ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ: ಗದಗ ಮೂಲದ ಯೋಧ ಹುತಾತ್ಮ

Suvarna News   | Asianet News
Published : Dec 26, 2019, 02:37 PM IST
ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ: ಗದಗ ಮೂಲದ ಯೋಧ ಹುತಾತ್ಮ

ಸಾರಾಂಶ

ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ರಾಜ್ಯದ ಯೋಧ ಹುತಾತ್ಮ| ಜಿಲ್ಲೆಯ ರೋಣ ತಾಲೂಕಿನ ಕರಮುಡಿ ಗ್ರಾಮದ ವೀರೇಶ ಕುರಟ್ಟಿ ಹುತಾತ್ಮ ಯೋಧ| ಪಾಕ್ ಸೇನೆಗೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ| ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಇಬ್ಬರು ಯೋಧರ ಸಾವು|  

ಗದಗ(ಡಿ.26): ಜಮ್ಮು ಮತ್ತು ಕಾಶ್ಮೀರದ ರಾಮಪುರ ಹಾಗೂ ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ರಾಜ್ಯದ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ  ಕರಮುಡಿ ಗ್ರಾಮದ ವೀರೇಶ ಕುರಟ್ಟಿ ಹುತಾತ್ಮ ಯೋಧರಾಗಿದ್ದಾರೆ. 

ಬುಧವಾರ ಬೆಳಗ್ಗೆ 11.30 ಸುಮಾರಿಗೆ ಪಾಕ್ ಸೇನೆ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡಿದೆ. ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವೀರೇಶ ಕುರಟ್ಟಿ ಪಾರ್ಥಿವ ಶರೀರ ಇಂದು ಅಥವಾ ನಾಳೆ ಗ್ರಾಮಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಬೆಳಗಾವಿ ವಿಮಾನ ನಿಲ್ದಾಣದ‌ ಮೂಲಕ ವೀರೇಶ ಕುರಟ್ಟಿ ಪಾರ್ಥಿವ ಶರೀರ ಸ್ವಗ್ರಾಮ ಕರಮುಡಿಗೆ ಬರುವ ಸಾಧ್ಯತೆ ಇದೆ.
 

PREV
click me!

Recommended Stories

ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್; 4 ವರ್ಷ ಜೈಲು ಶಿಕ್ಷೆ, 51 ಲಕ್ಷಕ್ಕೂ ಅಧಿಕ ಅಕ್ರಮ ಆಸ್ತಿ ಮುಟ್ಟುಗೋಲು!
Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ