ಮುಖ್ಯಮಂತ್ರಿ BSYಗೂ ಅಂಟಿದ ಕೊರೋನಾ, ಆಸ್ಪತ್ರೆಗೆ ದಾಖಲು

Published : Aug 03, 2020, 12:03 AM ISTUpdated : Aug 03, 2020, 10:26 AM IST
ಮುಖ್ಯಮಂತ್ರಿ BSYಗೂ ಅಂಟಿದ ಕೊರೋನಾ, ಆಸ್ಪತ್ರೆಗೆ ದಾಖಲು

ಸಾರಾಂಶ

ಕರ್ನಾಟಕ ಸಿಎಂಗೂ ಅಂಟಿದ ಕೊರೋನಾ/ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢ/ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ತಿಳಿಸಿದ ಸಿಎಂ/ ನನ್ನ ಸಂಪರ್ಕದಲ್ಲಿ ಇದ್ದವರು ಎಚ್ಚರ ವಹಿಸಿ

ಬೆಂಗಳೂರು(ಆ. 02)  ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಕೊರೋನಾ ಅಂಟಿಕೊಂಡಿದೆ. ಕೇಂದ್ರ ಸಚಿವ ಅಮಿತ್ ಶಾ ಗೆ ಕೊರೋನಾ ತಾಗಿದ್ದ ನಂತರ ಇದೊಂದು ಆಘಾತಕಾರಿ ಸುದ್ದಿ ಬಂದಿದೆ.

"

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ  ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಭಾನುವಾರ ಕರ್ನಾಟಕದಲ್ಲಿ ಕೊರೋನಾ ಆರ್ಭಟ

77  ವರ್ಷದ ಯಡಿಯೂರಪ್ಪ ಕೊರೋನಾ ವಿರುದ್ಧ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದವರು. ತಾವೇ ಮುಂದೆ ನಿಂತು ರಾಜ್ಯದ ಪರಿಸ್ಥಿತಿ ನಿಭಾಯಿಸುತ್ತ ಬಂದಿದ್ದಾರೆ.  ಇದೀಗ ಸೋಂಕು ಅವರನ್ನೇ ಆವರಿಸಿದೆ.  

 

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ