ಆಫ್ಘಾನಿಸ್ತಾನ ವಿಚಾರದಲ್ಲಿ ಮೌನಕ್ಕೆ ಜಾರಿದ ಕಾಂಗ್ರೆಸ್‌: ಕೈ ನಾಯಕರ ವಿರುದ್ಧ ಹರಿಹಾಯ್ದ ಕಟೀಲ್‌

Suvarna News   | Asianet News
Published : Aug 21, 2021, 02:10 PM ISTUpdated : Aug 21, 2021, 02:12 PM IST
ಆಫ್ಘಾನಿಸ್ತಾನ ವಿಚಾರದಲ್ಲಿ ಮೌನಕ್ಕೆ ಜಾರಿದ ಕಾಂಗ್ರೆಸ್‌: ಕೈ ನಾಯಕರ ವಿರುದ್ಧ ಹರಿಹಾಯ್ದ ಕಟೀಲ್‌

ಸಾರಾಂಶ

*  ಮೂರು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ *  ರಾಜ್ಯದಲ್ಲಿ ಸಿಎಂ ಬೊಮ್ಮಾಯಿ‌ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗ್ತಿದೆ *  ಗಲಭೆ ಎಬ್ಬಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ   

ಕಲಬುರಗಿ(ಆ.21): ಆಫ್ಘಾನಿಸ್ತಾನ ವಿಚಾರದಲ್ಲಿ ಕಾಂಗ್ರೆಸ್ ಏನ್ ಹೇಳಬೇಕೋ ಅದು ಹೇಳ್ತಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಮೌನಕ್ಕೆ ಜಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗೆ ವಿಚಾರಗಳಿಲ್ಲ, ವಿರೋಧಿಸುವ ವಿಚಾರಗಳಿವೆ. ಸಿಎಎ, ಎನ್‌ಆರ್‌ಸಿ ಸೇರಿದಂತೆ ಪ್ರತಿಯೊಂದು ವಿಷಯಗಳಲ್ಲಿ ಗಲಭೆ ಎಬ್ಬಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಜನರ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನ ಕಾಂಗ್ರೆಸ್ ನಿರಂತರವಾಗಿ  ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇಂದು(ಶನಿವಾರ) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದೆ.  ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಎಂದು ತಿಳಿಸಿದ್ದಾರೆ. 

'ಬೆಳಗಾವಿ ಪಾಲಿಕೆ ಬಿಜೆಪಿ ಗೆಲುವು ನಿಶ್ಚಿತ'

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಮೂರು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ. ಬೆಳಗಾವಿಯಲ್ಲಿ 25 ವರ್ಷದಿಂದ ಪಕ್ಷದ ಚಿನ್ಹೆ ಅಡಿಯಲ್ಲಿ ನಿಂತಿಲ್ಲ. ಆದರೆ ಈ ಬಾರಿ ಚಿನ್ಹೆ ಅಡಿಯಲ್ಲಿ ಅಖಾಡಕ್ಕೆ ಇಳಿಯಲಿದ್ದೇವೆ ಎಂದು ಹೇಳಿದ್ದಾರೆ. 
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!