿದ್ದಾರೆ. ಇಲ್ಲಿನ ಮೂಲನಿವಾಸಿ ಕನ್ನಡಿಗರೇ ಅತಂತ್ರ ಸ್ಥಿತಿಯಲ್ಲಿ ಬದುಕುವಂತಾಗಿದೆ. ನಗರದ ಸ್ವಾಸ್ಥ್ಯ, ಸಾಮರಸ್ಯಕ್ಕೆ ಧಕ್ಕೆ ತಂದು ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಂಗಳೂರನ್ನು ವಿಭಜಿಸಿ ಐದು ಪಾಲಿಕೆಗಳನ್ನಾಗಿ ಮಾಡಿದರೆ, ವಲಸಿಗರು ಹೆಚ್ಚು ಇರುವ ಕಡೆ ಪಾಲಿಕೆಗಳನ್ನು ಇದೇ ಜನರು ನಿಯಂತ್ರಣಕ್ಕೆ ತಂದುಕೊಂಡರೆ ಕನ್ನಡಿಗರು ಎಲ್ಲಿಗೆ ಹೋಗಬೇಕು? ಬೆಳಗಾವಿ ಪರಿಸ್ಥಿತಿ ಬೆಂಗಳೂರಿನಲ್ಲೂ ನಿರ್ಮಾಣಗೊಳ್ಳಬೇಕೇ ಎಂದು ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಪಾಲಿಕೆ ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ವಲಯಗಳನ್ನು ರಚಿಸಿ, ವಿಕೇಂದ್ರೀಕರಣದ ಹೆಜ್ಜೆ ಇಟ್ಟಿದೆ. ಎಂಟು ವಲಯಗಳಿಗೆ ಐಎಎಸ್‌ ಅಧಿಕಾರಿಗಳನ್ನೇ ವಲಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅಲ್ಲದೆ ಜಂಟಿ ಆಯುಕ್ತರನ್ನೂ ನೇಮಿಸಿದೆ. ಸರ್ಕಾರ ಈ ವಲಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿ ತುಂಬಿ ಮೂಲ ಸೌಕರ್ಯಗಳನ್ನು ಹೆಚ್ಚಿಸಿ ಸ್ವಾಯತ್ತತೆಯನ್ನು ಒದಗಿಸಲು ಮೊದಲು ಆದ್ಯತೆ ನೀಡಬೇಕು. ಹೀಗಾದಾಗ ಮಾತ್ರ ವಿಕೇಂದ್ರೀಕರಣದ ಉದ್ದೇಶ ಈಡೇರಲಿದ್ದು, ಆಡಳಿತವೂ ಸುಗಮವಾಗಲಿದೆ ಎಂದಿದ್ದಾರೆ.

ಏನೋ ಆಗಿಹೋಯ್ತು ಸಾರ್‌... ತನಿಖೆ ವೇಳೆ ಪೊಲೀಸರೆದುರು ದರ್ಶನ್‌ ಕಣ್ಣೀರು: ನಖರಾ ಬಿಡದ ಪವಿತ್ರಾಗೌಡ

ಬೆಂಗಳೂರು ನಗರದ ಆಡಳಿತ ನಿರ್ವಹಣೆಯ ದೃಷ್ಟಿಯಿಂದ ವಿಭಜನೆಯೊಂದೇ ಪರಿಹಾರವಲ್ಲ. ಆಡಳಿತ ವಿಕೇಂದ್ರೀಕರಣಕ್ಕೆ ಬೇರೆ ದಾರಿಗಳೂ ಇವೆ. ಪಾಲಿಕೆ ವಿಭಾಜನೆಯು ನಿಶ್ಚಿತವಾಗಿ ಕನ್ನಡಿಗರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಆಡಳಿತ ಸುಧಾರಣೆಯ ನಿಟ್ಟಿನಲ್ಲಿ ಸರ್ಕಾರದ ಕಾಳಜಿಯನ್ನು ನಾವು ಪ್ರಶ್ನಿಸುತ್ತಿಲ್ಲ. ಆದರೆ, ಇದು ಕನ್ನಡಿಗರ ಪಾಲಿಗೆ ಸಮಸ್ಯೆ ತಂದೊಡ್ಡುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವಿಭಜನೆ ಯತ್ನವನ್ನು ನಿಲ್ಲಿಸಬೇಕು ಎಂದು ನಾರಾಯಣಗೌಡ ಒತ್ತಾಯಿಸಿದ್ದಾರೆ.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ