ಬೆಳಗಾವಿಯಲ್ಲಿ ಆಂಗ್ಲ ಭಾಷೆಯ ಬ್ಯಾನರ್: ಖಾಕಿ ಸಮ್ಮುಖದಲ್ಲೇ ಹರಿದ ಕರವೇ ಕಾರ್ಯಕರ್ತರು

By Kannadaprabha News  |  First Published Dec 1, 2023, 12:00 AM IST

ಕಾರ್ಯಕರ್ತರನ್ನು ಪೊಲೀಸರು ತಡೆಯಲು ಮುಂದಾದರು. ಆದರೂ ಪೊಲೀಸ್‌ ಪಡೆಯ ಮಧ್ಯೆಯೇ ಕೆಲವರು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಬಂದ ಕೆಲ ಕಾರ್ಯಕರ್ತರು ಆಂಗ್ಲ ಭಾಷೆಯ ಬ್ಯಾನರ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. 


ಬೆಳಗಾವಿ(ಡಿ.01): ನಗರದಲ್ಲಿ ಆಂಗ್ಲ ಭಾಷೆಯಲ್ಲಿ ಬ್ಯಾನರ್ ಗಳನ್ನು ಅಳವಡಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಆಂಗ್ಲ ಭಾಷೆಯ ಬ್ಯಾನರ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ರಾಣಿ ಚನ್ನಮ್ಮ ವೃತ್ತದ ಬಳಿ ಆಂಗ್ಲ ಭಾಷೆಯಲ್ಲಿದ್ದ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಮೊದಲು ಧರಣಿ ನಡೆಸಿದರು. ಬಳಿಕ ಒಂದೊಂದೆ ಬ್ಯಾನರ್ ಗಳನ್ನು ಹರಿದು ಹಾಕಲು ಮುಂದಾಗುವುದನ್ನು ಅರಿಯದ ಪೊಲೀಸರು ಸುಮ್ಮನೆ ನಿಂದುಕೊಂಡಿದ್ದನ್ನು ಬಂಡವಾಳ ಮಾಡಿಕೊಂಡ ಪ್ರತಿಭಟನಾಕಾರರು ಬ್ಯಾನರ್‌ಗಳನ್ನು ಹರಿದು ಹಾಕಲು ಮುಂದಾದರು. ಈ ವೇಳೆ ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಮುಂದಾದರು. ಆದರೂ ಪೊಲೀಸ್‌ ಪಡೆಯ ಮಧ್ಯೆಯೇ ಕೆಲವರು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಬಂದ ಕೆಲ ಕಾರ್ಯಕರ್ತರು ಆಂಗ್ಲ ಭಾಷೆಯ ಬ್ಯಾನರ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕಪ್ಪು ಮಸಿ ಬಳಿಯಲು ತಂದಿದ್ದ ಬಾಟಲಿಗಳನ್ನು ಕಿತ್ತುಕೊಳ್ಳಲು ಹೋಗಿದ್ದ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕಪ್ಪು ಮಸಿ ಬಿದ್ದಿತ್ತು.

Tap to resize

Latest Videos

ತಾಯಿ ಸ್ಥಾನದಲ್ಲಿ‌ ನಿಂತು ನಿಮ್ಮ ಬೇಡಿಕೆ ಈಡೇರಿಸುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಪೊಲೀಸರು ಮತ್ತು ಕರವೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದಂತೆ ಎಚ್ಚತ್ತ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸರು ಸುಮಾರು 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ಮಾತನಾಡಿ, ಕರ್ನಾಟಕ ರಾಜ್ಯದ ಸುವರ್ಣ ಸಂಭ್ರಮ ಸಂದರ್ಭದಲ್ಲಿ ಎಲ್ಲಾ ಜಾಹೀರಾತು ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸುವಂತೆ ನಿಯಮವಿದ್ದರೂ ಕೂಡ ಪಾಲಿಕೆ ಅಧಿಕಾರಿಗಳು ಅಮಿಷಗಳಿಗೆ ಬಲಿಯಾಗಿ ಕನ್ನಡ ಕಗ್ಗೊಲೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ನಾವೇ ಆಂಗ್ಲ ಭಾಷೆಯಲ್ಲಿರುವ ಜಾಹೀರಾತು ಫಲಕಗಳನ್ನು ಕಿತ್ತು ಹಾಕುತ್ತಿದ್ದೇವೆ. ಮುಂದೆ ಎಂತಹ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದರು‌.

ಕರವೇ ಜಿಲ್ಲಾಧ್ಯಕ್ಷ ದೀಪದ ಗುಡಗನಟ್ಟಿ ಮಾತನಾಡಿ, ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕ್ಕೆ ಅವರು ಮುಂದಾಗಿಲ್ಲ. ಇದು ಹೋರಾಟದ ಪ್ರಾರಂಭವಾಗಿದ್ದು, ಮುಂದೆ ನಮ್ಮ ಕಾರ್ಯಕರ್ತರು ಎಲ್ಲೆಲ್ಲಿ ಆಂಗ್ಲ ಭಾಷೆಯ ಜಾಹೀರಾತು ಫಲಕಗಳು ಇರುತ್ತವೊ ಅವುಗಳನ್ನು ತೆರವುಗೊಳಿಸುವ ಕೆಲಸ ಮಾಡಲಿದ್ದಾರೆ. ಈ ವೇಳೆ ಏನಾದರೂ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸರೇ ಹೊಣೆ ಎಂದು ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ರುದ್ರಗೌಡ ಪಾಟೀಲ, ವಿಶಾಲಗೌಡ ಪಾಟೀಲ, ಗಣೇಶ ರೋಕಡೆ, ಸುರೇಶ ಗವನ್ನವರ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

ಪಾಲಿಕೆ ಸದಸ್ಯನ ಬಂಧನಕ್ಕೂ, ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಇಲ್ಲಿನ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ನಾಡದ್ರೋಹಿ ಎಂಇಎಸ್‌ ಮಹಾಮೇಳಾವ ಆಯೋಜಿಸಲು ಮುಂದಾಗಿದೆ. ಆದ್ದರಿಂದ ಮಹಾಮೇಳಾವ್‌ಗೆ ಅನುಮತಿ ನೀಡದಂತೆ ಆಗ್ರಹಿಸಿ ಕರವೇ (ನಾರಾಯಣಗೌಡ ಬಣ) ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಗಡಿ, ಭಾಷೆ ವಿಷಯವಾಗಿ ಒಂದಿಲ್ಲೊಂದು ವಿವಾದ ಸೃಷ್ಟಿಸಿತ್ತಾ ಬಂದಿರುವ ನಾಡದ್ರೋಹಿ ಎಂಇಎಸ್‌ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್‌ ಆಯೋಜಿಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಯಾವುದೇ ಕಾರಣಕ್ಕೂ ಮಹಾಮೇಳಾವ್ ಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಮಹಾಂತೇಶ ರಣಗಟ್ಟಿಮಠ, ವಾಜೀದ್‌ ಹಿರೇಕೊಡಿ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

click me!