ಬಂದ್‌ ಬಿಸಿ: ಮಂಗಳೂರಲ್ಲಿ ತಿರುಪತಿ ಬಸ್‌ಗೆ ಕಲ್ಲು

By Suvarna News  |  First Published Feb 13, 2020, 8:51 AM IST

ರಾಜ್ಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕು ಎಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ (ಫೆ.13) ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಮಂಗಳೂರಿನ ಫರಂಗಿಪೇಟೆ ಎಂಬಲ್ಲಿ ಆಂಧ್ರ ಸಾರಿಗೆ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ.


ಮಂಗಳೂರು(ಫೆ.13): ರಾಜ್ಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕು ಎಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ (ಫೆ.13) ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಮಂಗಳೂರಿನ ಫರಂಗಿಪೇಟೆ ಎಂಬಲ್ಲಿ ಆಂಧ್ರ ಸಾರಿಗೆ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ತಿರುಪತಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಆಂಧ್ರ ಸರ್ಕಾರಿ ಬಸ್ಸಿನ ಮೇಲೆ ಕಲ್ಲೆಸೆಯಲಾಗಿದೆ. ಮಂಗಳೂರಲ್ಲಿ ಕಲ್ಲು ತೂರಾಟ ನಡೆದಿದ್ದು, ಇಂದು ಕರ್ನಾಟಕ ಬಂದ್ ಹಿನ್ನೆಲೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.

Latest Videos

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಬೆಂಬಲ ವ್ಯಕ್ತವಾಗಿದ್ದು, ಇನ್ನೂ ಕೆಲವೆಡೆ ಎಂದಿನಂತೆ ವಾಹನಗಳ ಓಡಾಟ ಮುಂದುವರಿದಿದೆ. ಮಂಗಳೂರಿನಲ್ಲಿ ಆಂಧ್ರ ಸಾರಿಗೆ ಬಸ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

click me!