ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‌

Kannadaprabha News   | stockphoto
Published : Nov 30, 2020, 07:36 AM IST
ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‌

ಸಾರಾಂಶ

ಡಿಸೆಂಬರ್ 5ಕ್ಕೆ ಮರಾಠ ಪ್ರಾಧಿಕಾರ ವಿರೋಧಿಸಿ ಕರ್ನಾಟಕ ಬಂದ್ ನಡೆಯಲಿದೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ವಾಟಾಲ್ ನಾಗರಾಜ್ ಹೇಳಿಕೆ ನೀಡಿದ್ದಾರೆ. 

ಮೈಸೂರು (ನ.30): ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಹಾಗೂ ಕೂಡಲೇ ಮರಾಠ ಪ್ರಾಧಿಕಾರ ಹಿಂಪಡೆಯಲು ಆಗ್ರಹಿಸಿ ಕನ್ನಡ ಒಕ್ಕೂಟದವರು ಮೈಸೂರು- ಬೆಂಗಳೂರು ರಸ್ತೆಯಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಿಗ್ನಲ್‌ನಲ್ಲಿ ಪ್ರತಿಭಟಿಸಿದರು.

 ಇದಕ್ಕೂ ಮುನ್ನ ವಾಟಾಳ್‌ ನಾಗರಾಜ್‌ ಮಾತನಾಡಿ, ರಾಜ್ಯದ ವಿವಿಧ ಕನ್ನಡಪರ ಸಂಘಟನೆಗಳು ಈಗಾಗಲೇ ನಿಗದಿ ಪಡಿಸಿರುವಂತೆ ಡಿ.5 ರಂದು ಕರ್ನಾಟಕ ಬಂದ್‌ ನಡೆಯುವುದು ಶತಸಿದ್ಧ ಎಂದರು.

ಸಿಎಂ ವಾರ್ನಿಂಗ್‌ಗೆ ಡೋಂಟ್‌ ಕೇರ್, ಸರ್ಕಾರಕ್ಕೆ ಸವಾಲ್ ಹಾಕಿದ ವಾಟಾಳ್ ನಾಗರಾಜ್ ...

 ನ.30 ರವರೆಗೆ ರಾಜ್ಯ ಸರ್ಕಾರ ಮರಾಠ ಪ್ರಾಧಿಕಾರ ಹಿಂಪಡೆಯಲು ಅವಕಾಶ ನೀಡಿದ್ದೇವೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಠ ಮಾಡಬಾರದು. ಒಂದು ವೇಳೆ ಸರ್ಕಾರ ತನ್ನ ನಿರ್ಧಾರ ಬದಲಿಸದಿದ್ದರೆ ಡಿ.1 ರಂದು ವಿಜಯಪುರಕ್ಕೆ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದರು.

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ