‘ಡಿ.9ರ ನಂತರ ಸರ್ಕಾರ ಬದಲಾಗುವ ಭವಿಷ್ಯ : ಬಿಜೆಪಿಯಿಂದ ಹಲವರ ಪಕ್ಷಾಂತರ’

Published : Dec 02, 2019, 11:05 AM IST
‘ಡಿ.9ರ ನಂತರ ಸರ್ಕಾರ ಬದಲಾಗುವ ಭವಿಷ್ಯ : ಬಿಜೆಪಿಯಿಂದ ಹಲವರ ಪಕ್ಷಾಂತರ’

ಸಾರಾಂಶ

ರಾಜ್ಯದಲ್ಲಿ ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದ್ದು, 15 ಕ್ಷೇತ್ರಗಳ ಫಲಿತಾಂಶ 9 ರಂದು ಪ್ರಕಟವಾಗಲಿದೆ. ಇದಾದ ಬಳಿಕ ರಾಜ್ಯದಲ್ಲಿರುವ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 

ಹುಣಸೂರು (ಡಿ.02):  ಉಪಚುನಾವಣೆ ಫಲಿತಾಂಶ ಬಂದು ಡಿ.9ರ ನಂತರ ರಾಜ್ಯದಲ್ಲಿ ಈಗಿನ ಸರ್ಕಾರ ಬದಲಾವಣೆಯಾಗುತ್ತದೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ.

ಹುಣಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಜ್ಯೋತಿಷಿ ಅಲ್ಲ, ನಂಗೆ ಜ್ಯೋತಿಷ್ಯ ಗೊತ್ತಿಲ್ಲ. ಆದರೆ, ಪರಿಸ್ಥಿತಿ ನೋಡಿದರೆ ಸರ್ಕಾರ ಬದಲಾಗುತ್ತೆ ಅನಿಸುತ್ತಿದೆ. ಬಿಜೆಪಿಯ ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಮತ್ತೊಂದು ಚುನಾವಣೆ ಸಹ ಬರಲಿದೆ. ನಮ್ಮ ಪಕ್ಷದಿಂದ ಯಾರೂ ಬಿಜೆಪಿಗೆ ಹೋಗಲ್ಲ. ಈಗ ಹೋಗಿರುವ ಅನರ್ಹರೆ ನನಗೆ ಫೋನ್‌ ಮಾಡಿ ಯಾಕಾದರೂ ಹೋದ್ವೋ, ಇದೆಲ್ಲ ನಮಗೆ ಬೇಕಿತ್ತಾ ಅನ್ನುತ್ತಿದ್ದಾರೆ ಎಂದರು.

ನಾವು ಒಳ ಒಪ್ಪಂದ ಮಾಡಿಕೊಂಡಿಲ್ಲ:

ಉಪಚುನಾವಣೆಯಲ್ಲಿ ಜೆಡಿಎಸ್‌ ಒಳಒಪ್ಪಂದ ಮಾಡಿಕೊಂಡಿಲ್ಲ. ಬಹುಷಃ ಬಿಜೆಪಿ ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿರಬೇಕು. ಉಪಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತಿದ್ದೇವೆ. ನಾವಂತೂ ಕಾಂಗ್ರೆಸ್‌ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಲೋಕಸಭೆಯಲ್ಲಿ ಇದೆ ರೀತಿ ಒಳ ಒಪ್ಪಂದ ಮಾಡಿಕೊಂಡು ನಿಖಿಲ್ ಹಾಗೂ ದೇವೇಗೌಡರನ್ನು ಸೋಲಿಸಿದ್ದಾರೆ. ಈಗಲೂ ಅದೇ ರೀತಿ ಒಪ್ಪಂದ ಮಾಡಿಕೊಂಡಿರಬೇಕು ಎಂದು ಮೂದಲಿಸಿದರು.

ಹುಷಾರಾದ ನಂತರ ಜಿಟಿಡಿ ಬರುತ್ತಾರೆ- ಪ್ರಜ್ವಲ್‌

ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಬೆಂಬಲಿಗರು ಜೆಡಿಎಸ್‌ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಜಿಟಿಡಿ ಜೆಡಿಎಸ್‌ಗೆ ಸಹಾಯ ಮಾಡುತ್ತಾರೆ. ಜಿಟಿಡಿಯವರಿಗೆ ಸಣ್ಣ ಪುಟ್ಟಭಿನ್ನಾಭಿಪ್ರಾಯ ಇದೆ. ಅದನ್ನೂ ಬಗೆಹರಿಸಿಕೊಳ್ಳುತ್ತೇವೆ. ಹಾಗಂತ ಅವರೇನು ಕಾಂಗ್ರೆಸ್‌ಗೆ ಸಹಾಯ ಮಾಡುತ್ತಿಲ್ಲ. ಹುಣಸೂರಿನಲ್ಲಿ ಕಾಂಗ್ರೆಸ್‌ ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅಂತ ಅಪಪ್ರಚಾರ ಮಾಡಲಾಗುತ್ತಿದೆ. ಆ ರೀತಿಯ ಯಾವುದೇ ಒಪ್ಪಂದ ಜೆಡಿಎಸ್‌ ಮಾಡಿಕೊಂಡಿಲ್ಲ. ನಮ್ಮ ಯಾವ ನಾಯಕರು ಈ ಬಗ್ಗೆ ಹೇಳಿಕೆ ಕೊಟ್ಟಿಲ್ಲ. ಆದರೂ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಅಂತವರು ಫೀಲ್ಡ್‌ನಲ್ಲಿ ನಮ್ಮನ್ನು ಎದುರಿಸಲಿ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಸವಾಲು ಹಾಕಿದರು.

PREV
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!