ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸೀಫ್ (ರಾಜು) ಸೇಠ್ ಗೆಲುವು ಸಾಧಿಸುತ್ತಿದ್ದಂತೆ ನಗರದ ಆರ್‌ಪಿಡಿ ಕ್ರಾಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಪರ್ಯಾಯವಾಗಿ ಹಿಂದೂಪರ ಸಂಘಟನೆಯ ನೂರಕ್ಕೂ ಹೆಚ್ಚು ಕಾರ್ಯಕತರು ಶನಿವಾರ ತಡರಾತ್ರಿ ಟಿಳಕವಾಡಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.
ಬೆಳಗಾವಿ (ಮೇ.14) : ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸೀಫ್ (ರಾಜು) ಸೇಠ್ ಗೆಲುವು ಸಾಧಿಸುತ್ತಿದ್ದಂತೆ ನಗರದ ಆರ್‌ಪಿಡಿ ಕ್ರಾಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಪರ್ಯಾಯವಾಗಿ ಹಿಂದೂಪರ ಸಂಘಟನೆಯ ನೂರಕ್ಕೂ ಹೆಚ್ಚು ಕಾರ್ಯಕತರು ಶನಿವಾರ ತಡರಾತ್ರಿ ಟಿಳಕವಾಡಿ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಹನುಮಾನ ಚಾಲಿಸಾ ಹಾಗೂ ಮಂತ್ರಗಳನ್ನು ಪಠಣ ಮಾಡಿದರು. ಅಲ್ಲದೇ ಪಾಕಿಸ್ತಾನ ಪರ ಘೋಷಣೆ ಕೂಗಿದ ಐದಕ್ಕೂ ಹೆಚ್ಚು ಜನರ ವಿರುದ್ಧ ಟಿಳಕವಾಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶನಿವಾರ ನಗರದ ಆರ್‌ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ(Belgum north congress candidate asif shet) ರಾಜು ಸೇಠ್ ಗೆಲವು ಸಾಧಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಆರ್‌ಪಿಡಿ ಕ್ರಾಸ್‌ನಲ್ಲಿ ಗೆಲುವಿನ ಸಂಭ್ರಮಾಚರಣೆ ಮಾಡಲು ಬೆಂಬಲಿಗರು ಜಮಾಯಿಸಿದ್ದರು. ಈ ಗುಂಪಿನಲ್ಲಿ ಕೆಲ ಯುವಕರು, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಶಾಂತಿ ಕದಡಲು ಯತ್ನಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಘೋಷಣೆ ಕೂಗಿ ಗುಂಪಿನಲ್ಲಿದ್ದ ಜನರಿಗೆ ಎಚ್ಚರಿಕೆ ನೀಡಿದ್ದರು.
'ಕೈ' ಗೆದ್ದ ಬೆನ್ನಲ್ಲೇ ಗಲಾಟೆ ಶುರು: ಬಿಜೆಪಿ ಮುಖಂಡನ ಮನೆಗೆ ಹೊಕ್ಕು ಕಾಂಗ್ರೆಸ್ಸಿಗರಿಂದ ಹಲ್ಲೆ
ದೇಶ ವಿರೋಧಿ ಘೋಷಣೆ ಕೂಗಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ, ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ತಡರಾತ್ರಿ ನಗರದ ತಿಳಕವಾಡಿ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾರ್ಯಕರ್ತರು, ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ನಂತರ ಠಾಣೆ ಎದುರು ರಸ್ತೆ ಮೇಲೆ ಕುಳಿತು ಹನುಮಾನ ಚಾಲಿಸಾ ಹಾಗೂ ಮಂತ್ರಗಳನ್ನು ಪಠಣ ಮಾಡಿದರು. ಪಾಕ್ ಪರ ಘೋಷಣೆ ಕೂಗಿದ ಐದಕ್ಕೂ ಹೆಚ್ಚು ಜನರ ವಿರುದ್ಧ ಟಿಳಕವಾಡಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಕುರಿತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕಕುಮಾರ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.