ಬೆಂಗಳೂರಿನಲ್ಲಿ ಮದ್ಯ ನಿಷೇಧ : ಪೊಲೀಸ್ ಕಮಿಷನರ್ ಆದೇಶ

By Web Desk  |  First Published Nov 28, 2019, 1:51 PM IST

ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆದೇಶ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆದೇಶ ನೀಡಿದ್ದಾರೆ.


ಬೆಂಗಳೂರು [ನ.28]: ರಾಜ್ಯದಲ್ಲಿ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, ಎಲ್ಲಾ ಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿಯೂ ಕೂಡ ಭಾರಿ ತಯಾರಿ ನಡೆಯುತ್ತಿದೆ. ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. 

ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. 

Latest Videos

undefined

ಕೆ.ಆರ್. ಪೇಟೆ ಅಖಾಡಕ್ಕೆ ಜೋಡೆತ್ತು ಎಂಟ್ರಿ? ಯಾರ ಪರ ತಾರಾಬಲ?...

ಚುನಾವಣೆ ನಡೆಯುವ ಬೆಂಗಳೂರಿನ ಕೆ.ಆರ್.ಪುರಂ, ಶಿವಾಜಿನಗರ, ಮಹಾಲಕ್ಷ್ಮಿ ‌ಲೇ ಔಟ್, ಯಶವಂತಪುರ ಕ್ಷೇತ್ರಗಳಲ್ಲಿ ಮದ್ಯದ ಅಂಗಡಿ ಬಂದ್ ಮಾಡಲು ಆದೇಶ ನೀಡಲಾಗಿದೆ.  ಡಿಸೆಂಬರ್ 3ರ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ರಾತ್ರಿ 12 ಗಂಟೆಯವರೆಗೂ ಕೂಡ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. 

ಉಪ ಚುನಾವಣೆ : 5 ದಿನ ಮದ್ಯ ಮಾರಾಟ ನಿಷೇಧ...

ಮದ್ಯದ ಅಂಗಡಿಗಳನ್ನು ತೆರೆದು ಮಾರಾಟ ಮಾಡುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಚುನಾವಣಾ ಫಲಿತಾಂಶದ ದಿನವಾದ ಡಿಸೆಂಬರ್ 9 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 9 ರಂದು 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

click me!