ಸಂಪುಟ ವಿಸ್ತರಣೆ : ಸಿಎಂ ನಿರ್ಧಾರಕ್ಕೆ ನಾವು ಬದ್ಧ

Kannadaprabha News   | Asianet News
Published : Oct 05, 2020, 08:43 AM IST
ಸಂಪುಟ ವಿಸ್ತರಣೆ : ಸಿಎಂ ನಿರ್ಧಾರಕ್ಕೆ ನಾವು ಬದ್ಧ

ಸಾರಾಂಶ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮ  ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ

ಬೆಳಗಾವಿ (ಅ.05): ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಹಾಗೂ ಜಿಲ್ಲೆಯ ಹಾಲಿ ಸಚಿವರನ್ನು ಸಂಪುಟದಿಂದ ಕೈ ಬಿಡುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜೆಡಿಎಸ್‌ ಪ್ರಮುಖ ಮುಖಂಡ ರಾಜೀನಾಮೆ : ಕಣ್ಣೀರಿಟ್ಟು ಭಾವುಕ

ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದೇವೆ ಎಂದರು.

PREV
click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ