'ಮೂರರಲ್ಲಿ ಎರಡು ಕಡೆ ಕೈ ಗೆಲುವು : ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ'

Kannadaprabha News   | Asianet News
Published : Mar 22, 2021, 12:08 PM IST
'ಮೂರರಲ್ಲಿ ಎರಡು ಕಡೆ ಕೈ ಗೆಲುವು : ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ'

ಸಾರಾಂಶ

ರಾಜ್ಯದಲ್ಲಿ ಏಪ್ರಿಲ್ 17ಕ್ಕೆ ಉಪ ಚುನಾವಣೆ  ನಡೆಯುತ್ತಿದೆ.  ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ಖಚಿತ ಎಂದು ಮುಖಂಡರೋರ್ವರು ಹೇಳಿದ್ದಾರೆ. 

ಮಂಡ್ಯ (ಮಾ.22): ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮಾಜಿ ಸಚಿವ ಎನ್. ಚೆಲುವರಾಯಸ್ವಾಮಿ  ಹೇಳಿದರು. 

ಕಾಂಗ್ರೆಸ್ ಅಧಿಕಾರಕ್ಕೆ 

ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ವಿರೋಧಪಕ್ಷದ ಸ್ಥಾನದಲ್ಲೇ ಶಾಶ್ವತವಾಗಿಕೂರಿಸುವುದಾಗಿ ಸಿಎಂ ಯಡಿಯೂರಪ್ಪನವರು ಹೇಳಿರುವ ಬಗ್ಗೆ ಕೇಳಿದಾಗ  ಮುಖ್ಯಮಂತ್ರಿ ಯಡಿಯೂರಪ್ಪ ಹಾಗೆ ಹೇಳುವುದು ಸಹಜ.  ಮುಂದಿನ ಚುನಾವಣೆಯಲ್ಲಿ  ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. 

ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡಿದ ಡಿಕೆಶಿ ..

ಅದು ಇತ್ತೀಚೆಗೆ ನಡೆದಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಾಬೀತಾಗಿದೆ. ಕಳೆದ ಲೋಕಸಭಾ ಚುನಾವಣೆಯಿಂದ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಾರಂಭಿಸಿದೆ ಎಂದರು. 

ಕಳೆದ ವಿಧಾನಸಭಾ ಚುನಾವಣೆ ವೇಳೆ ಜಾತಿ ಅಲೆ ಎದ್ದಿದ್ದರಿಂದ ಕಾಂಗ್ರೆಸ್ ನಿರೀಕ್ಷತ ಯಶಸ್ಸು ಗಳಿಸಲಾಗಲಲ್ಲ. ಆದರೆ ಈ ಬಾರಿ ಹಾಗಾಗುವುದಿಲ್ಲ. ಕಾಂಗ್ರೆಸ್ ಎಲ್ಲೆಡೆ ಸಂಘಟನಾತ್ಮಕವಾಗಿದ್ದು ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸುವುದಾಗಿ ಹೇಳಿದರು. 

PREV
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?