ಮತಗಟ್ಟೆಗಳಿಗೆ ತೆರಳಿದ‌ ಚುನಾವಣಾ ಸಿಬ್ಬಂದಿ; ಸುಗಮ ಮತದಾನಕ್ಕೆ ಬೆಳಗಾವಿಯಲ್ಲಿ ಸಕಲ ಸಿದ್ಧತೆ

By Ravi JanekalFirst Published May 9, 2023, 9:53 PM IST
Highlights

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳ ಮತಗಟ್ಟೆಗಳಿಗೆ ‌ನಿಯೋಜನೆಗೊಂಡಿರುವ ಇಪ್ಪತ್ತು ಸಾವಿರಕ್ಕೂ ಅಧಿಕ ಚುನಾವಣಾ ಸಿಬ್ಬಂದಿಯು ವಿದ್ಯುನ್ಮಾನ ಮತಯಂತ್ರಗಳು ಹಾಗೂ ಇತರೆ ಸಾಮಗ್ರಿಗಳ ಜತೆಗೆ ಮತಗಟ್ಟೆಗಳಿಗೆ ತೆರಳಿದರು.

ಬೆಳಗಾವಿ (ಮೇ.9): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳ ಮತಗಟ್ಟೆಗಳಿಗೆ ‌ನಿಯೋಜನೆಗೊಂಡಿರುವ ಇಪ್ಪತ್ತು ಸಾವಿರಕ್ಕೂ ಅಧಿಕ ಚುನಾವಣಾ ಸಿಬ್ಬಂದಿಯು ವಿದ್ಯುನ್ಮಾನ ಮತಯಂತ್ರಗಳು ಹಾಗೂ ಇತರೆ ಸಾಮಗ್ರಿಗಳ ಜತೆಗೆ ಮತಗಟ್ಟೆಗಳಿಗೆ ತೆರಳಿದರು.

ಜಿಲ್ಲೆಯ ಹದಿನೆಂಟು ಮತಕ್ಷೇತ್ರ(Assembly constituency)ಗಳಲ್ಲಿ 4434 ಮತಗಟ್ಟೆಗಳು ಮತ್ತು 5 ಹೆಚ್ಚುವರಿ(ಆಕ್ಜಿಲರಿ) ಮತಗಟ್ಟೆಗಳು ಸೇರಿದಂತೆ ಒಟ್ಟು 4439 ಮತಗಟ್ಟೆಗಳಿವೆ. ಈ ಎಲ್ಲ ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಚುನಾವಣಾ ಸಿಬ್ಬಂದಿ ತಮ್ಮ ಮತಗಟ್ಟೆಗಳಿಗೆ ‌ತೆರಳಿರುತ್ತಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ(Belgum DC Nitesh patil) ಅವರು ತಿಳಿಸಿದ್ದಾರೆ.

Karnataka Assembly Election ಚುನಾವಣೆಗೂ ಮೊದಲು ಕನ್ನಡಿಗರಿಗೆ ಪ್ರಧಾನಿ ಮೋದಿ ಮಹತ್ವದ ಸಂದೇಶ!

ಜಿಲ್ಲಾಧಿಕಾರಿಗಳು ಸ್ವತಃ ಬೆಳಗಾವಿ ನಗರ ಹಾಗೂ ಹುಕ್ಕೇರಿ ಮತಕ್ಷೇತ್ರಗಳ ಶ್ರೀ ಕಾಡಸಿದ್ಧೇಶ್ವರ ಪಬ್ಲಿಕ್ ಶಾಲೆಯ ಆವರಣದಲ್ಲಿ ಇರುವ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿದರಲ್ಲದೇ ಎಲ್ಲ ಸಿಬ್ಬಂದಿ ನಿಗದಿತ ಬಸ್ ಗಳ ಮೂಲಕ ಸುರಕ್ಷಿತವಾಗಿ ಮತಗಟ್ಟೆಗಳಿಗೆ ತೆರಳುವುದನ್ನು ಖಚಿತಪಡಿಸಿದರು.

ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದ್ದು, ಚುನಾವಣಾ ಪ್ರಕ್ರಿಯೆಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ ಅವರು ಕೂಡ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡುವ ಮೂಲಕ ಭದ್ರತಾ ಕ್ರಮಗಳನ್ನು ಪರಿಶೀಲಿಸಿದರು. ಕೇಂದ್ರೀಯ ಪೊಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ತುಕಡಿಗಳನ್ನು ಸಂಬಂಧಿಸಿದ ಮತಗಟ್ಟೆಗಳಿಗೆ ಕಳಿಸುವ ವ್ಯವಸ್ಥೆ ಮಾಡಿದರು.

ಕಲಬುರಗಿ ದಕ್ಷಿಣ ಕ್ಷೇತ್ರ: ಮತದಾರರಿಗೆ ಹಣ ಹಂಚಿಕೆ ಪ್ರಕರಣ-ಪೋಲೀಸ್ ಆಯುಕ್ತರಿಗೆ ಜಿಲ್ಲಾಧಿಕಾರಿಯಿಂದಲೇ ದೂರು

ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯನ್ನು ಸುಗಮ, ಶಾಂತಿಯುತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಎಲ್ಲರೂ ತಪ್ಪದೇ ಮತ ಚಲಾಯಿಸುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮನವಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

click me!